ಬೆಂಗಳೂರು ಸೆ 02 : ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರೊಂದಿಗೆ ಸೆ. 5 ರಂದು ಚರ್ಚೆ ನಡೆಸುವುದಾಗಿ ಸಿ.ಎಂ. ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆಯಾಗುತ್ತಿದ್ದು ಇದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ, ಕಳೆದ 15 ದಿನಗಳ ಅವಧಿಯಲ್ಲಿ 2 ಬಾರಿ ಗ್ಯಾಸ್ ಬೆಲೆ ಕೂಡ ಏರಿಕೆಯಾಗಿದ್ದು, ಇ ಹಿನ್ನಲೆಯಲ್ಲಿ ಕೇಂದ್ರ ಸಚಿವರೊಂದಿಗಿನ ಮಾತುಕತೆ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅನಿಲ ಮತ್ತು ತೈಲ ಹೆಚ್ಚಳವು ಅಂತಾರಾಷ್ಟ್ರೀಯ ಮಾರಕಟ್ಟೆಯಲ್ಲಿ ನಿರ್ಧಾರವಾಗುತ್ತೆ. ಇದು ಕಾಂಗ್ರೆಸ್‌ನವರಿಗೂ ತಿಳಿದಿದೆ ಆದರೂ ಅವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.