ವಿಧಾನ ಪರಿಷತ್‌ ಚುನಾವಣೆ : ಶಿಗ್ಗಾಂವಿಯಲ್ಲಿ ಮತ ಚಲಾಯಿಸಿದ ಬಸವರಾಜ್‌ ಬೊಮ್ಮಾಯಿ

ಹಾವೇರಿ ಡಿ 10 :  ರಾಜ್ಯದಲ್ಲಿ ಮತ್ತೆ ಚುನಾವಣಾ ಕಾವು ಜೋರಾಗಿದ್ದು ಇಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ಮಾಡಲು ಅವಕಾಶವಿದೆ.

 ಸಿಎಂ ಬಸವರಾಜ ಬೊಮ್ಮಾಯಿ ಇಂದು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾ.ಪಂ ಕಚೇರಿ ಮತಗಟ್ಟೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು.  ಬೆಂಗಳೂರು, ಮೈಸೂರು-ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು ಹಾವೇರಿ ಸೇರಿ ಹಲವು ಕಡೆಗಳಲ್ಲಿ ಮತದಾನ ನಡೆಯುತ್ತಿದ್ದು  ಮತದಾನ ಕೇಂದ್ರಗಳ ಸುತ್ತಿ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಡಿಸೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ 20 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಜೆಡಿಎಸ್‌ನ 6ಸ್ಥಾನಗಳಲ್ಲಿ ಸ್ಪರ್ಧಿಸಿದೆ.

ಮತದಾನಕ್ಕಾಗಿ ಒಟ್ಟು 6072 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. 23,065 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಸದಸ್ಯರೇ ಮತದಾರರರು. 90 ಅಭ್ಯರ್ಥಿಗಳ ಪೈಕಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾತ್ರ ಒಬ್ಬರು ಮಹಿಳಾ ಅಭ್ಯರ್ಥಿ ಕಣದಲ್ಲಿದ್ದಾರೆ.

Exit mobile version