Hubbli / Shimoga : ನೂತನ ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ರಾಜ್ಯವು ಬಡವರಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲು ಕೇಂದ್ರ ಸರ್ಕಾರ (Bommai protest against congress)
ಹೆಚ್ಚುವರಿ ಅಕ್ಕಿ ವಿತರಣೆ ಮಾಡುತ್ತಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಭರವಸೆ ನೀಡಿದಂತೆ ಹೆಚ್ಚುವರಿ ಅಕ್ಕಿಯನ್ನು ಖರೀದಿಸಿ ಸರಬರಾಜು ಮಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. 10 ಕೆ.ಜಿ.ಯಲ್ಲಿ 1 ಗ್ರಾಂ ಅಕ್ಕಿ ಕಡಿಮೆಯಾದರೂ ಸಹ ಜನರು ಒಪ್ಪುವುದಿಲ್ಲ ಎಂದು
ಯಡಿಯೂರಪ್ಪ (B.S Yediyurappa) ಹೇಳಿದ್ದಾರೆ. ಇದೇ ವೇಳೆ ಜೂನ್ 1 ರಂದು ರಾಜ್ಯದ ನಾಗರಿಕರಿಗೆ 10 ಕೆಜಿ ಉಚಿತ ಅಕ್ಕಿಯನ್ನು ನೀಡದಿದ್ದಲ್ಲಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ
ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Bommai protest against congress) ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಅಕ್ಕಿ ಪಾಲಿಟಿಕ್ಸ್: ಅನ್ನಭಾಗ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ನಿರಾಕರಣೆ : ಅಕ್ಕಿಗಾಗಿ ಅನ್ಯ ರಾಜ್ಯಗಳ ಮೊರೆ
ಶಿವಮೊಗ್ಗದಲ್ಲಿ(Shimoga) ಮಾತನಾಡಿದ ಯಡಿಯೂರಪ್ಪ, ಅಕ್ಕಿ ವಿತರಣೆ ವಿಚಾರದಲ್ಲಿ ಸಿದ್ದರಾಮಯ್ಯ(Siddaramaiah) ಹಾಗೂ ಡಿ.ಕೆ.ಶಿವಕುಮಾರ್(D K Shiva Kumar) ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ.
ಜನರಿಗೆ ಗ್ಯಾರಂಟಿ ನೀಡಿ ನಂತರ ಅನಗತ್ಯವಾಗಿ ಕೇಂದ್ರ ಸರ್ಕಾರವನ್ನು ದೂರುವುದು ಅನ್ಯಾಯ. ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಉಚಿತ ಅಕ್ಕಿ ನೀಡುತ್ತಿದೆ ಇದರ ಹೊರತಾಗಿ ಹೆಚ್ಚುವರಿ ಅಕ್ಕಿ ನೀಡುವ ಬಗ್ಗೆ
ಮೋದಿ (Narendra Modi) ಯಾವತ್ತೂ ಹೇಳಿಕೆ ನೀಡಿಲ್ಲ. ಈ ಜವಾಬ್ದಾರಿಯನ್ನು ನಿರ್ವಹಿಸುವುದು ರಾಜ್ಯ ಸರ್ಕಾರದ ಏಕೈಕ ಜವಾಬ್ದಾರಿಯಾಗಿದೆ. ಯಾವುದೇ ಸಮಯದಲ್ಲಿ, ಎಲ್ಲಿಯಾದರೂ ಅಕ್ಕಿ ಖರೀದಿಸಿ ಕೊಡಲಿ.
ಅಕ್ಕಿ ವಿತರಣೆ ಗೊಂದಲವಾಗದಿರಲಿ. 10 ಕೆ.ಜಿ.ಯಲ್ಲಿ 1 ಗ್ರಾಂ ಅಕ್ಕಿ ಕಡಿಮೆಯಾದರೂ ಜನರು ಅದನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹೇಳಿದರು.

ಇದೇ ವೇಳೆ ಹುಬ್ಬಳ್ಳಿಯಲ್ಲಿ (Hubli) ಮಾತನಾಡಿದ ಬೊಮ್ಮಾಯಿ, ಅಕ್ಕಿ ಸಮಸ್ಯೆ ಪಾರು ಮಾಡಲು ಕಾಂಗ್ರೆಸ್ ಸರಕಾರ ಮುಂದಾಗಬೇಕು. ಕಾಂಗ್ರೆಸ್ ಸರ್ಕಾರ ಅಕ್ಕಿ ವಿಷಯವಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು
ಚುನಾವಣೆ (Election) ಸಂದರ್ಭದಲ್ಲಿ ಭರವಸೆ ನೀಡಿ ಇದೀಗ ಅಕ್ಕಿ ಬರುವುದಿಲ್ಲ ಎಂದು ಕುಂಟು ನೆಪ ಹೇಳುತ್ತಿದೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ.

ಜೂನ್ (June) 1 ರಂದು ರಾಜ್ಯದ ಜನತೆಗೆ 10 ಕೆ.ಜಿ. ಉಚಿತ ಅಕ್ಕಿ ನೀಡದಿದ್ದರೆ ಬಿಜೆಪಿ (BJP) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ರಾಜ್ಯ
ಸರ್ಕಾರ ಅದನ್ನು ಖರೀದಿ ಮಾಡಬೇಕು ಅದರ ಬದಲು ಕೇಂದ್ರದಿಂದ ಬಿಜೆಪಿ ಕೊಡಬೇಕು ಎನ್ನುವುದು ಸರಿಯಲ್ಲ. ಇದೀಗ ಛತ್ತೀಸ್ ಗಢದಿಂದ (Chhattisgarh) ಅಕ್ಕಿ ತರುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
ಹೇಗಾದರೂ ಸರಿ, ಬಡ ಜನರಿಗೆ ಒಳ್ಳೆಯದಾದರೆ ಸಾಕು. ಕಾಂಗ್ರೆಸ್ ಸರ್ಕಾರದ ಈ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.
ರಶ್ಮಿತಾ ಅನೀಶ್