ಬೆಂಗಳೂರು ಅ 30 : ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಾಳೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ. ಪುನೀತ್ ಮಗಳು ದೆಹಲಿ ತಲುಪಿದ್ದಾರೆ.ಅವರು ಬೆಂಗಳೂರಿಗೆ ಸಂಜೆ 7 ಗಂಟೆಗೆ ಬರುವ ಸಾಧ್ಯತೆ ಇದೆ. ಹೀಗಾಗಿ ಅಂತ್ಯಕ್ರಿಯೆ ನಾಳೆ ಸಂಜೆ ನಡೆಸಲಾಗುವುದು ಎಂದು ಸಿಎಂ ಹಾಗೂ ರಾಘವೇಂದ್ರ ರಾಜ್ ಕುಮಾರ್ ತಿಳಿಸಿದ್ದಾರೆ. ಅಲ್ಲದೇ ಲಕ್ಷಾಂತರ ಅಭಿಮಾನಿಗಳು ಕೂಡ ಕಂಠೀರವ ಸ್ಟೇಡಿಯಂ ಕಡೆ ಅಂತಿಮ ದರ್ಶನಕ್ಕೆ ಬರುತ್ತಿದ್ದಾರೆ. ಹೀಗಾಗಿ ಅಂತಿಮ ದರ್ಶನಕ್ಕೆ ಇನ್ನು ಒಂದು ದಿನ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು.