ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್

New Delhi: ಕಾಂಗ್ರೆಸ್ (Congress) ನಾಯಕ ಹಾಗೂ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಲೋಕಸಭೆ ಚುನಾವಣೆಗೆ ಮುನ್ನ ಮರಳಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ (Delhi Loksabha) ಸ್ಪರ್ಧಿಸಿದ್ದರು. ಆದರೆ ಅಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ದ ಸೋಲುಂಡಿದ್ದರು.

ಲೋಕಸಭಾ ಚುನಾವಣೆಯ ಹೊತ್ತಲ್ಲೇ ಬಿಜೆಪಿ (BJP) ಸೇರ್ಪಡೆಯಾಗುವ ಮೂಲಕ ಅವರು, ಕಾಂಗ್ರೆಸ್ ಪಕ್ಷದೊಂದಿಗಿನ ತಮ್ಮ ಸಂಬಂಧವನ್ನು ಸಂಪೂರ್ಣವಾಗಿ ಕೊನೆಗೊಳಿಸಿದ್ದಾರೆ. ಇನ್ನು ನವದೆಹಲಿಯಲ್ಲಿ (New Delhi) ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರದಲ್ಲಿ ಅವರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿದರು. ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜೇಂದರ್ ಸಿಂಗ್ (Vijender Singh), “ದೇಶದ ಅಭಿವೃದ್ಧಿಗಾಗಿ ಮತ್ತು ಜನರ ಸೇವೆಗಾಗಿ ನಾನು ಇಂದು ಬಿಜೆಪಿಗೆ ಸೇರಿದ್ದೇನೆ…” ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ಇತ್ತೀಚೆಗೆ ಅಥ್ಲೀಟ್ಗಳು ನಡೆಸುತ್ತಿರುವ ಪ್ರತಿಭಟನೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ತಪ್ಪನ್ನು ತಪ್ಪು ಎಂದು ಹೇಳುವುದನ್ನು ನಾನು ಮುಂದುವರಿಸುತ್ತೇನೆ, ಕ್ರೀಡಾಪಟುಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಆದರೆ ಮೋದಿ (Modi) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿಶ್ವದಾದ್ಯಂತ ಭಾರತದ ಕ್ರೀಡಾ ಪಟುಗಳಿಗೆ ಸಿಗುತ್ತಿರುವ ಗೌರವ ಶ್ಲಾಘನೀಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಈ ಮಧ್ಯೆ ನಟಿ ಮತ್ತು ಹಾಲಿ ಬಿಜೆಪಿ ಸಂಸದೆ ಹೇಮಾ ಮಾಲಿನಿ (Hema Malini) ಮತ್ತೆ ಸ್ಪರ್ಧಿಸುತ್ತಿರುವ ಮಥುರಾದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜೇಂದರ್ ಸಿಂಗ್ ಅವರು ಸ್ಪರ್ಧಿಸುತ್ತಾರೆ ಎಂದು ವರದಿಯಾಗಿತ್ತು. ವಿಜೇಂದರ್ ಸಿಂಗ್ ಅವರು ಜಾಟ್ ಸಮುದಾಯದಿಂದ ಬಂದವರು, ಇದು ಅವರ ತವರು ರಾಜ್ಯವಾದ ಹರಿಯಾಣದಲ್ಲಿ ಮತ್ತು ಪಶ್ಚಿಮ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ (Rajasthan) ಗಮನಾರ್ಹ ಸಂಖ್ಯೆಯ ಸ್ಥಾನಗಳಲ್ಲಿ ರಾಜಕೀಯ ಪ್ರಭಾವವನ್ನು ಹೊಂದಿದೆ. ಹೀಗಾಗಿ ಈ ಕ್ಷೇತ್ರದಿಂದ ಅವರು ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಅವರು ಇದೀಗ ಬಿಜೆಪಿ ಸೇರ್ಪಡೆಯಾಗುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

Exit mobile version