ರಾಜ್ಯ ಆಹಾರ ಇಲಾಖೆಯು ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ

ಬೆಂಗಳೂರು : ಕರ್ನಾಟಕ ರಾಜ್ಯ ಆಹಾರ ಇಲಾಖೆಯು ಬಿಪಿಎಲ್ ಕಾರ್ಡ್‌ಗಾಗಿ (Bpl Card application started) ಹೊಸ ಅರ್ಜಿಗಳನ್ನು ಸಲ್ಲಿಸಲು ಪ್ರಕಟಣೆ ಹೊರಡಿಸಿದೆ. ಮೂಲಗಳ ಪ್ರಕಾರ,

ಮಂಗಳವಾರದಿಂದ ಹೊಸ ಅರ್ಜಿಗಳನ್ನು ಸ್ವೀಕರಿಸುವ ನಿರೀಕ್ಷೆಯಿದೆ. ರಾಷ್ಟ್ರೀಯ ಆಹಾರ ಹಕ್ಕು ಕಾಯಿದೆಯಲ್ಲಿ ಸೂಚಿಸಿರುವ ಮಿತಿಯನ್ನು ಮೀರಿದ್ದರಿಂದ ಕಳೆದ ಮೂರು ತಿಂಗಳಿಂದ ಇಲಾಖೆಯ

ವೆಬ್‌ಸೈಟ್ (Website) ಕಾರ್ಯನಿರ್ವಹಿಸುತ್ತಿರಲಿಲ್ಲ. ಹೀಗಾಗಿ ಹೊಸ ಅರ್ಜಿಗಳನ್ನು ಸ್ವೀಕರಿಸುವುದನ್ನು (Bpl Card application started) ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಆದರೆ, ಹೊಸ ಅರ್ಜಿಗಳನ್ನು ಸ್ವೀಕರಿಸಲು ಸರ್ಕಾರ (Government) ಇತ್ತೀಚೆಗೆ ಅನುಮೋದನೆ ನೀಡಿದ್ದು, ಇದೀಗ ಇಲಾಖೆ ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಲು ಮುಂದಾಗಿದೆ. ಅರ್ಜಿ ಸಲ್ಲಿಸುವ ಮಾನದಂಡವನ್ನು

ಆಹಾರ ಇಲಾಖೆಯು ನಿಗದಿಪಡಿಸಲಿದೆ. ಆದ್ದರಿಂದ ಈ ವಾರ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸುತ್ತದೆ. ಮತ್ತೊಂದೆಡೆ ‘ಅನ್ನಭಾಗ್ಯ’ ಯೋಜನೆಯಡಿ ಪಡಿತರ ಧಾನ್ಯಗಳ ವಿತರಣೆ ಜುಲೈನಲ್ಲಿ(July) ಆರಂಭವಾಗಲಿದೆ.

ಇದನ್ನೂ ಓದಿ :ಎಲೆಕ್ಟ್ರಿಕ್ ಬೈಕ್​ಗಳು ಭರ್ಜರಿ ಸೇಲ್ : ಫ್ರೀ ಕರೆಂಟ್ ಘೋಷಣೆ ಬೆನ್ನಲ್ಲೇ ಎಲೆಕ್ಟ್ರಿಕ್ ವಸ್ತುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು

ಸದ್ಯ ರಾಜ್ಯದಲ್ಲಿ 1.26 ಕೋಟಿ ಬಿಪಿಎಲ್ ಕಾರ್ಡ್ ದಾರರಿದ್ದು, 2 ಲಕ್ಷ 30 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ‘ಅನ್ನಭಾಗ್ಯ’ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಲಾಗಿದ್ದು,

ಇಲಾಖೆ ಅಗತ್ಯ ಸಿದ್ಧತೆ ನಡೆಸಿದೆ. ಆದರೆ, ಈ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್ ವಿತರಣೆ ಇನ್ನೂ ಬಾಕಿ ಉಳಿದಿರುವುದು ಗಮನಕ್ಕೆ ಬಂದಿದೆ.

ಈಗಾಗಲೇ ಕರ್ನಾಟಕ ಸರ್ಕಾರ ಘೋಷಿಸಿರುವ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಕೂಡ ಒಂದಾಗಿರುವುದರಿಂದ ಇದರ ಪ್ರಯೋಜನ ಪಡೆಯಬೇಕಾದರೆ ಬಿಪಿಎಲ್ ಕಾರ್ಡ್ ಬಹುಮುಖ್ಯವಾಗಿದೆ.

ಅನ್ನಭಾಗ್ಯ ಯೋಜನೆ :

ಅನ್ನಭಾಗ್ಯ- ಕೇಂದ್ರ ಸರ್ಕಾರವು ಈಗಾಗಲೇ ಬಿಪಿಎಲ್ ಕಾರ್ಡ್ದಾರರಿಗೆ ಕುಟುಂಬದಲ್ಲಿ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ವಿತರಿಸುತ್ತಿದೆ. ಆದರೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ಜುಲೈ 1 ರಿಂದ 10

ಕೆಜಿ ಅಕ್ಕಿಯನ್ನು ‘ಅನ್ನಭಾಗ್ಯ’ ಯೋಜನೆಯಡಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ. ಈ ಬಗ್ಗೆ ಸುದೀರ್ಘ ಸಮಾಲೋಚನೆ ಮಾಡಿದ್ದೇವೆ.

ಆಹಾರಧಾನ್ಯ ಈಗಾಗಲೇ ಸರಬರಾಜು

ಆಗಿರುವುದರಿಂದ ದಾಸ್ತಾನು ಇಲ್ಲ ಆದ್ದರಿಂದ ಬಿಪಿಎಲ್ + ಅಂತ್ಯೋದಯ ಅನ್ನ ಕಾರ್ಡುದಾರರಿಗೆ ತಲಾ 10 ಕೆ.ಜಿ. ಅಕ್ಕಿ ಜೂಲೈ 1 ರಿಂದ ಎಲ್ಲಿಂದಲಾದರೂ ಸರಿ ತಂದು ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಶ್ಮಿತಾ ಅನೀಶ್

Exit mobile version