ಬಿಪಿಎಲ್ ಪಡಿತರಿಗೆ ಮತ್ತೊಂದು ಬಂಪರ್!

bpl

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಕ್ಕೆ ಏಪ್ರಿಲ್ ತಿಂಗಳಿನಿಂದ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿನ್ನೆ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಈ ಘೋಷಣೆ ಮಾಡಿದ್ದಾರೆ. ಪ್ರಸ್ತುತ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಒಬ್ಬರಿಗೆ 5 ಕೆಜಿಯಂತೆ ಆಹಾರಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ ಉಚಿತವಾಗಿ ನೀಡಲು ಆದೇಶಿಸಿದ್ದು, ಎಪ್ರಿಲ್ ತಿಂಗಳಿನಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ.

ಸರ್ಕಾರದ ಈ ನಿರ್ಧಾರದಿಂದಾಗಿ 1.14 ಕೋಟಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರಯೋಜನ ಸಿಗಲಿದೆ. ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಇನ್ನು ಮುಂದೆ ಹೆಚ್ಚುವರಿಯಾಗಿ ಒಂದು ಕೆಜಿ ನೀಡಲಾಗುವುದು ಎಂದು ತಿಳಿಸಿದರು. ರಾಷ್ಟ್ರದಲ್ಲೇ ಕರ್ನಾಟಕ ಪ್ರಪ್ರಥಮವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಮಗ್ರ ವಿವಿ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ.

ವಿದೇಶದಲ್ಲಿರುವ ದೇಶಿ ಸಂಜಾತರ ಜ್ಞಾನವನ್ನು ಸ್ವದೇಶದಲ್ಲಿ ಬಳಸಿಕೊಳ್ಳಲು ಮರಳಿ ತಾಯ್ನಾಡಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಕ್ತ ನೀತಿ ರಚನೆ ಮತ್ತು ಅನುದಾನ ಬಿಡುಗಡೆ ಮಾಡುವ ಆಶ್ವಾಸನೆಯನ್ನು ನೀಡಿದರು. ತಮ್ಮ 30 ಪುಟಗಳ ಭಾಷಣದಲ್ಲಿ ಯಾವುದೇ ಹೊಸ ಯೋಜನೆಗಳನ್ನಾಗಿ ಅಥವಾ ಕಾರ್ಯಕ್ರಮಗಳನ್ನು ಘೋಷಣೆ ಮಾಡದ ರಾಜ್ಯಪಾಲರು, ರಾಜ್ಯ ಸರ್ಕಾರ ಕೋವಿಡ್ ನಿರ್ವಹಣೆಗಾಗಿ ನಡೆಸಿದ ಹೋರಾಟ ಹಾಗೂ ಜಾರಿಗೆ ತಂದಿರುವ ಕಾರ್ಯಕ್ರಮಗಳ ಅನುಷ್ಠಾನ ಹೊರತುಪಡಿಸಿದರೆ ಸರ್ಕಾರದ ಮುಂದುವರೆದ ಕಾರ್ಯಕ್ರಮಗಳನ್ನು ಮಾತ್ರ ಪ್ರಸ್ತಾಪಿಸಿದ್ದಾರೆ.


ಹಾಲಿನ ಉತ್ಪಾದನೆಯಲ್ಲಿ 11ನೇ ಸ್ಥಾನದಲ್ಲಿರುವ ರಾಜ್ಯವು ಮೊಟ್ಟೆ(Egg Production) ಉತ್ಪಾದನೆಯಲ್ಲಿ 6ನೇ ಸ್ಥಾನದಲ್ಲಿದೆ. ಮಾಂಸ(Meat) ಉತ್ಪಾದನೆಯಲ್ಲಿ 10 ನೇ ಸ್ಥಾನದಲ್ಲಿದೆ. ರಾಜ್ಯದ ಒಟ್ಟು ಜಿಡಿಪಿಗೆ(GDP) ಶೇ.3.53ರಷ್ಟು ಕೊಡುಗೆ ನೀಡುತ್ತಿದೆ. ಸಾರ್ವಜನಿಕ ವ್ಯವಹಾರ ಸೂಚ್ಯಂಕದಲ್ಲಿ (ಬೆಳವಣಿಗೆ, ಸಮಾನತೆ, ಸುಸ್ಥಿರತೆ) 4ನೇ ಸ್ಥಾನದಲ್ಲಿದೆ. 2019-20ರ ಎಸ್‌ಡಿಜಿ ಭಾರತ ಸೂಚ್ಯಂಕದ ಪ್ರಕಾರ 6ನೇ ಸ್ಥಾನದಲ್ಲಿತ್ತು. 2020-21ರ ವರದಿ ಪ್ರಕಾರ ರಾಜ್ಯದ ಶ್ರೇಯಾಂಕ 4ಕ್ಕೆ ಏರಿದೆ. ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಅನುಷ್ಠಾನಗೊಳಿಸುವಲ್ಲಿ 11 ನೇ ಸ್ಥಾನದಲ್ಲಿದ್ದೇವೆ ಎಂದು ರಾಜ್ಯಪಾಲರು ಇದೇ ವೇಳೆ ಮಾಹಿತಿ ನೀಡಿದರು.


ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ರಾಜ್ಯಪಾಲರ ವಿವರ
• ಕೋವಿಡ್ ಮೊದಲ ಡೋಸ್ ವಿತರಣೆಯಲ್ಲಿ ಶೇ.100, 2ನೇ ಡೋಸ್ನಲ್ಲಿ ಶೇ.85 ಸಾಧನೆ
• 1500 ಕೋಟಿ ವೆಚ್ಚದಲ್ಲಿ ನೀರಾವರಿ ಕ್ರಾಂತಿ, 55 ಅಣೆಕಟ್ಟುಗಳ ಪುನಶ್ಚೇತನಕ್ಕೆ ತೀರ್ಮಾನ
• ರಾಜ್ಯದ ರೈತರ ಆದಾಯ ಹೆಚ್ಚಿಸಲು ಸಕಲ ಕ್ರಮ. ದ್ವಿತೀಯ ಕೃಷಿ ನಿರ್ದೇಶನಾಲಯ ಸೃಷ್ಟಿ
• ರಾಷ್ಟ್ರದಲ್ಲಿಯೇ ಪ್ರಪ್ರಥಮವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ ಹೆಗ್ಗಳಿಕೆ
• ಹಳ್ಳಿಗಳಲ್ಲೂ ಎಲ್ಲ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಅರ್ಜಿ ಸ್ವೀಕಾರಕ್ಕೆ ಗ್ರಾಮ ಒನ್ ಶುರು

Exit mobile version