Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಮುಂಬೈನ ಮಲಾಡ್ ನಲ್ಲಿ ಕಟ್ಟಡ ಕುಸಿತ: 11 ಮಂದಿ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ

ದುರಂತದಲ್ಲಿ 11 ಮಂದಿ ಮೃತಪಟ್ಟರೆ, 8 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಿಡಿಬಿಎ ಮುನ್ಸಿಪಲ್​ ಜನರಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 17 ಮಂದಿ ಗಾಯಗೊಂಡಿದ್ದಾರೆ, ಅವರಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
Share on facebook
Share on google
Share on twitter
Share on linkedin
Share on print
Loading...

ಮುಂಬೈ, ಜೂ. 10: ಮಹಾನಗರಿ ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 11 ಮಂದಿ ಸಾವನ್ನಪ್ಪಿರುವ ಘಟನೆ ಮುಂಬೈನ ಪಶ್ಚಿಮ ಮಲಾಡ್​ನ ಮಲ್ವಾನಿ ಪ್ರದೇಶದಲ್ಲಿ ತಡರಾತ್ರಿ ನಡೆದಿದೆ.

ಬುಧವಾರ ರಾತ್ರಿ ಸುಮಾರು 11.10ರಲ್ಲಿ ಈ ಘಟನೆ ನಡೆದಿದೆ. ದುರಂತದಲ್ಲಿ 11 ಮಂದಿ ಮೃತಪಟ್ಟರೆ, 8 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಿಡಿಬಿಎ ಮುನ್ಸಿಪಲ್​ ಜನರಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 17 ಮಂದಿ ಗಾಯಗೊಂಡಿದ್ದಾರೆ, ಅವರಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಜನರ ಸಹಾಯದೊಂದಿಗೆ ಅವಶೇಷಗಳಡಿ ಸಿಲುಕಿದ್ದ ಸುಮಾರು 15 ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Loading...

ಈ ನಡುವೆ ಘಟನೆ ಕುರಿತು ಮಾತನಾಡಿರುವ ಮಹಾರಾಷ್ಟ್ರ ಸಚಿವ ಅಸ್ಲಾಂ ಶೇಖ್, ಘಟನೆಗೆ ಅತಿಯಾದ ಮಳೆಯೇ ಕಾರಣವಾಗಿದ್ದು, ಮಳೆಯಿಂದಾಗಿ ಕಟ್ಟಡ ಕುಸಿದಿದೆ ಎಂದು ಹೇಳಿದ್ದಾರೆ.

Loading...

Submit Your Article