Breaking News
ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಸಾಹುಕಾರನ ಬೆನ್ನಿಗೆ ನಿಂತ ಬಿಜೆಪಿ ನಾಯಕರುಸಾಹುಕಾರನ ತಲೆದಂಡ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆತಿಂಗಳಲ್ಲೇ ಕೋಟಿ ಒಡೆಯನಾದ ನಂಜುಂಡೇಶ್ವರ: ದೇವಸ್ಥಾನದ ಹುಂಡಿಯಲ್ಲಿ 1.11ಕೋಟಿ ಸಂಗ್ರಹಬೃಹದಾಕಾರದ ಅರಳಿ ಮರಕ್ಕೆ ಕೊಡಲಿ ಪೆಟ್ಟು: ಕಡಿದ ಮರದ ಬುಡಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಪರಿಸರ ಪ್ರೇಮಿಗಳುಸಚಿವ ಸಿಪಿ ಯೋಗೀಶ್ವರ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪಜೀವನದ ಪಾಠ ಕಲಿಸಿದ ಕೊರೋನಾ: ವ್ಯಕ್ತಿಯ ಶ್ರಮಕ್ಕೆ ಮೋದಿ ಮೆಚ್ಚುಗೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿಡಿಮಾ 3 ರಿಂದ ಕಾಂಗ್ರೆಸ್‌ನ ಜನಧ್ವನಿ ಯಾತ್ರೆ

ದ್ವಿತೀಯ ಟೆಸ್ಟ್: ಆಂಗ್ಲರ ಆರ್ಭಟ ಅಡಗಿಸಿದ ಭಾರತ: ಕೊಹ್ಲಿ ಪಡೆಗೆ 317 ರನ್‌ಗಳ ಭರ್ಜರಿ ಜಯ

ಎಂ. ಎ. ಚಿದಂಬರಂ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್‌ನಲ್ಲಿ ಟೀ ಇಂಡಿಯಾ ಆಟಗಾರರು ಅದ್ಭುತ ಪ್ರದರ್ಶನ ನೀಡಿದರು. ಭಾರತೀಯ ಆಟಗಾರರ ಅಬ್ಬರಕ್ಕೆ ಮಣಿದ ಜೋ ರೂಟ್ ಪಡೆ, 317 ರನ್‌ಗಳ ಹೀನಾಯ ಸೋಲು ಕಂಡಿತು. 2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ನೀಡಿದ್ದ 482 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೇಂಡ್ 164 ರನ್​ಗಳಿಗೆ ಆಲ್ ಔಟ್ ಆಗಿ ಸೋಲನುಭವಿಸಿತು.
Share on facebook
Share on google
Share on twitter
Share on linkedin
Share on print

ಚೆನ್ನೈ, ಫೆ. 16: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಸೋಲಿನ ಬಳಿಕ ಬಲಿಷ್ಠ ಕಮ್ ಬ್ಯಾಕ್ ಮಾಡಿದ ಟೀಂ ಇಂಡಿಯಾ, ದ್ವಿತೀಯ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.

ಇಲ್ಲಿನ ಎಂ. ಎ. ಚಿದಂಬರಂ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್‌ನಲ್ಲಿ ಟೀ ಇಂಡಿಯಾ ಆಟಗಾರರು ಅದ್ಭುತ ಪ್ರದರ್ಶನ ನೀಡಿದರು. ಭಾರತೀಯ ಆಟಗಾರರ ಅಬ್ಬರಕ್ಕೆ ಮಣಿದ ಜೋ ರೂಟ್ ಪಡೆ, 317 ರನ್‌ಗಳ ಹೀನಾಯ ಸೋಲು ಕಂಡಿತು. 2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ನೀಡಿದ್ದ 482 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೇಂಡ್  164 ರನ್​ಗಳಿಗೆ ಆಲ್ ಔಟ್ ಆಗಿ ಸೋಲನುಭವಿಸಿತು. ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ​ ಇಂಡಿಯಾ 329 ರನ್​ ಗಳಿಗೆ ಆಲ್ ಔಟ್ ಆಯಿತು. 

ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್​ ಶರ್ಮಾ (161 ರನ್​) ರಹಾನೆ (67 ರನ್​) ಹಾಗೂ ರಿಶಭ್​ ಪಂತ್​ (58 ರನ್​) ಅಬ್ಬರದ ಬ್ಯಾಟಿಂಗ್​ ನೆರವಿನಿಂದ 329 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ ಇಂಗ್ಲೇಂಡ್  134 ರನ್ ಗೆ ಸರ್ವಪತನ ಕಂಡಿತು. ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಪರ ಆರ್.ಅಶ್ವಿನ್ 5 ವಿಕೆಟ್ ಕಬಳಿಸಿ ಮಿಂಚಿದರು.

ನಂತರ 2ನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ,  ಇಂಗ್ಲೆಂಡ್ ​ಗೆ  482 ರನ್​ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 164 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಸರ್ವಪತನಗೊಂಡಿತು. ಈ ಮೂಲಕ ಟೀಂ ಇಂಡಿಯಾ 317 ರನ್ ಗಳ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಸರಣಿಯಲ್ಲಿ 1-1ರ ‌ಸಮಬಲ ಸಾಧಿಸುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.

ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರವಿಚಂದ್ರನ್ ಅಶ್ವಿನ್, ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು. ಉಭಯ ತಂಡಗಳ‌ ನಡುವಿನ ನಾಲ್ಕು ಪಂದ್ಯಗಳ
ಸರಣಿಯ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 24ರಂದು ಅಹಮದಾಬಾದಿನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

Submit Your Article