Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಕಳೆದ 24 ಗಂಟೆಗಳಲ್ಲಿ 92,596 ಹೊಸ ಕೊರೊನಾ ಸೋಂಕು ಪತ್ತೆ

ದೇಶದಲ್ಲಿ ಈವರೆಗೆ ಒಟ್ಟು 2,90,89,069 ಪ್ರಕರಣಗಳು ದಾಖಲಾಗಿದ್ದು, 3,53,528 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಒಟ್ಟು 2,75,04,126 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 12,31,415 ಸಕ್ರಿಯ ಪ್ರಕರಣಗಳಿವೆ.
Share on facebook
Share on google
Share on twitter
Share on linkedin
Share on print
Loading...

ನವದೆಹಲಿ, ಜೂ. 09: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 92,596 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 2,219 ಸೋಂಕಿತರು ಮೃತಪಟ್ಟಿದ್ದಾರೆ ಮತ್ತು 1,62,664 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 2,90,89,069 ಪ್ರಕರಣಗಳು ದಾಖಲಾಗಿದ್ದು, 3,53,528 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಒಟ್ಟು 2,75,04,126 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 12,31,415 ಸಕ್ರಿಯ ಪ್ರಕರಣಗಳಿವೆ. ಈವರೆಗೆ 23.90 (23,90,58,360) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Loading...

ಏ. 25ರ ಹೊತ್ತಿಗೆ ದೇಶದಲ್ಲಿ 37,01,93,563 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಮಂಗಳವಾರ ಒಂದೇ ದಿನ 19,85,967 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.

Loading...

Submit Your Article