Breaking News
‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆದೆಹಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಕೊರೊನಾ ಸೋಂಕಿನಿಂದ ಮೃತ

ಅರಮನೆ ನಗರಿಯಲ್ಲಿ ಶುರುವಾಗಲಿದೆ “ಅಂಬಾರಿ” ಸಂಚಾರ; ಇಂದಿನಿಂದ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭ

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮಾರ್ಚ್ 2 ರಂದು ನಡೆಯುವ ಸಮಾರಂಭದಲ್ಲಿ ಡಬ್ಬಲ್ ಡೆಕ್ಕರ್ ಅಂಬಾರಿ ಬಸ್ ಸಂಚಾರಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರು ಅಂಬಾರಿ ಬಸ್ ಸೇವೆಗೆ ಹಸಿರು ನಿಶಾನೆ ನೀಡಲಿದ್ದಾರೆ.
Share on facebook
Share on google
Share on twitter
Share on linkedin
Share on print

ಮೈಸೂರು, ಮಾ. 02: ಸಾಂಸ್ಕ್ರತಿಕ ನಗರಿ ಮೈಸೂರಿಗೆ ದೇಶ-ವಿದೇಶದ ಮತ್ತಷ್ಟು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಲಂಡನ್ನಿನ ಬಿಗ್ ಬಸ್ ಮಾದರಿಯಲ್ಲಿ ಡಬ್ಬಲ್ ಡೆಕ್ಕರ್ ತೆರೆದ ‘ಅಂಬಾರಿ’ ಬಸ್ ಸೇವೆ ಆರಂಭವಾಗಲಿದೆ.

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ನಡೆಯುವ ಸಮಾರಂಭದಲ್ಲಿ ಡಬ್ಬಲ್ ಡೆಕ್ಕರ್ ಅಂಬಾರಿ ಬಸ್ ಸಂಚಾರಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರು ಅಂಬಾರಿ ಬಸ್ ಸೇವೆಗೆ ಹಸಿರು ನಿಶಾನೆ ನೀಡಲಿದ್ದಾರೆ.

ಮೈಸೂರಿನ ಹೋಯ್ಸಳ ಹೋಟೆಲ್ ನಿಂದ ಹೊರಡುವ ‘ಅಂಬಾರಿ’ ಜಿಲ್ಲಾಧಿಕಾರಿ ಕಛೇರಿ, ಕ್ರಾಫರ್ಡ್ ಹಾಲ್, ಕುಕ್ಕರಹಳ್ಳಿಕೆರೆ, ಮೈಸೂರು ವಿಶ್ವ ವಿದ್ಯಾನಿಲಯ, ಜಾನಪದ ವಸ್ತು ಪ್ರದರ್ಶನ, ರಾಮಾಸ್ವಾಮಿ ಸರ್ಕಲ್, ಅರಮನೆ ಕರಿಕಲ್ಲು ತೊಟ್ಟಿ, ಜಯಮಾರ್ತಾಂಡ ದ್ವಾರ, ಮೃಗಾಲಯ, ಕಾರಂಜಿ ಕೆರೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ಚಾಮುಂಡಿ ವಿಹಾರ ಸ್ಟೇಡಿಯಂ, ಸೈಂಟ್ ಫಿಲೋಮಿನಾ ಚರ್ಚ್, ಬನ್ನಿಮಂಟಪ, ರೈಲ್ವೆ ಸ್ಟೇಷನ್ ನಿಂದ ಮತ್ತೆ ಮಯೂರ ಹೋಯ್ಸಳ ಹೋಟೆಲ್ ಗೆ ಬರಲಿದೆ.

ಕಳೆದ ಬಾರಿಯ ರಾಜ್ಯ ಬಜೆಟ್ ವೇಳೆ ‘ಅಂಬಾರಿ’ ಬಸ್ ಗಾಗಿ ಐದು ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಲಂಡನ್ ನಲ್ಲಿರುವ ಬಿಗ್ ಬಾಸ್ ಮಾದರಿಯಲ್ಲಿ ‘ಅಂಬಾರಿ’ ಬಸ್ ನ್ನು ವಿನೂತನ ಶೈಲಿಯಲ್ಲಿ ನಿರ್ಮಿಸಲಾಗಿದೆ. ಪ್ರತಿ ಅರ್ಧ ಗಂಟೆಗೊಮ್ಮೆ ‘ಅಂಬಾರಿ’ ಬಸ್ ಸಂಚಾರದ ವ್ಯವಸ್ಥೆ ಇರುತ್ತದೆ. ಒಬ್ಬ ವ್ಯಕ್ತಿಗೆ 250 ರೂ.ಗಳನ್ನು ನಿಗದಿ ಮಾಡಲಾಗಿದೆ.

Submit Your Article