Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

‘ಡಿ.ಬಿ.ಟಿ’ ಮೊಬೈಲ್ ಅಪ್ಲಿಕೇಶನ್‍ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ರಾಜ್ಯದಲ್ಲಿ ಈವರೆಗೆ ಸುಮಾರು 120 ಯೋಜನೆಗಳನ್ನು ಈ ವೇದಿಕೆಗೆ ಒಳಪಡಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 12 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತವನ್ನು ಫಲಾನುಭವಿಗಳ ಆಧಾರ್ ಸಂಖ್ಯೆಗೆ ಜೋಡಣೆಯಾದ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಹಣ ದುರುಪಯೋಗ, ಲೋಪ ದೋಷ ಅಥವಾ ಮಧ್ಯವರ್ತಿಗಳ ಹಾವಳಿ ಇಲ್ಲ ಎಂದು ಸಿ. ಎಂ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದರು.
Share on facebook
Share on google
Share on twitter
Share on linkedin
Share on print
Loading...

ಬೆಂಗಳೂರು, ಜೂ. 10: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಅಭಿವೃದ್ಧಿಪಡಿಸಿರುವ ‘ಡಿ.ಬಿ.ಟಿ’ ಮೊಬೈಲ್ ಅಪ್ಲಿಕೇಶನ್‍ಗೆ ಚಾಲನೆ ನೀಡಿದರು.

ರಾಜ್ಯದಲ್ಲಿ ಈವರೆಗೆ ಸುಮಾರು 120 ಯೋಜನೆಗಳನ್ನು ಈ ವೇದಿಕೆಗೆ ಒಳಪಡಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 12 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತವನ್ನು ಫಲಾನುಭವಿಗಳ ಆಧಾರ್ ಸಂಖ್ಯೆಗೆ ಜೋಡಣೆಯಾದ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಹಣ ದುರುಪಯೋಗ, ಲೋಪ ದೋಷ ಅಥವಾ ಮಧ್ಯವರ್ತಿಗಳ ಹಾವಳಿ ಇಲ್ಲ ಎಂದು ಸಿ. ಎಂ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದರು.

ಕೋವಿಡ್-19ರ ಮೊದಲನೇ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಸರ್ಕಾರವು ಘೋಷಿಸಿದ ಎಲ್ಲಾ ಪ್ಯಾಕೇಜ್‍ಗಳು ಈ ವೇದಿಕೆ ಮೂಲಕವೇ ಪಾವತಿ ಮಾಡಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯದಲ್ಲಿ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಎಲ್ಲ ಯೋಜನೆಗಳನ್ನು ಡಿ.ಬಿ.ಟಿ. ವೇದಿಕೆಯಡಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ವೇದಿಕೆಯು ಫಲಾನುಭವಿಯನ್ನು ಆಧಾರ್ ಸಂಖ್ಯೆ ಮೂಲಕ ಗುರುತಿಸಿ ಫಲಾನುಭವಿಗಳ ಆರ್ಥಿಕ ವಿಳಾಸವಾಗಿ (Financial Address) ಪರಿಗಣಿಸಿ ನಗದು ವರ್ಗಾವಣೆಯನ್ನು ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು.

Loading...

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಹಿತಿಯು ಯು.ಐ.ಡಿ.ಐ. ಜಾಲತಾಣದಲ್ಲಿ ಮಾತ್ರ ಲಭ್ಯವಿದ್ದು ನಾಗರಿಕರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರುವ ಬಗ್ಗೆ ತಿಳಿದುಕೊಳ್ಳಲು ಕಷ್ಟವಾಗಿತ್ತು. ನಾಗರಿಕರ ಆಧಾರ್ ಬ್ಯಾಂಕ್ ಖಾತೆಗೆ ಜೋಡಣೆಯಾಗದೇ ಇದ್ದಲ್ಲಿ ರಾಜ್ಯ ಸರ್ಕಾರವು ನಗದು ಸೌಲಭ್ಯ ವರ್ಗಾವಣೆಗೆ ಬಳಸುತ್ತಿರುವ ಆಧಾರ್ ಆಧಾರಿತ ನಗದು ವರ್ಗಾವಣೆ ವ್ಯವಸ್ಥೆ (Aadhaar Based Payment System) ಮೂಲಕ ಹಣ ಪಡೆಯಲು ಸಾಧ್ಯವಾಗುವುದಿಲ್ಲ. ಇದಲ್ಲ ಬಹಳಷ್ಟು ನಾಗರಿಕರಿಗೆ ತಮ್ಮ ಯಾವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿದೆ ಎಂಬ ಮಾಹಿತಿ ತಿಳಿದಿರುವುದಿಲ್ಲ. ಇದರಿಂದ ಸರ್ಕಾರವು ಯಾವ ಬ್ಯಾಂಕ್ ಖಾತೆಗೆ ನಗದು ಸೌಲಭ್ಯವನ್ನು ಜಮೆ ಮಾಡಿದೆ ಎಂಬ ವಿವರಗಳನ್ನು ತಿಳಿದುಕೊಳ್ಳಲು ಇವರುಗಳಿಗೆ ಬಹಳ ಕಷ್ಟವಾಗುತ್ತದೆ.

ಅಲ್ಲದೆ ಇತ್ತೀಚಿಗೆ ರಾಜ್ಯ ಸರ್ಕಾರವು ನಾಗರಿಕರಿಂದ ಯಾವುದೇ ಅರ್ಜಿ ಪಡೆಯದೇ ಅರ್ಹತೆ ಆಧಾರದ ಮೇಲೆ ನಗದು ವರ್ಗಾವಣೆಯನ್ನು ಮಾಡುತ್ತಿರುವುದರಿಂದ ಇವರುಗಳಿಗೆ ಹಣ ಬ್ಯಾಂಕ್ ಖಾತೆಯಲ್ಲಿ ಜಮೆಯಾಗುವ ಬಗ್ಗೆಯು ಮಾಹಿತಿ ಲಭ್ಯ ಇರುವುದಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಡಿ.ಬಿ.ಟಿ ಮೊಬೈಲ್ ಆಪ್ ಅನ್ನು ಅಭಿವೃದ್ಧಿಪಡಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಆಯಪ್ ಅನ್ನು ನಾಗರಿಕರು ಹೆಚ್ಚು-ಹೆಚ್ಚಾಗಿ ಬಳಸಿದಾಗ ಪಾರದರ್ಶಕತೆ ಇರುವ ಸರ್ಕಾರದ ಉದ್ದೇಶ ಯಶಸ್ವಿಯಾಗಲು ಸಾಧ್ಯ. ಆದ್ದರಿಂದ ನಾಗರೀಕರು ಈ ಆಯಪ್‍ನ ಸದುಪಯೋಗ ಪಡೆದುಕೊಂಡು ಫಲಾನುಭವಿಗಳಿಗೆ ವರ್ಗಾವಣೆಯಾಗಿರುವ ನಗದು ವಿವರವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

Loading...

Submit Your Article