Breaking News
ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಸಾಹುಕಾರನ ಬೆನ್ನಿಗೆ ನಿಂತ ಬಿಜೆಪಿ ನಾಯಕರುಸಾಹುಕಾರನ ತಲೆದಂಡ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆತಿಂಗಳಲ್ಲೇ ಕೋಟಿ ಒಡೆಯನಾದ ನಂಜುಂಡೇಶ್ವರ: ದೇವಸ್ಥಾನದ ಹುಂಡಿಯಲ್ಲಿ 1.11ಕೋಟಿ ಸಂಗ್ರಹಬೃಹದಾಕಾರದ ಅರಳಿ ಮರಕ್ಕೆ ಕೊಡಲಿ ಪೆಟ್ಟು: ಕಡಿದ ಮರದ ಬುಡಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಪರಿಸರ ಪ್ರೇಮಿಗಳುಸಚಿವ ಸಿಪಿ ಯೋಗೀಶ್ವರ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪಜೀವನದ ಪಾಠ ಕಲಿಸಿದ ಕೊರೋನಾ: ವ್ಯಕ್ತಿಯ ಶ್ರಮಕ್ಕೆ ಮೋದಿ ಮೆಚ್ಚುಗೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿಡಿಮಾ 3 ರಿಂದ ಕಾಂಗ್ರೆಸ್‌ನ ಜನಧ್ವನಿ ಯಾತ್ರೆ

ಚಿಕ್ಕಬಳ್ಳಾಪುರ ಸ್ಪೋಟ ಪ್ರಕರಣ: ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ, ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ: ಸಿದ್ದರಾಮಯ್ಯ

ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುವೆ.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಫೆ. 23: ಚಿಕ್ಕಬಳ್ಳಾಪುರದ ಹಿರೇನಾಗವೇಲ್ಲಿ ಗ್ರಾಮದಲ್ಲಿ ‌ಸಂಭವಿಸಿದ ಸ್ಪೋಟ ಪ್ರಕರಣ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುವೆ.

ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಮುಖ್ಯಮಂತ್ರಿ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು,
ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಮುಖ್ಯಮಂತ್ರಿ ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ‌ಗೆ ಮುಖ್ಯಮಂತ್ರಿ ಅವರು ತಕ್ಷಣ ಆದೇಶಿಸಬೇಕು. ಇದಕ್ಕಿಂತ ಮೊದಲು ಈ ಘಟನೆಗೆ‌ ಕಾರಣರಾದ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಅಮಾನತ್‌ನಲ್ಲಿಟ್ಟು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.

ರಾಜ್ಯದಲ್ಲಿಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧ ಇದೆ. ವಿಧಾನಸೌಧದಿಂದ ಜಿಲ್ಲಾಮಟ್ಟದ ವರೆಗೆ ಎಲ್ಲರೂ ಇದರಲ್ಲಿ ಷಾಮೀಲಾಗಿದ್ದಾರೆ.
ಚಿಕ್ಕಬಳ್ಳಾಪುರದ ಈ ಅಕ್ರಮ ಗಣಿಗಾರಿಕೆ, ಉಸ್ತುವಾರಿ ಸಚಿವ ಸುಧಾಕರ್ ಅವರ ಗಮನಕ್ಕೆ ಬಂದಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ 2000ಕ್ಕೂ ಹೆಚ್ಚು ಅನಧಿಕೃತ ಕ್ರಷರ್,‌ಕ್ವಾರಿಗಳಿವೆ‌ ಎಂದು ಹೇಳಲಾಗುತ್ತಿದೆ. ಇವುಗಳ ಪಟ್ಟಿಯನ್ನು ಮುಖ್ಯಮಂತ್ರಿ ಅವರು ತಕ್ಷಣ ಬಿಡುಗಡೆ ಮಾಡಬೇಕು ಮತ್ತು ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚುವ ಕೆಲಸ ಶುರು ಮಾಡಬೇಕು ಎಂದು ಆಗ್ರಹಿಸಿದರು.

Submit Your Article