Breaking News
ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಸಾಹುಕಾರನ ಬೆನ್ನಿಗೆ ನಿಂತ ಬಿಜೆಪಿ ನಾಯಕರುಸಾಹುಕಾರನ ತಲೆದಂಡ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆತಿಂಗಳಲ್ಲೇ ಕೋಟಿ ಒಡೆಯನಾದ ನಂಜುಂಡೇಶ್ವರ: ದೇವಸ್ಥಾನದ ಹುಂಡಿಯಲ್ಲಿ 1.11ಕೋಟಿ ಸಂಗ್ರಹಬೃಹದಾಕಾರದ ಅರಳಿ ಮರಕ್ಕೆ ಕೊಡಲಿ ಪೆಟ್ಟು: ಕಡಿದ ಮರದ ಬುಡಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಪರಿಸರ ಪ್ರೇಮಿಗಳುಸಚಿವ ಸಿಪಿ ಯೋಗೀಶ್ವರ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪಜೀವನದ ಪಾಠ ಕಲಿಸಿದ ಕೊರೋನಾ: ವ್ಯಕ್ತಿಯ ಶ್ರಮಕ್ಕೆ ಮೋದಿ ಮೆಚ್ಚುಗೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿಡಿಮಾ 3 ರಿಂದ ಕಾಂಗ್ರೆಸ್‌ನ ಜನಧ್ವನಿ ಯಾತ್ರೆ

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಚಿವ ಸುಧಾಕರ್ ಸೂಚನೆ

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವೇಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
Share on facebook
Share on google
Share on twitter
Share on linkedin
Share on print

ಚಿಕ್ಕಬಳ್ಳಾಪುರ, ಫೆ. 23: ತಾಲೂಕಿನ ಹಿರೇನಾಗವೇಲ್ಲಿ ಗ್ರಾಮದ ಬಳಿ ಸಂಭವಿಸಿದ ಜಿಲೆಟಿನ್ ಸ್ಪೋಟ ಪ್ರಕರಣದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸಚಿವ ಸುಧಾಕರ್, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವೇಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟ ಸಂಭವಿಸಿದ
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಇದು ಅತ್ಯಂತ ವಿಷಾದಕರ ಘಟನೆಯಾಗಿದ್ದು, ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಘಟನಾ ಸ್ಥಳದಿಂದಲೇ ದೂರವಾಣಿ ಮೂಲಕ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Submit Your Article