Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ನಕ್ಸಲರಿಂದ ಅಪಹರಣವಾದ ಕಮಾಂಡೊ ರಾಕೇಶ್ವರ್ ಸಿಂಗ್ ಚಿತ್ರ ಬಿಡುಗಡೆ; ಮಾತುಕತೆಗೆ ಮಧ್ಯವರ್ತಿ ನೇಮಕಕ್ಕೆ ಒತ್ತಾಯ

ಕಳೆದ ಶನಿವಾರ ಸಿಆರ್​ಪಿಎಫ್​ನ ಕೋಬ್ರಾ ಘಟಕ, ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆಯ ಸಿಬ್ಬಂದಿಯ ಮೇಲೆ ನಕ್ಸಲರು ಹೊಂಚುದಾಳಿ ನಡೆಸಿದ್ದರು. ಈ ವೇಳೆ ಸುಮಾರು ಐದು ತಾಸು ಗುಂಡಿನ ಚಕಮಕಿ ನಡೆದಿತ್ತು. ಭದ್ರತಾಪಡೆಗಳಿಗೆ ಸೇರಿದ 22 ಮಂದಿ ಹುತಾತ್ಮರಾಗಿದ್ದರು.
Share on facebook
Share on google
Share on twitter
Share on linkedin
Share on print

ರಾಯಪುರ, ಏ. 07: ಸಿಆರ್​ಪಿಎಫ್ ಮತ್ತು ಭದ್ರತಾ ಸಿಬ್ಬಂದಿ ಮೇಲೆ ನಕ್ಸಲರು ನಡೆಸಿದ ದಾಳಿಯಲ್ಲಿ ಸೆರೆಸಿಕ್ಕಿರಬಹುದು ಎನ್ನಲಾದ ಕೇಂದ್ರೀಯ ಸಶಸ್ತ್ರ ಮೀಸಲು ಪಡೆಯ (Central Reserve Police Force – CRPF) ಕೋಬ್ರಾ ತುಕಡಿಯ ಯೋಧ ರಾಕೇಶ್ವರ್​ ಸಿಂಗ್ ಅವರ ಚಿತ್ರವನ್ನು ನಕ್ಸಲರು ಬಿಡುಗಡೆ ಮಾಡಿದ್ದಾರೆ. ಮಾವೋವಾದಿ ನಾಯಕನ ವಾಟ್ಸಾಪ್​ ಸಂಖ್ಯೆಯಿಂದ ಅಪಹೃತ ಯೋಧನ ಚಿತ್ರ ಬಿಡುಗಡೆಯಾಗಿದೆ ಎಂದು ಸುಕ್ಮ ಮತ್ತು ಬಿಜಾಪುರದ ಸ್ಥಳೀಯ ಪತ್ರಕರ್ತರು ಮಾಹಿತಿ ನೀಡಿದ್ದಾರೆ. ಅಪಹೃತ ಯೋಧನ ಬಿಡುಗಡೆಗಾಗಿ ಮಾತುಕತೆ ನಡೆಸಬಲ್ಲ ಮಧ್ಯವರ್ತಿಗಳನ್ನು ಗುರುತಿಸುವಂತೆ ಪತ್ರಿಕಾ ಹೇಳಿಕೆಯ ಮೂಲಕ ನಕ್ಸಲರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

ಕಳೆದ ಶನಿವಾರ ಸಿಆರ್​ಪಿಎಫ್​ನ ಕೋಬ್ರಾ ಘಟಕ, ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆಯ ಸಿಬ್ಬಂದಿಯ ಮೇಲೆ ನಕ್ಸಲರು ಹೊಂಚುದಾಳಿ ನಡೆಸಿದ್ದರು. ಈ ವೇಳೆ ಸುಮಾರು ಐದು ತಾಸು ಗುಂಡಿನ ಚಕಮಕಿ ನಡೆದಿತ್ತು. ಭದ್ರತಾಪಡೆಗಳಿಗೆ ಸೇರಿದ 22 ಮಂದಿ ಹುತಾತ್ಮರಾಗಿದ್ದರು. ಈ ವೇಳೆ ಸುಮಾರು 20 ಮಾವೋವಾದಿಗಳನ್ನು ಕೊಲ್ಲಲಾಗಿದೆ ಎಂದು ಭದ್ರತಾ ಪಡೆಗಳ ಸಿಬ್ಬಂದಿ ಹೇಳಿದ್ದರು. ಆದರೆ ಈ ಹೇಳಿಕೆಯನ್ನು ನಿರಾಕರಿಸಿದ್ದ ನಕ್ಸಲರು ತಮ್ಮ ಪಾಳಯದಲ್ಲಿ ಕೇವಲ ನಾಲ್ವರು ಸತ್ತಿದ್ದಾರೆ ಎಂದು ಹೇಳಿದ್ದರು.

ಶೂಟ್​ಔಟ್​ ವೇಳೆ ಸಿಆರ್​ಪಿಎಫ್​ ತುಕಡಿಯಲ್ಲಿದ್ದ ಜಮ್ಮು ಮೂಲದ ರಾಕೇಶ್ವರ್ ಸಿಂಗ್ ಮಾನ್ಹಸ್ ನಾಪತ್ತೆಯಾಗಿದ್ದರು. ಅವರನ್ನು ನಕ್ಸಲರು ಅಪಹರಿಸಿರಬಹುದು ಎಂದು ಶಂಕಿಸಲಾಗಿತ್ತು. ನಾಪತ್ತೆಯಾಗಿದ್ದ ಯೋಧನ ಚಿತ್ರವು ಇಂದು ಮುಂಜಾನೆ 11.27ಕ್ಕೆ ಸ್ಥಳೀಯ ಪತ್ರಕರ್ತರಿಗೆ ಸಿಕ್ಕಿದೆ. ಮಾವೋವಾದಿಗಳ ನಾಯಕ ವಿಕಲ್ಪ ಈ ಫೋಟೊ ಕಳಿಸಿದ್ದಾರೆ ಎಂದು ಸುಕ್ಮದ ಪತ್ರಕರ್ತ ರಾಜಾ ರಾಥೋಡ್ ತಿಳಿಸಿದ್ದಾರೆ.

ನಕ್ಸಲರು ಮಂಗಳವಾರ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ, ‘ಅಪಹೃತ ಸಿಆರ್​ಪಿಎಫ್ ಯೋಧನ ಬಿಡುಗಡೆಗಾಗಿ ಮಾತುಕತೆಗಾಗಿ ಮಧ್ಯವರ್ತಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಿ’ ಎಂದು ಹೇಳಿದೆ.

Submit Your Article