Breaking News
ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಸಾಹುಕಾರನ ಬೆನ್ನಿಗೆ ನಿಂತ ಬಿಜೆಪಿ ನಾಯಕರುಸಾಹುಕಾರನ ತಲೆದಂಡ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆತಿಂಗಳಲ್ಲೇ ಕೋಟಿ ಒಡೆಯನಾದ ನಂಜುಂಡೇಶ್ವರ: ದೇವಸ್ಥಾನದ ಹುಂಡಿಯಲ್ಲಿ 1.11ಕೋಟಿ ಸಂಗ್ರಹಬೃಹದಾಕಾರದ ಅರಳಿ ಮರಕ್ಕೆ ಕೊಡಲಿ ಪೆಟ್ಟು: ಕಡಿದ ಮರದ ಬುಡಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಪರಿಸರ ಪ್ರೇಮಿಗಳುಸಚಿವ ಸಿಪಿ ಯೋಗೀಶ್ವರ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪಜೀವನದ ಪಾಠ ಕಲಿಸಿದ ಕೊರೋನಾ: ವ್ಯಕ್ತಿಯ ಶ್ರಮಕ್ಕೆ ಮೋದಿ ಮೆಚ್ಚುಗೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿಡಿಮಾ 3 ರಿಂದ ಕಾಂಗ್ರೆಸ್‌ನ ಜನಧ್ವನಿ ಯಾತ್ರೆ

ನನ್ನ ಹೇಳಿಕೆಯನ್ನು ತಪ್ಪು ಅರ್ಥಗಳಿಗೆ ಎಡೆಮಾಡಬೇಡಿ : ಸಾಹಿತಿ ಡಾ.ದೊಡ್ಡರಂಗೇಗೌಡ

ಹಾಸನದಲ್ಲಿ ತಾವು ಆಡಿದ ‘ಭಾರತದ ಸಂವಿಧಾನದಲ್ಲಿ ಮಾರ್ಪಾಡು ಮಾಡುವುದು ಸೂಕ್ತವಾದೀತು’ ಎಂಬ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಅವರು, ನಮ್ಮ ಬಹುಮುಖಿ ರಾಷ್ಟ್ರ. ಆದರೂ ಏಕರೂಪದ ಶಿಕ್ಷಣ ಇರಲಿಲ್ಲ. ಈಗ ನಮಗೆ ನಮ್ಮ ದೇಶದಲ್ಲಿ ಏಕರೂಪ ಶಿಕ್ಷಣ ಅನಿವಾರ್ಯ ಎಂದು ಅನಿಸುತ್ತದೆ. ಬಡವರು ಬಡವರಾಗೇ ಉಳಿಯುತ್ತಿದ್ದಾರೆ.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಫೆ. 22: ನನ್ನ ಹೇಳಿಕೆ ದಲಿತರ ವಿರುದ್ಧವಾದದ್ದಲ್ಲ, ಉಳ್ಳವರ ವಿರುದ್ಧವಾದದ್ದು, ಬಡವರ ಪರವಾದದ್ದು. ಇದು ತಪ್ಪು ಅರ್ಥಗಳಿಗೆ ಎಡೆ ಮಾಡಬಾರದು. ಇದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಸಾಹಿತಿ ಪ್ರೊ. ದೊಡ್ಡರಂಗೇಗೌಡ ಸ್ಪಷ್ಟನೆ ನೀಡಿದ್ದಾರೆ.

ಹಾಸನದಲ್ಲಿ ತಾವು ಆಡಿದ ‘ಭಾರತದ ಸಂವಿಧಾನದಲ್ಲಿ ಮಾರ್ಪಾಡು ಮಾಡುವುದು ಸೂಕ್ತವಾದೀತು’ ಎಂಬ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಅವರು, ನಮ್ಮ ಬಹುಮುಖಿ ರಾಷ್ಟ್ರ. ಆದರೂ ಏಕರೂಪದ ಶಿಕ್ಷಣ ಇರಲಿಲ್ಲ. ಈಗ ನಮಗೆ ನಮ್ಮ ದೇಶದಲ್ಲಿ ಏಕರೂಪ ಶಿಕ್ಷಣ ಅನಿವಾರ್ಯ ಎಂದು ಅನಿಸುತ್ತದೆ. ಬಡವರು ಬಡವರಾಗೇ ಉಳಿಯುತ್ತಿದ್ದಾರೆ. ಬಲ್ಲಿದರು ಹೆಚ್ಚಿನ ಲಾಭಗಳನ್ನು ಗಳಿಸುತ್ತಿದ್ದಾರೆ. ‘ಎಲ್ಲರಿಗೂ ಒಂದೇ ರೀತಿ ಶಿಕ್ಷಣ ದೊರೆಯುಂತಾಗಬೇಕು. ಆಗ ಮಾತ್ರ ಸಮಾನತೆ ಸಾಧ್ಯ. ಉಳ್ಳವರು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ’ ಹೀಗಾಗಿ ‘ಸಾಮಾಜಿಕ’ ನ್ಯಾಯ ಸಿಗದಂತಾಗಿದೆ.

೧೨ನೇ ಶತಮಾನದಲ್ಲಿ- ಅದರಲ್ಲೂ ಅನುಭವ ಮಂಟಪದ ಮಾದರಿ ಎಲ್ಲರಿಗೂ (ಹಿಂದುಳಿದವರಿಗೆ) ಹೆಚ್ಚಿನ ಅವಕಾಶ ಸಿಗುವಂತಾಗಬೇಕು. ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗಬಾರದು; ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಮೊದಲು ನಮ್ಮಲ್ಲಿ ಏಕರೂಪದ ಶಿಕ್ಷಣ ಜಾರಿಗೆ ಬರಬೇಕು. ಈ ನಿಟ್ಟಿನಲ್ಲಿ ಭಾರತದ ಸಂವಿಧಾನದಲ್ಲಿ ಮಾರ್ಪಾಟು ಮಾಡುವುದು ಸೂಕ್ತವಾದೀತು ಎಂದಿದ್ದೆ ಎಂದು ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

Submit Your Article