Breaking News
‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆದೆಹಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಕೊರೊನಾ ಸೋಂಕಿನಿಂದ ಮೃತ

ಆಂಗ್ಲರ ಆರ್ಭಟ, ಪರದಾಡಿದ ಭಾರತ; 2ನೇ ಏಕದಿನ ಇಂಗ್ಲೆಂಡ್‌ಗೆ ಜಯ: ಸರಣಿ ಸಮಬಲ

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿರಾದ ರೋಹಿತ್ ಶರ್ಮಾ(25) ಹಾಗೂ ಶಿಖರ್ ಧವನ್(4) ಬಹುಬೇಗನೆ ಕಳೆದುಕೊಂಡ ಭಾರತಕ್ಕೆ ನಾಯಕ ವಿರಾಟ್ ಕೊಹ್ಲಿ(66) ಹಾಗೂ ಕೆ.ಎಲ್.ರಾಹುಲ್‌ (108) ಉತ್ತಮ ಜತೆಯಾಟದ ಮೂಲಕ ಚೇತರಿಕೆ ನೀಡಿದರು.
Share on facebook
Share on google
Share on twitter
Share on linkedin
Share on print

ಪುಣೆ, ಮಾ. 27: ಆರಂಭಿಕ ಆಟಗಾರ ಜಾನಿ ಬೇರ್ಸ್ಟೋ(124) ಶತಕ ಹಾಗೂ ಬೆನ್ ಸ್ಟೋಕ್ಸ್(99) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ 6 ವಿಕೆಟ್‌ಗಳ ಗೆಲುವು ಸಾಧಿಸಿತು.

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ.  ಆರಂಭಿರಾದ ರೋಹಿತ್ ಶರ್ಮಾ(25) ಹಾಗೂ ಶಿಖರ್ ಧವನ್(4) ಬಹುಬೇಗನೆ ಕಳೆದುಕೊಂಡ ಭಾರತಕ್ಕೆ ನಾಯಕ ವಿರಾಟ್ ಕೊಹ್ಲಿ(66) ಹಾಗೂ ಕೆ.ಎಲ್.ರಾಹುಲ್‌ (108) ಉತ್ತಮ ಜತೆಯಾಟದ ಮೂಲಕ ಚೇತರಿಕೆ ನೀಡಿದರು.

ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಹುಲ್ ಶತಕ ಸಿಡಿಸಿ ಮಿಂಚಿದ್ದಾರೆ‌. ವಿಕೆಟ್ ಕೀಪರ್‌ ರಿಷಭ್ ಪಂತ್‌(77) ಸ್ಟೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದರಲ್ಲದೆ, ತಂಡದ ಮೊತ್ತ ಮುನ್ನೂರರ ಗಡಿ ದಾಟಿಸಿದರು. ಕೊನೆಯಲ್ಲಿ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ(35) ಉಪಯುಕ್ತ ಕಾಣಿಕೆ ನೀಡುವ ಮೂಲಕ ಟೀಂ ಇಂಡಿಯಾ 50 ಓವರ್‌ನಲ್ಲಿ 6 ವಿಕೆಟ್ ನಷ್ಟಕ್ಕೆ 336 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ, ಇಂಗ್ಲೆಂಡ್‌ ತನ್ನ ಎಂದಿನ ಸ್ಪೋಟಕ ಆಟದ ಮೂಲಕ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದ ಜಾನಿ ಬೆಸ್ಟೊ(124) ಜೇಸನ್ ರಾಯ್(55) ಶತಕದ ಆರಂಭ ಒದಗಿಸಿದರು. ಟೀಂ ಇಂಡಿಯಾ ಬೌಲರ್ ಮೇಲೆ ಸವಾರಿ ಮಾಡಿದ ಬೇರ್ಸ್ಟೋ ಅಬ್ಬರದ ಶತಕ ಸಿಡಿಸಿ ಮಿಂಚಿದರು. 2ನೇ ವಿಕೆಟ್ ಜೊತೆಯಾಟದಲ್ಲಿ ಇವರಿಗೆ ಉತ್ತಮ ಸಾಥ್ ನೀಡಿದ ಬೆನ್ ಸ್ಟ್ರೋಕ್ಸ್(99) ಶತಕ ವಂಚಿತರಾಗಿ ನಿರಾಸೆ ಅನುಭವಿಸಿದರು.

ಅಗ್ರ ಕ್ರಮಾಂಕದ ಆಟಗಾರರ ಜವಾಬ್ದಾರಿಯುವ ಆಟದಿಂದ ಪಂದ್ಯವನ್ನು ತನ್ನ ಹಿಡಿತಕ್ಕೆ ಪಡೆದ ಇಂಗ್ಲೆಂಡ್, ಅಂತಿಮವಾಗಿ ಇಂಗ್ಲೆಂಡ್‌ 43.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1-1ರ ಸಮಬಲ ಸಾಧಿಸಿತು. ಉಭಯ ತಂಡಗಳ ನಡುವಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಮಾ.29ಕ್ಕೆ ನಡೆಯಲಿದೆ. ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ ಗುರಿ ತಲುಪುವಲ್ಲಿ ಇಂಗ್ಲೆಂಡ್ ತಂಡಕ್ಕೆ ನೆರವಾದ ಜಾನಿ ಬೇರ್‌ಸ್ಟೋ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು.

Submit Your Article