Breaking News
‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆದೆಹಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಕೊರೊನಾ ಸೋಂಕಿನಿಂದ ಮೃತ

“ಅನುಗ್ರಹ” ಯೋಜನೆಯನ್ನು ಮರು ಜಾರಿಗೊಳಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರಿನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕುರಿಗಳನ್ನು ಕಾಡಿನಲ್ಲಿ ಮೇಯಿಸಲು ಹಾಗೂ ಅವುಗಳಿಗೆ ಕಾಯಿಲೆ ಕಾಣಿಸಿಕೊಂಡಾಗ ಕಡ್ಡಾಯವಾಗಿ ಚಿಕಿತ್ಸೆ ಮತ್ತು ಔಷಧ ನೀಡಲು ಅವಕಾಶ ಕಲ್ಪಿಸಿದ್ದು ನಮ್ಮ ಸರ್ಕಾರ.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಮಾ. 01: ರಾಜ್ಯ ಸರ್ಕಾರ ಕುರಿ, ಮೇಕೆಗಳು ಆಕಸ್ಮಿಕವಾಗಿ ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ “ಅನುಗ್ರಹ” ಯೋಜನೆಯನ್ನು ಮರು ಜಾರಿಗೊಳಿಸಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕುರಿಗಳನ್ನು ಕಾಡಿನಲ್ಲಿ ಮೇಯಿಸಲು ಹಾಗೂ ಅವುಗಳಿಗೆ ಕಾಯಿಲೆ ಕಾಣಿಸಿಕೊಂಡಾಗ ಕಡ್ಡಾಯವಾಗಿ ಚಿಕಿತ್ಸೆ ಮತ್ತು ಔಷಧ ನೀಡಲು ಅವಕಾಶ ಕಲ್ಪಿಸಿದ್ದು ನಮ್ಮ ಸರ್ಕಾರ. ಇದರ ಜೊತೆಗೆ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ರಚನೆಯಾಗಿದ್ದೂ ನಮ್ಮ ಸರ್ಕಾರದ ಅವಧಿಯಲ್ಲಿ.

ಕುರಿ, ಮೇಕೆ, ದನ ಮತ್ತು ಎಮ್ಮೆಗಳು ಸಾವಿಗೀಡಾದಾಗ ಅದರ ಮಾಲೀಕರಿಗೆ ನೆರವಾಗುವ ದೃಷ್ಟಿಯಿಂದ ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಅನುಗ್ರಹ ಯೋಜನೆ ಜಾರಿಗೆ ತಂದಿದ್ದೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷದಿಂದ ಯೋಜನೆ ಸ್ಥಗಿತಗೊಳಿಸಿದೆ ಹಾಗೂ ರೂ.30 ಕೋಟಿ ಬಾಕಿಯನ್ನೂ ಪಾವತಿ ಮಾಡಿಲ್ಲ.

ಕುರಿ ಸಾಕಾಣಿಕೆ ಕೇವಲ ಒಂದು ಸಮುದಾಯಕ್ಕೆ ಮಾತ್ರವೇ ಸೀಮಿತವಾಗಿಲ್ಲ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ತೋಟದಲ್ಲಿ 500 ಕುರಿಗಳನ್ನು ಸಾಕಣೆ ಮಾಡುತ್ತಿದ್ದಾರೆ. ಕುರಿ ಸಾಕಣೆ ಎಂಬುದು ಬದುಕಿಗೆ ಒಂದು ದಾರಿ. ಒಂದು ಕುರಿಗೆ ಹತ್ತರಿಂದ ಇಪ್ಪತ್ತು ಸಾವಿರ ರೂ.ಗಳ ಬೆಲೆಯಿದೆ. ಆ ಕುರಿ ಸತ್ತರೆ ಕುರಿಗಾರರ ಬದುಕಿನ ದಾರಿಯೇ ಮುಚ್ಚಿಹೋಗುತ್ತದೆ. ಹಾಗಾಗಿ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪರಿಹಾರದ ಮೊತ್ತವನ್ನು ಹತ್ತು ಸಾವಿರ ರೂ.ಗಳಿಗೆ ಏರಿಕೆ ಮಾಡುತ್ತೇವೆ ಎಂದರು.

Submit Your Article