Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಮತ್ತೆ ಏರಿಕೆಯಾಯ್ತು ಗ್ಯಾಸ್ ಬೆಲೆ: ಜನರ ಜೇಬಿಗೆ ಬಿತ್ತು ಕತ್ತರಿ

ಎಲ್‌ಪಿಜಿ ಸಿಲಿಂಡರ್‌ ಬೆಲೆ ಸೋಮವಾರ ಮತ್ತೆ 25 ರೂ. ಹೆಚ್ಚಳವಾಗಿದೆ. ಮೂರು ದಿನಗಳ ಹಿಂದೆಯಷ್ಟೇ 25 ರೂ. ಏರಿಕೆಯಾಗಿತ್ತು. ಬೆಲೆ ಏರಿಕೆಯಿಂದಾಗಿ ಈಗ 5 ಕೆ.ಜಿ. ತೂಕದ ಗ್ಯಾಸ್‌ ಸಿಲಿಂಡರ್‌ಗೆ 304 ಹಾಗೂ 14.2 ಕೆ.ಜಿ. ತೂಕದ ಗ್ಯಾಸ್‌ ಸಿಲಿಂಡರ್‌ಗೆ 824 ರೂ. ತಲುಪಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ.
Share on facebook
Share on google
Share on twitter
Share on linkedin
Share on print

ಹೊಸದಿಲ್ಲಿ, ಮಾ. 01: ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ದಿನನಿತ್ಯ ಬಳಕೆ ವಸ್ತುಗಳ ಬೆಲೆಯೂ ಏರುತ್ತಲೇ ಇದೆ. ಈ ಮಧ್ಯೆ ಗ್ಯಾಸ್‌ ಸಿಲಿಂಡರ್‌ ಬೆಲೆ ಮತ್ತೆ ಏರಿಕೆ ಕಂಡಿದ್ದು, ಜನತೆಗೆ ಶಾಕ್‌ ನೀಡಿದೆ.

ಎಲ್‌ಪಿಜಿ ಸಿಲಿಂಡರ್‌ ಬೆಲೆ ಸೋಮವಾರ ಮತ್ತೆ 25 ರೂ. ಹೆಚ್ಚಳವಾಗಿದೆ. ಮೂರು ದಿನಗಳ ಹಿಂದೆಯಷ್ಟೇ 25 ರೂ. ಏರಿಕೆಯಾಗಿತ್ತು. ಬೆಲೆ ಏರಿಕೆಯಿಂದಾಗಿ ಈಗ 5 ಕೆ.ಜಿ. ತೂಕದ ಗ್ಯಾಸ್‌ ಸಿಲಿಂಡರ್‌ಗೆ 304 ಹಾಗೂ 14.2 ಕೆ.ಜಿ. ತೂಕದ ಗ್ಯಾಸ್‌ ಸಿಲಿಂಡರ್‌ಗೆ 824 ರೂ. ತಲುಪಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ.

ಫೆಬ್ರವರಿ ತಿಂಗಳಿನಿಂದ ಈವರೆಗೆ ಒಟ್ಟು 4 ಬಾರಿ ಗ್ಯಾಸ್​ ಬೆಲೆ ಹೆಚ್ಚಾಗಿದೆ. ಕಳೆದ ವಾರವೂ ಗ್ಯಾಸ್​ ಸಿಲಿಂಡರ್​ ಬೆಲೆಯು 25 ರೂಪಾಯಿ ಹೆಚ್ಚಾಗಿತ್ತು. ಆ ಮೂಲಕ 776 ಇದ್ದ ಗ್ಯಾಸ್ ಸಿಲಿಂಡರ್ ಬೆಲೆ 801 ರೂಪಾಯಿಗೆ ಏರಿಕೆಯಾಗಿತ್ತು. ಈ ಮೊದಲು 50 ರೂಪಾಯಿ ಹೆಚ್ಚಾಗಿತ್ತು. ಕಳೆದ 5 ದಿನಗಳಲ್ಲಿ 2 ಬಾರಿ ಗ್ಯಾಸ್​ ಸಿಲಿಂಡರ್ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಹಾಕಿದೆ.

ಈ ಮಾರಕ ಕೊರೋನಾ ಕೇಕೆ ಹಾಕುತ್ತಿರುವ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪೆಟ್ರೋಲ್​-ಡೀಸೆಲ್​ ಬೆಲೆ, ಧಾನ್ಯಗಳ ಬೆಲೆ, ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆ ಹಾಗೂ ಅಡುಗೆ ಎಣ್ಣೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದು ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದ್ದು, ಜೇಬು ಸುಡುತ್ತಿದೆ.

ಇನ್ನು, ಗ್ಯಾಸ್​ ಸಿಲಿಂಡರ್ ದರ ಏರಿಕೆಯಾದ ಹಿನ್ನೆಲೆ, ಆಟೋ ಚಾಲಕರು ತತ್ತರಿಸಿ ಹೋಗಿದ್ದಾರೆ. ಗ್ಯಾಸ್ ಸಿಲಿಂಡರ್​ ಬೆಲೆ ಹೆಚ್ಚಾಗಿಸುವುದರಿಂದ ಪ್ರಯಾಣ ದರ ಏರಿಕೆ ಮಾಡುವಂತೆ ಆಟೋ ಚಾಲಕರು ಹೇಳುತ್ತಿದ್ದಾರೆ. ಕನಿಷ್ಠ ದರವನ್ನು 36 ರೂ.ಗೆ ಏರಿಸಬೇಕೆಂದು ಆಟೋ ಚಾಲಕರು ಆಗ್ರಹಿಸುತ್ತಿದ್ದಾರೆ.

Submit Your Article