Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

Gold Rate Today; ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ

ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ಚಿನ್ನದ ದರ ಭಾರೀ ಏರಿಕೆಯಾಗಿದೆ. 2 ದಿನಗಳಿಂದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,510 ರೂ. ಇದ್ದುದು ನಿನ್ನೆಯಿಂದ 47,680 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,510 ರೂ. ಇತ್ತು. ಇಂದು ಆ ಬೆಲೆ 48,680ಕ್ಕೆ ಏರಿದೆ.
Share on facebook
Share on google
Share on twitter
Share on linkedin
Share on print
Loading...

ನವದೆಹಲಿ, ಜೂ. 10: ದಾಖಲೆಯ ಮೊತ್ತಕ್ಕೇರಿದ್ದ ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ. ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ದೇಶದ ವಿವಿಧ ನಗರಗಳಲ್ಲಿ ಚಿನ್ನಕ್ಕೆ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ Gold Price 2 ದಿನಗಳ ಹಿಂದೆ 49,970 ರೂ. ಇದ್ದುದು, ನಿನ್ನೆಯಿಂದ 100 ರೂ. ಏರಿಕೆ ಕಾಣುವ ಮೂಲಕ 50,070 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,800 ರೂ. ಇದ್ದುದು ನಿನ್ನೆಯಿಂದ 45,900 ರೂ.ಗೆ ಏರಿದೆ. 2 ದಿನಗಳ ಹಿಂದೆ 71,000 ರೂ.ಇದ್ದ Silver Price ಇಂದು 71,900ಕ್ಕೆ ಏರಿದೆ.

ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ಚಿನ್ನದ ದರ ಭಾರೀ ಏರಿಕೆಯಾಗಿದೆ. 2 ದಿನಗಳಿಂದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,510 ರೂ. ಇದ್ದುದು ನಿನ್ನೆಯಿಂದ 47,680 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,510 ರೂ. ಇತ್ತು. ಇಂದು ಆ ಬೆಲೆ 48,680ಕ್ಕೆ ಏರಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 50,070 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,900 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 51,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 71,400 ರೂ. ಇದ್ದುದು ಇಂದು 71,900 ರೂ. ಗೆ ಏರಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 71,900 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 75,300 ರೂ. ಆಸುಪಾಸಿನಲ್ಲಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

Loading...

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

Loading...

Submit Your Article