Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ: ಶಿಖರ್‌ ಧವನ್ ನಾಯಕತ್ವದ ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ

ಇಂಗ್ಲೆಂಡ್ ಪ್ರವಾಸದಲ್ಲಿರುವ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಹೊಸ ಆಟಗಾರರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಜುಲೈ ತಿಂಗಳಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ.
Share on facebook
Share on google
Share on twitter
Share on linkedin
Share on print
Loading...

ಮುಂಬೈ, ಜೂ. 11: ಶ್ರೀಲಂಕಾ ವಿರುದ್ಧದ ಸೀಮಿತ ಓವರ್​ಗಳ ಕ್ರಿಕೆಟ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟವಾಗಿದ್ದು, ಶಿಖರ್ ಧವನ್ ನಾಯಕತ್ವದಲ್ಲಿ ಲಂಕಾ ಪ್ರವಾಸ ಕೈಗೊಂಡಿರುವ ತಂಡದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್ ಪ್ರವಾಸದಲ್ಲಿರುವ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಹೊಸ ಆಟಗಾರರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಜುಲೈ ತಿಂಗಳಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಅನುಭವಿ ಆಟಗಾರ ಶಿಖರ್ ಧವನ್ ಗೆ ನಾಯಕತ್ವ ನೀಡಲಾಗಿದ್ದು, ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪ ನಾಯಕನನ್ನಾಗಿ ನೇಮಿಸಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡವನ್ನು ಪ್ರಕಟಿಸಿದೆ.

Loading...

ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮಿಂಚಿರುವ ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ದೀಪಕ್ ಚಹರ್ ಜೊತೆಗೆ ಐಪಿಎಲ್‍ನಲ್ಲಿ ಅಬ್ಬರಿಸಿದ್ದ ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ನಿತೀಶ್ ರಾಣಾ, ರಾಹುಲ್ ಚಹರ್, ಚೇತನ್ ಸಕಾರಿಯಾ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಆಲ್‍ರೌಂಡರ್ ಕೃಷ್ಣಪ್ಪ ಗೌತಮ್, ಸ್ಪಿನ್ನರ್ ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ವೇಗಿ ನವದೀಪ್ ಸೈನಿ ಕೂಡ ತಂಡದಲ್ಲಿದ್ದಾರೆ.

Loading...

Submit Your Article