Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

KRS ಡ್ಯಾಂ ಮೇಲೆ ಜೀಪ್ ಸವಾರಿ: ಜಾಲಿ ರೈಡ್ ಮಾಡಲು ಸಾತ್ ಕೊಟ್ಟ ಪೋಲೀಸಪ್ಪ ಸಸ್ಪೆಂಡ್

ಶ್ರೀರಂಗಪಟ್ಟಣ ತಾಲೂಕಿನ ಅಣೆಕಟ್ಟಿನ ಮೇಲೆ ಪೊಲೀಸ್ ಜೀಪ್ ಚಲಾಯಿಸುವುದಕ್ಕೆ ಅನುವು ಮಾಡಿಕೊಟ್ಟಿದ್ದಲ್ಲದೆ ಆತನಿಗೆ ಜೀಪ್‌ ನೀಡುವ ಮೂಲಕ ಸರ್ಕಾರಿ ಸೌಲಭ್ಯ ದುರ್ಬಳಕೆ ಮಾಡಿಕೊಂಡ ಆರೋಪದಡಿಯಲ್ಲಿ ಕರ್ನಾಟಕ ಕೈಗಾರಿಕಾ ಭದ್ರತೆಯ 3ನೇ ಪಡೆಯ ಪೋಲೀಸ್‌ ಇನ್ಸ್‌ಪೆಕ್ಟರ್ ಎಸ್‌.ಬಿ.ಸ್ವಾಮಿ ಅವರನ್ನು ಅಮಾನತ್ತು ಮಾಡಲಾಗಿದೆ.
Share on facebook
Share on google
Share on twitter
Share on linkedin
Share on print

ಮಂಡ್ಯ, ಮಾ. 02: KRS ಆಣೆಕಟ್ಟೆಯ ಮೇಲೆ ಯುವಕನೊಬ್ಬ ಸರ್ಕಾರಿ ಜೀಪಿನಲ್ಲಿ ಮೋಜಿನ ಸವಾರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀಪ್‌ ನೀಡಿದ್ದ ಪೋಲೀಸ್‌ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಅಣೆಕಟ್ಟಿನ ಮೇಲೆ ಪೊಲೀಸ್ ಜೀಪ್ ಚಲಾಯಿಸುವುದಕ್ಕೆ ಅನುವು ಮಾಡಿಕೊಟ್ಟಿದ್ದಲ್ಲದೆ ಆತನಿಗೆ ಜೀಪ್‌ ನೀಡುವ ಮೂಲಕ ಸರ್ಕಾರಿ ಸೌಲಭ್ಯ ದುರ್ಬಳಕೆ ಮಾಡಿಕೊಂಡ
ಆರೋಪದಡಿಯಲ್ಲಿ ಕರ್ನಾಟಕ ಕೈಗಾರಿಕಾ ಭದ್ರತೆಯ 3ನೇ ಪಡೆಯ ಪೋಲೀಸ್‌ ಇನ್ಸ್‌ಪೆಕ್ಟರ್ ಎಸ್‌.ಬಿ.ಸ್ವಾಮಿ ಅವರನ್ನು ಅಮಾನತ್ತು ಮಾಡಲಾಗಿದೆ.

ಯುವಕನೊಬ್ಬ ಸರ್ಕಾರಿ ಜೀಪ್ ಚಲಾಯಿಸುತ್ತಿದ್ದರೆ ಪೊಲೀಸ್ ಅಧಿಕಾರಿ ಪಕ್ಕದಲ್ಲಿ ಕೂತು ಮೊಬೈಲ್ ನಲ್ಲಿ ದೃಶ್ಯ ಸೆರೆ ಹಿಡಿದಿದ್ದರು. ಈ ದೃಶಯಾವಳಿ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದ್ದು ಮಾಧ್ಯಮಗಳೂ ವರದಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು, ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಸಸ್ಪೆಂಡ್ ಆದೇಶ ಹೊರಡಿಸಿದ್ದಾರೆ. ಭದ್ರತೆಯ ದೃಷ್ಟಿಯಿಂದ ಆಣೆಕಟ್ಟೆಯ ಮೇಲೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿದರೂ ಯುವಕ ಮೋಜಿನ ಸವಾರಿ ಮಾಡಲು ಅವಕಾಶ ನೀಡಲಾಗಿರುವುದರಿಂದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Submit Your Article