Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೂ ಮಾಸ್ಕ್ ಕಡ್ಡಾಯ: ದೆಹಲಿ ಹೈ ಕೋರ್ಟ್

ಏಕಾಂಗಿಯಾಗಿ ಮಾಸ್ಕ್ ಧರಿಸದೇ ಕಾರಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ದಂಢ ವಿಧಿಸಿದ್ದಾರೆ ಎಂದು ಪ್ರಶ್ನಿಸಿದ್ದ ಅರ್ಜಿದಾರರ ವಿಚಾರಣೆಯ ಬಳಿಕ ನ್ಯಾಯಾಧೀಶೆ ಪ್ರತಿಭಾ ಎಂ. ಸಿಂಗ್ ಈ ಹೇಳಿಕೆ ನೀಡಿದ್ದಾರೆ. ನೀವು ಕಾರಿನಲ್ಲಿ ಏಕಾಂಗಿಯಾಗಿದ್ದರೂ ಏಕೆ ಮಾಸ್ಕ್​ ಧರಿಸಲು ಆಕ್ಷೇಪಿಸುತ್ತೀರಿ? ಇದು ನಿಮ್ಮ ವೈಯಕ್ತಿಕ ಸುರಕ್ಷತೆಗಾಗಿ ಎಂದು ನ್ಯಾಯಾಧೀಶರು ಹೇಳಿದ್ದಾರೆ.
Share on facebook
Share on google
Share on twitter
Share on linkedin
Share on print

ದೆಹಲಿ, ಏ. 07: ಕಾರಿನಲ್ಲಿ ಒಬ್ಬರೇ ಪ್ರಯಾಣ ಮಾಡುತ್ತಿದ್ದರೂ ಸಹ ಮಾಸ್ಕ್ ಧರಿಸಲೇಬೇಕು ಎಂದು ದೆಹಲಿ ಹೈಕೋರ್ಟ್​ ಇಂದು ಆದೇಶ ಹೊರಡಿಸಿದೆ. ಕೊರೊನಾ ಸಾಂಕ್ರಾಮಿಕ ರೋಗ ಎಲ್ಲೆಡೆ ಆವರಿಸಿರುವುದರಿಂದ ಮಾಸ್ಕ್ ಧರಿಸುವುದು ವ್ಯಕ್ತಿಗೆ ಮತ್ತು ಸುತ್ತಲಿನ ಜನರಿಗೂ ‘ಸುರಕ್ಷಾ ಕವಚ’ ಆಗಲಿದೆ ಎಂದು ಹೈಕೋರ್ಟ್ ಆದೇಶ​ ನೀಡಿದೆ.

ಏಕಾಂಗಿಯಾಗಿ ಮಾಸ್ಕ್ ಧರಿಸದೇ ಕಾರಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ದಂಢ ವಿಧಿಸಿದ್ದಾರೆ ಎಂದು ಪ್ರಶ್ನಿಸಿದ್ದ ಅರ್ಜಿದಾರರ ವಿಚಾರಣೆಯ ಬಳಿಕ ನ್ಯಾಯಾಧೀಶೆ ಪ್ರತಿಭಾ ಎಂ. ಸಿಂಗ್ ಈ ಹೇಳಿಕೆ ನೀಡಿದ್ದಾರೆ. ನೀವು ಕಾರಿನಲ್ಲಿ ಏಕಾಂಗಿಯಾಗಿದ್ದರೂ ಏಕೆ ಮಾಸ್ಕ್​ ಧರಿಸಲು ಆಕ್ಷೇಪಿಸುತ್ತೀರಿ? ಇದು ನಿಮ್ಮ ವೈಯಕ್ತಿಕ ಸುರಕ್ಷತೆಗಾಗಿ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಕೊರೊನಾ ಸೋಂಕಿನ ಬಿಕ್ಕಟ್ಟು ದಿನೇ ದಿನೇ ಹೆಚ್ಚುತ್ತಿದೆ. ಲಸಿಕೆಯನ್ನು ಕೂಡಾ ನೀಡಲಾಗುತ್ತಿದೆ. ವ್ಯಕ್ತಿ ಲಸಿಕೆ ಪಡೆದಿದ್ದರೂ ಕೂಡಾ ಮಾಸ್ಕ್​ ಧರಿಸಬೇಕು ಎಂದು ಅವರು ಹೇಳಿದ್ದಾರೆ.

ದಾರಿಯಲ್ಲಿ ಸಾಗುವಾಗ ಮಧ್ಯ ಸಿಗ್ನಲ್ ಬಿದ್ದರೆ ಕಾರನ್ನು ನಿಲ್ಲಿಸುತ್ತೇವೆ. ಕಾರಿನ ಕಿಟಕಿಯನ್ನೂ ತೆರೆಯುತ್ತೇವೆ. ಕೊರೊನಾ ಸೋಂಕು ಎಷ್ಟು ಭಯಂಕರವಾಗಿದೆ ಎಂದರೆ ಆ ಸಮಯದಲ್ಲಾದರೂ ಸೋಂಕು ವ್ಯಕ್ತಿಗೆ ತಗುಲಿ ಪರಿಣಾಮ ಬೀರಬಲ್ಲದು ಎಂದು ಅವರು ತಿಳಿಸಿದ್ದಾರೆ.

ದೆಹಲಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣದ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಹೀಗೆ ಆದೇಶ ಹೊರಡಿಸಿದೆ.

Submit Your Article