Breaking News
‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆದೆಹಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಕೊರೊನಾ ಸೋಂಕಿನಿಂದ ಮೃತ

ಕೊರೊನಾ ಎರಡನೇ ಡೋಸ್ ಲಸಿಕೆ ಪಡೆದ ಪ್ರಧಾನಿ: ಎಲ್ಲರೂ ವ್ಯಾಕ್ಸಿನ್ ಪಡೆಯುವಂತೆ ಕೋರಿದ ಮೋದಿ

ಇಂದು ನಾನು ದೆಹಲಿಯ ಏಮ್ಸ್ ನಲ್ಲಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದೇನೆ. ಸೋಂಕು ತಡೆಗೆ ಇರುವ ಕೆಲವು ವಿಧಾನಗಳಲ್ಲಿ ವ್ಯಾಕ್ಸಿನೇಷನ್ ಕೂಡ ಒಂದಾಗಿದೆ. ನೀವು ಲಸಿಕೆಗೆ ಅರ್ಹರಾಗಿದ್ದರೆ ಶೀಘ್ರದಲ್ಲೇ CoWin.gov.in. ಮೂಲಕ ಹೆಸರು ನೋಂದಾಯಿಸಿಕೊಳ್ಳಿ ಎಂದು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.
Share on facebook
Share on google
Share on twitter
Share on linkedin
Share on print

ನವದೆಹಲಿ, ಏ. 08: ಪ್ರಧಾನಿ ನರೇಂದ್ರ ಮೋದಿ ಗುರುವಾರ ದೆಹಲಿಯ ಏಮ್ಸ್’ನಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡರು.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ನಾನು ದೆಹಲಿಯ ಏಮ್ಸ್ ನಲ್ಲಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದೇನೆ. ಸೋಂಕು ತಡೆಗೆ ಇರುವ ಕೆಲವು ವಿಧಾನಗಳಲ್ಲಿ ವ್ಯಾಕ್ಸಿನೇಷನ್ ಕೂಡ ಒಂದಾಗಿದೆ. ನೀವು ಲಸಿಕೆಗೆ ಅರ್ಹರಾಗಿದ್ದರೆ ಶೀಘ್ರದಲ್ಲೇ CoWin.gov.in. ಮೂಲಕ ಹೆಸರು ನೋಂದಾಯಿಸಿಕೊಳ್ಳಿ ಎಂದು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಮೋದಿ ಅವರಿಗೆ ಲಸಿಕೆ ನೀಡಿದ ಇಬ್ಬರು ದಾದಿಯಲ್ಲಿ ಒಬ್ಬರು ಪುದುಚೇರಿಯ ಪಿ. ನಿವೇದಾ ಮತ್ತು ಪಂಜಾಬ್’ನ ನಿಶಾ ಶರ್ಮಾ ಅವರಾಗಿದ್ದಾರೆ. ಈ ಹಿಂದೆ ಮಾರ್ಚ್ 1ರಂದು ಪ್ರಧಾನಿ ಮೋದಿ ಅವರು ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆಯನ್ನು ಮೊದಲ ಡೋಸ್ ಪಡೆದಿದ್ದರು.‌

ಪ್ರಧಾನಿ ಮೋದಿ ಅವರಿಗೆ ಲಸಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಮೂಲದ ನರ್ಸ್ ನಿಶಾ ಶರ್ಮಾ, ಮೋದಿ ಅವರನ್ನು ಭೇಟಿ ಮಾಡುವ ಹಾಗೂ ಅವರಿಗೆ ವ್ಯಾಕ್ಸಿನ್ ನೀಡುವ ಅವಕಾಶ ಸಿಕ್ಕಿದ್ದು ತಮ್ಮ ವೃತ್ತಿಜೀವನದ ಅತ್ಯಂತ ಅವಿಸ್ಮರಣೀಯ ದಿನವಾಗಿದೆ ಎಂದಿದ್ದಾರೆ. ಇನ್ನೂ ಈ ಹಿಂದೆ ಮೋದಿ ಅವರಿಗೆ ಮೊದಲ ಡೋಸ್ ಲಸಿಕೆ ನೀಡಿದ್ದ ನರ್ಸ್ ನಿವೇದಾ ಮಾತನಾಡಿ, ಮೊದಲ ಡೋಸ್ ಲಸಿಕೆ ನೀಡಿದ್ದ ತಮಗೆ ಇಂದು ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಲಸಿಕೆ ನೀಡಿದ್ದು ಖುಷಿಯಾಗಿದೆ. ಈ ವೇಳೆ ಅವರೊಂದಿಗೆ ಮಾತನಾಡಿದ ನಾವು, ಫೋಟೋ ಸಹ ತೆಗೆದುಕೊಂಡೆವು ಎಂದು ಸಂತಸ ವ್ಯಕ್ತಪಡಿಸಿದರು.

Submit Your Article