Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಕೇರಳ ರಾಜಕೀಯದ ಕ್ರಾಂತಿಕಾರಿ ನಾಯಕಿ ಕೆ. ಆರ್.ಗೌರಿಯಮ್ಮ ನಿಧನ

ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಅಂತ್ಯ ಸಂಸ್ಕಾರ ನಡೆಯಲಿದೆ. ಸಿಪಿಎಂ ಮುಖಂಡರಾದ ಎ.ವಿಜಯರಾಘವನ್, ಎಂ. ಎ. ಬೇಬಿ, ವಿ.ಶಿವಂಕುಟ್ಟಿ ಮತ್ತು ಜಿಲ್ಲಾ ಕಾರ್ಯದರ್ಶಿ ಅನವೂರ್ ನಾಗಪ್ಪನ್ ಅಂತಿಮ ನಮನ ಸಲ್ಲಿಸಿ ಅಂತ್ಯ ಸಂಸ್ಕಾರದ ಸಿದ್ಧತೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕಿರಿಸಿ ನಂತರ ಮೃತದೇಹವನ್ನು ಆಲಪ್ಪುಳಕ್ಕೆ ಕೊಂಡೊಯ್ಯಲಾಗುವುದು.
Share on facebook
Share on google
Share on twitter
Share on linkedin
Share on print
Loading...

ತಿರುವನಂತಪುರಂ, ಮೇ. 11: ಕೇರಳದ ಕ್ರಾಂತಿಕಾರಿ ನಾಯಕಿ ಕೆ.ಆರ್ ಗೌರಿಯಮ್ಮ (102) ಮಂಗಳವಾರ ಬೆಳಗ್ಗೆ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗೌರಿಯಮ್ಮ ಅವರ ಮೃತದೇಹವನ್ನು ಬೆಳಿಗ್ಗೆ 10.45 ಕ್ಕೆ ಅಯ್ಯಂಕಾಳಿ ಹಾಲ್‌ನಲ್ಲಿ (ಹಳೆಯ ವಿಜೆಟಿ ಹಾಲ್) ಸಾರ್ವಜನಿಕ ದರ್ಶನಕ್ಕಿಡಲಾಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಅಂತ್ಯ ಸಂಸ್ಕಾರ ನಡೆಯಲಿದೆ. ಸಿಪಿಎಂ ಮುಖಂಡರಾದ ಎ.ವಿಜಯರಾಘವನ್, ಎಂ. ಎ. ಬೇಬಿ, ವಿ.ಶಿವಂಕುಟ್ಟಿ ಮತ್ತು ಜಿಲ್ಲಾ ಕಾರ್ಯದರ್ಶಿ ಅನವೂರ್ ನಾಗಪ್ಪನ್ ಅಂತಿಮ ನಮನ ಸಲ್ಲಿಸಿ ಅಂತ್ಯ ಸಂಸ್ಕಾರದ ಸಿದ್ಧತೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕಿರಿಸಿ ನಂತರ ಮೃತದೇಹವನ್ನು ಆಲಪ್ಪುಳಕ್ಕೆ ಕೊಂಡೊಯ್ಯಲಾಗುವುದು. ಸಂಜೆ 6 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ.

Loading...

ಗೌರಿಯಮ್ಮ ಅವರ ಬದುಕು ಕೇರಳದ ರಾಜಕೀಯ ಇತಿಹಾಸವೂ ಆಗಿತ್ತು. ಕಾನೂನು ಅಧ್ಯಯನ ಮಾಡಿ ವಕೀಲರಾದ ನಂತರ ಗೌರಿಯಮ್ಮ ರಾಜಕೀಯ ಪ್ರವೇಶಿಸಿ ಆಧುನಿಕ ಕೇರಳದ ಇತಿಹಾಸದಲ್ಲಿ ಅನುಭವಿ ರಾಜಕಾರಣಿ ಎಂದೆನಿಸಿಕೊಂಡವರು . ಇಪ್ಪತ್ತೆಂಟನೇ ವಯಸ್ಸಿನಲ್ಲಿ ಕಮ್ಯುನಿಸ್ಟ್ ಪಕ್ಷದ ಸದಸ್ಯತ್ವ ಪಡೆದ ಗೌರಿಯಮ್ಮ ಕೇರಳದ ಇತಿಹಾಸದಲ್ಲಿ ಅತ್ಯಂತ ಅಸಾಧಾರಣ ವ್ಯಕ್ತಿಗಳಲ್ಲಿ ಒಬ್ಬರಾಗಿ ಮಿಂಚಿದರು. ಅವರು ವಿಧಾನಸಭೆಯ ಸದಸ್ಯರಾಗಿ 13 ಬಾರಿ ಆಯ್ಕೆಯಾಗಿದ್ದು ಆರು ಬಾರಿ ಸಚಿವರಾಗಿದ್ದಾರೆ. ಗೌರಿಯಮ್ಮ ಅವರ ಸಾಧನೆಗಳಲ್ಲಿ ಭೂ ಸುಧಾರಣಾ ಕಾಯ್ದೆ ಸೇರಿದಂತೆ ಹಲವಾರು ನಿರ್ಣಾಯಕ ಸಾಧನೆಗಳಿವೆ.

Loading...

Submit Your Article