Breaking News
‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆದೆಹಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಕೊರೊನಾ ಸೋಂಕಿನಿಂದ ಮೃತ

ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪ

ಪೂರ್ಣ ಪ್ರಜ್ಞ ಲೇಔಟ್‌ʼನ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಿ.ಎಸ್ ​ಯಡಿಯೂರಪ್ಪ 'ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳೋದು ಮುಖ್ಯ. ಹೀಗಾಗಿ ಯಾರ್ಯಾರಿಗೆ ಎಲ್ಲಿಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ
Share on facebook
Share on google
Share on twitter
Share on linkedin
Share on print

ಬೆಂಗಳೂರು, ಮಾ. 02: ದೇಶದ ಪ್ರಧಾನಿಯೇ ಏಮ್ಸ್​ ಆಸ್ಪತ್ರೆಗೆ ಹೋಗಿ ಲಸಿಕೆ ಪಡೆದಿರುವಾಗ, ಕೃಷಿ ಸಚಿವ ಬಿ. ಸಿ ಪಾಟೀಲ್‌ ಸಚಿವರು ಆಸ್ಪತ್ರೆಗೆ ತೆರಳದೇ ಆರೋಗ್ಯ ಸಿಬ್ಬಂದಿಯಿಂದ ಹೋಮ್​ ಸರ್ವೀಸ್ ಪಡೆದಿದ್ದಾರೆಂದು ಟೀಕೆ ವ್ಯಕ್ತವಾಗಿದೆ. ಆರೋಗ್ಯ ಸಿಬ್ಬಂದಿಯನ್ನ ಕರೆಸಿಕೊಂಡು ಕೊರೊನಾ ಲಸಿಕೆ ಪಡೆದಿದ್ದು, ಸಧ್ಯ ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಸಿಎಂ ಯಡಿಯೂರಪ್ಪನವ್ರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅವ್ರು ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ ಎಂದರು.

ಪೂರ್ಣ ಪ್ರಜ್ಞ ಲೇಔಟ್‌ʼನ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ  ಬಿ.ಎಸ್ ​ಯಡಿಯೂರಪ್ಪ ‘ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳೋದು ಮುಖ್ಯ. ಹೀಗಾಗಿ ಯಾರ್ಯಾರಿಗೆ ಎಲ್ಲಿಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ. ನಾನು ಮನೇಲಿ ಲಸಿಕೆ ಹಾಕಿಸಿಕೊಳ್ಳಬೇಕಾ? ಅಥವಾ ಆಸ್ಪತ್ರೆಗೆ ಹೋಗಿ ಹಾಕಿಸಿಕೊಳ್ಬೇಕಾ ಎಂದು ನೋಡುತ್ತೇನೆ‌. ಇನ್ನೆರಡು ದಿನಗಳಲ್ಲಿ ನಾನು ಲಸಿಕೆ ಹಾಕಿಸಿಕೊಳ್ಳುತ್ತೇನೆ’ ಎಂದಿದ್ದಾರೆ. ಈ ಹೇಳಿಕೆ ಮೂಲಕ ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ.

Submit Your Article