ಹೊಸ ವರ್ಷಕ್ಕೆ BSNL ನಿಂದ 5G ಸೇವೆ ಆರಂಭ

ನವದೆಹಲಿ ಡಿ 29 : ಸರ್ಕಾರಿ ಸ್ವಾಮ್ಯದ BSNL ತನ್ನ ಗ್ರಾಹಕರಿಗಾಗಿ ಹೊಸ ವರ್ಷಕ್ಕೆ ಭರ್ಜರಿ ಕೊಡುಗೆಯನ್ನು ನೀಡಿದ್ದು, ಶೀಘ್ರದಲ್ಲೇ ದೇಶದ ಹಲವು ನಗರಗಳಲ್ಲಿ 5ಜಿ ಇಂಟರ್ನೆಟ್ ಸೇವೆ ಆರಂಭವಾಗಲಿದೆ ಎಂದು ದೂರಸಂಪರ್ಕ ಇಲಾಖೆ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. 2022 ರಲ್ಲಿ ದೇಶದ ಗ್ರಾಹಕರಿಗೆ 5G ನೆಟ್‌ವರ್ಕ್ ಪ್ರಾರಂಭಿಸಲಾಗುವುದು ಎಂದು ಹೇಳಲಾಗಿದೆ.

ಮೊದಲು ಈ ಸೌಲಭ್ಯವು ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ, ಗುರುಗ್ರಾಮ್, ಬೆಂಗಳೂರು, ಚಂಡೀಗಢ, ಜಾಮ್‌ನಗರ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಪುಣೆ ಮತ್ತು ಗಾಂಧಿ ನಗರಗಳಂತಹ ದೊಡ್ಡ ನಗರಗಳಲ್ಲಿ ಮಾತ್ರ ಪ್ರಾರಂಭವಾಗಲಿದೆ. ದೇಶದ ಇತರ ನಗರಗಳು 5ಜಿ ಇಂಟರ್ನೆಟ್ ಸೇವೆಗಾಗಿ ಇನ್ನೂ ಸ್ವಲ್ಪ ಸಮಯ ಬಳಿಕ ಸೇವೆ ದೊರಕಲಿದೆ

ಏರ್‌ಟೆಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್ ಐಡಿಯಾ ಈ ನಗರಗಳಲ್ಲಿ 5G ನೆಟ್‌ವರ್ಕ್ ಪರೀಕ್ಷಿಸುತ್ತಿವೆ ಮತ್ತು ಸರ್ಕಾರವು ಮುಂದಿನ ವರ್ಷದಿಂದ ದೇಶದಲ್ಲಿ 5G ಸೇವೆಗಳನ್ನು ಈ ಮಹಾನಗರಗಳು ಮತ್ತು ದೊಡ್ಡ ನಗರಗಳಲ್ಲಿ ಪ್ರಾರಂಭಿಸಲಿದೆ. ದೂರಸಂಪರ್ಕ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಐಐಟಿ ಬಾಂಬೆ, ಐಐಟಿ ದೆಹಲಿ, ಐಐಟಿ ಹೈದರಾಬಾದ್, ಐಐಟಿ ಮದ್ರಾಸ್, ಐಐಟಿ ಕಾನ್ಪುರ, ಐಐಎಸ್ಸಿ ಬೆಂಗಳೂರು ಸೇರಿದಂತೆ ಎಂಟು ಏಜೆನ್ಸಿಗಳು 3 ವರ್ಷದಿಂಧ ಇದಕ್ಕಾಗಿ ಶ್ರಮಿಸುತ್ತಿವೆ ಎಂದು ಹೇಳಲಾಗಿದೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.