ನನ್ನನ್ನು ಪಕ್ಷದಿಂದ ಕಡೆಗಣಿಸಲಾಗಿದೆ ಎಂಬ ಆರೋಪ ಸುಳ್ಳು! : ಬಿ.ಎಸ್ ಯಡಿಯೂರಪ್ಪ

Bengaluru : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪನವರು (BSY Epic Reply) ತಮ್ಮನ್ನು ಆಡಳಿತ ಪಕ್ಷದಿಂದ ಕಡೆಗಣಿಸಲಾಗುತ್ತಿದೆ, ಎಂಬ ಆರೋಪಗಳಿಗೆ ಇದೀಗ ತಿರುಗೇಟು ನೀಡಿದ್ದಾರೆ.

ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ನಾನು ಹೆಚ್ಚು ಶ್ರಮಿಸಿದ್ದೇನೆ. ನನ್ನನ್ನು ನಿರ್ಲಕ್ಷಿಸಲಾಗಿದೆ ಎಂಬ ಹೇಳಿಕೆಯಲ್ಲಿ (BSY Epic Reply) ಯಾವುದೇ ಸತ್ಯವಿಲ್ಲ.

ನಾನು ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದೇನೆ ಎಂದು ಯಡಿಯೂರಪ್ಪ ಅವರು ಕೊಪ್ಪಳಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ (Press Meet) ಮಾತನಾಡಿದ್ದಾರೆ.

ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭಾಗವಹಿಸಿದ್ದರು.

ಈ ಕಾರ್ಯಕ್ರಮದ ಕುರಿತು ಪ್ರಶ್ನಿಸುವ ವೇಳೆ ರಾಜಕೀಯವಾಗಿ ನಿಮ್ಮನ್ನು ಮುಗಿಸಲು ಪ್ರಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ,

https://fb.watch/hrNNhIGXmH/ ಬ್ಯಾಂಕ್ ಲಾಕರ್ ಚಿನ್ನಮಾಯ! Bank locker fraud!

ಅದರಲ್ಲಿ ಯಾವುದೇ ಸತ್ಯವಿಲ್ಲ! ಯಾರೂ ಯಾರನ್ನೂ ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ. ಪಕ್ಷವನ್ನು ಬಲಪಡಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಿರಂತರ ಶ್ರಮಿಸಿದ್ದೇನೆ.

ಈ ಸಂಗತಿ ನಮ್ಮ ಪಕ್ಷಕ್ಕೆ ಹಾಗೂ ಇಡೀ ರಾಜ್ಯಕ್ಕೆ ತಿಳಿದಿದೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪನವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕರ್ನಾಟಕದಲ್ಲಿ 140 ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ.

ರಾಜ್ಯದಲ್ಲಿ 224 ಸದಸ್ಯ ಬಲದ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಿಗದಿಯಾಗಿದೆ.

Basavaraj Bommai

ಬಿಜೆಪಿ ಎಂದಿಗೂ ಒಂದೇ ಮತ್ತು ಒಗ್ಗಟ್ಟಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಈ ಬಗ್ಗೆ ಯಾವುದೇ ಅನುಮಾನವಿಲ್ಲ.

ಹೀಗಾಗಿ ನಮಗೆ ಜನರ ಆಶೀರ್ವಾದ ಬೇಕು ಎಂದು ಬಿಜೆಪಿಯ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಯಡಿಯೂರಪ್ಪ ಹೇಳಿದ್ದಾರೆ. ಮತ್ತೆ ಮುಖ್ಯಮಂತ್ರಿಯಾಗುವ ಸಾಧ್ಯತೆಯ ಬಗ್ಗೆ ಕೇಳಿಬಂದ ಪ್ರಶ್ನೆಗೆ ಉತ್ತರಿಸಿದ ಅವರು,

ಇದನ್ನೂ ಓದಿ : https://vijayatimes.com/karnataka-bank-locker-scam/

ನನಗೆ ಅಧಿಕಾರದ ಮಹತ್ವಾಕಾಂಕ್ಷೆ ಇಲ್ಲ! ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂಬ ಒಂದೇ ಒಂದು ಆಸೆ ನನಗಿದೆ. ಅದಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಇದೇ ವೇಳೆ ಬೊಮ್ಮಾಯಿ ಅವರು ಯಡಿಯೂರಪ್ಪ ಅವರೊಡನೆ ಈ ಹಿಂದೆ ಇದ್ದ ಸಂಬಂಧದ ಕುರಿತು ಹುಟ್ಟಿಕೊಂಡಿದ್ದ ಭಿನ್ನಾಭಿಪ್ರಾಯದ ವದಂತಿಗಳನ್ನು ತಳ್ಳಿಹಾಕಿದರು.

ನನ್ನ ಮತ್ತು ಯಡಿಯೂರಪ್ಪನವರ ಸಂಬಂಧ ತಂದೆ-ಮಗನ ಸಂಬಂಧ. ಯಾವುದೇ ಕಾರಣಕ್ಕೂ ವ್ಯತ್ಯಾಸ ಕಾಣಲು ಸಾಧ್ಯವಿಲ್ಲ! ಅವರೆಲ್ಲಾ ಬಯಸುವುದು ಎಂದಿಗೂ ಸಂಭವಿಸುವುದಿಲ್ಲ. ಆ ನಿರೀಕ್ಷೆಯಲ್ಲಿದ್ದವರಿಗೆ ಖಂಡಿತ ನಿರಾಸೆಯಾಗುತ್ತದೆ ಎಂದು ಹೇಳಿದರು.

C T Ravi

ಇನ್ನು ಈ ಹೇಳಿಕೆಗಳ ಬಗ್ಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi), ರಾಜ್ಯಾದ್ಯಂತ ಜನಸಂಕಲ್ಪ ಯಾತ್ರೆಯಲ್ಲಿ ಬೊಮ್ಮಾಯಿ ಅವರೊಂದಿಗೆ ಯಡಿಯೂರಪ್ಪ ಭಾಗವಹಿಸಿದ್ದರು.

ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ಜವಾಬ್ದಾರಿಯಿದ್ದು, ಎಲ್ಲೆಡೆ ಇರಲು ಸಾಧ್ಯವಿಲ್ಲ. ಅವರು ನಮ್ಮ ಪಕ್ಷದ ಉನ್ನತ ನಾಯಕರಲ್ಲಿ ಒಬ್ಬರು ಎಂದು ಹೇಳಿದರು.

ಇದನ್ನೂ ಓದಿ : https://vijayatimes.com/state-government-transfer-issue/

ಬಿಜೆಪಿ ಪಕ್ಷದೊಳಗೆ ಭಿನ್ನಾಭಿಪ್ರಾಯವಿದೆ ಎಂದು ಪ್ರತಿಪಕ್ಷಗಳು ಹೇಳಿವೆ. ಬಿಜೆಪಿಯಲ್ಲಿ ದೊಡ್ಡ ಬಿರುಕು ಇದೆ. ಬಹಳಷ್ಟು ವಿಷಯಗಳು ಚರ್ಚೆಯಾಗುತ್ತಿವೆ, ಅದು ಈಗ ಕುದಿಯುತ್ತಿದೆ.

ಯಾವಾಗ ಸ್ಫೋಟಗೊಳ್ಳುತ್ತದೋ ಗೊತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivkumar) ಬಿಜೆಪಿ ವಿರುದ್ಧ ಟಾಂಗ್ ನೀಡಿದ್ದಾರೆ.
Exit mobile version