ಬೆಂಗಳೂರು ಆ 25 : ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೀಗ ರಾಜ್ಯಾದ್ಯಂತ ಪಕ್ಷ ಬಲವರ್ದನೆಯತ್ತ ಮಾಜಿ ಸಿಎಂ ಚಿತ್ತ ಹರಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಿಎಸ್‌ವೈ ಅವರು ರಾಜ್ಯ ಪ್ರವಾಸಕ್ಕೆ ಹೊಸ ಕಾರನ್ನು ಖರೀದಿ ಮಾಡಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಅವರು ಬಿಳಿ ಬಣ್ಣದ ಐಷಾರಾಮಿ Toyota Vellfire ಕಾರನ್ನು ಖರೀದಿ ಮಾಡಲಾಗಿದೆ. 78 ವರ್ಷದ ಯಡಿಯೂರಪ್ಪ ಇದೇ ಕಾರಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, 2023ರ ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಲಿದ್ದಾರೆ. ಗಣಪತಿ ಹಬ್ಬ ಬಳಿಕ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತ ಕ್ಷೇತ್ರ, ಯಾವ ಕ್ಷೇತ್ರದಲ್ಲಿ ಪಕ್ಷ ದುರ್ಬಲವಾಗಿದೆಯೋ ಅಲ್ಲಿಂದ ಯಡಿಯೂರಪ್ಪ ಪ್ರವಾಸ ಆರಂಭಿಸಲಿದ್ದಾರೆ ಎಂಬ ಮಾಹಿತಿ ಇದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೂ ಭೇಟಿ ಕೊಡುವ ಯೋಜನೆಯನ್ನು ಕೂಡ ರೂಪಿಸಲಾಗಿದೆ ಎಂದು ಹೇಳಲಾಗುತ್ತಿದೆ.