ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಅವರನ್ನು ಗೆಲ್ಲಿಸಿ ; ಮತದಾರರಲ್ಲಿ ಬಿ.ಎಸ್.ವೈ ಮನವಿ

BSY

ಕರ್ನಾಟಕದ(Karnataka) ಬಿಜೆಪಿ ಶಾಸಕ(BJP MLA) ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ(BS Yedurappa) ಅವರು ತಮ್ಮ ಪುತ್ರ ಬಿ.ವೈ ವಿಜಯೇಂದ್ರ(BY Vijayendra) ಮುಂದಿನ ಚುನಾವಣೆಯಲ್ಲಿ ತಮ್ಮ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. ತಮ್ಮ ಮಗನಿಗೆ ಸಾರ್ವಜನಿಕರ ಬೆಂಬಲವನ್ನು ಕೋರಿದ ಅವರು, ಪುತ್ರ ಬಿ.ವೈ ವಿಜಯೇಂದ್ರ ತಮ್ಮ ಸ್ವಕ್ಷೇತ್ರ ಶಿವಮೊಗ್ಗ(Shimogga) ಜಿಲ್ಲೆಯ ಶಿಕಾರಿಪುರ ಕ್ಷೇತ್ರದಿಂದ(Shikaripura Constituency) ಸ್ಪರ್ಧಿಸಲಿದ್ದಾರೆ. ಹೀಗಾಗಿ ವಿಜಯೇಂದ್ರ ಅವರಿಗೆ ನಿಮ್ಮ ಮತ(Vote) ನೀಡಿ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

ಬಿ.ವೈ ವಿಜಯೇಂದ್ರ ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿ ಗೆಲ್ಲಿಸುವಂತೆ ಶಿಕಾರಿಪುರದ ಜನತೆಯಲ್ಲಿ ವಿನಂತಿಸುತ್ತೇನೆ. ಸದ್ಯ ಶಿಕಾರಿಪುರದಿಂದ ಸ್ಪರ್ಧಿಸಲು ಹೇಳಿದ್ದೇನೆ. ಇದಕ್ಕೂ ಮುಂಚಿನಿಂದಲೂ ಹಳೆ ಮೈಸೂರು ಭಾಗದಲ್ಲಿ ಅವರಿಗೆ ಸ್ಪರ್ಧಿಸುವಂತೆ ಒತ್ತಡ ಹಾಕಲಾಗಿದೆ. ಆದ್ರೆ, ನಾನು ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸದ ಕಾರಣ ವಿಜಯೇಂದ್ರ ಆ ಸ್ಥಾನದಿಂದ ಸ್ಪರ್ಧಿಸಲು ತಿಳಿಸಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಹೇಳಿದ್ದಾರೆ.

ಈ ಹಿಂದೆ ಜೂನ್‌ನಲ್ಲಿ(June) ನಡೆದ ವಿಧಾನಪರಿಷತ್ ಚುನಾವಣೆಗೆ ವಿಜಯೇಂದ್ರ ಅವರಿಗೆ ಬಿಜೆಪಿ(BJP) ಟಿಕೆಟ್ ನಿರಾಕರಿಸಲಾಗಿತ್ತು. ಆಗ ಯಡಿಯೂರಪ್ಪ ಅವರು ತಮ್ಮ ಮಗನಿಗೆ ದೊಡ್ಡ ಪಾತ್ರದ ಬಗ್ಗೆ ಸುಳಿವು ನೀಡಿದ್ದರು. ಭವಿಷ್ಯದಲ್ಲಿ ವಿಜಯೇಂದ್ರಗೆ ಹೆಚ್ಚಿನ ಅವಕಾಶಗಳು ಸಿಗುವ ವಿಶ್ವಾಸವಿದೆ, ಪ್ರತಿಭಾವಂತರು, ಸಮರ್ಪಣಾ ಮನೋಭಾವ ಹೊಂದಿರುವವರನ್ನು ಪಕ್ಷ ಎಂದಿಗೂ ಕೈಬಿಡುವುದಿಲ್ಲ. 2023ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ಆ ನಿಟ್ಟಿನಲ್ಲಿ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದರು.

ಅಲ್ಲದೆ, ಯಡಿಯೂರಪ್ಪ ಅವರು ತಮ್ಮ ಮಗನನ್ನು ಎಂಎಲ್‌ಸಿ(MLC) ಮಾಡಲು ಬಯಸಿದ್ದರು. ತದನಂತರ ಬಸವರಾಜ್ ಬೊಮ್ಮಾಯಿ(Basavaraj Bommai) ಸಂಪುಟದಲ್ಲಿ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

Exit mobile version