ಬಿ.ಎಸ್.ವೈ ಚುನಾವಣಾ ನಿವೃತ್ತಿ?? ; ಪುತ್ರನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಮಾಜಿ ಸಿಎಂ!

BJP

ಮಾಜಿ ಮುಖ್ಯಮಂತ್ರಿ(Former Primeminister) ಬಿ.ಎಸ್. ಯಡಿಯೂರಪ್ಪ(BS Yedurappa) ಅವರು ರಾಜಕೀಯದಿಂದ ನಿವೃತ್ತಿ ಹೊಂದುವ ರೀತಿ ಮಾತನಾಡಿದ್ದು.

ತಮ್ಮ ಸ್ವಕ್ಷೇತ್ರ ಶಿಕಾರಿಪುರದಿಂದ(Shikaripura) ಪುತ್ರ ಬಿ.ವೈ. ವಿಜಯೇಂದ್ರ(B.Y Vijayendra) ಅವರನ್ನು ಈ ಬಾರಿ ಚುನಾವಣೆಯಲ್ಲಿ ಕಣಕ್ಕಿಳಿಸುತ್ತೇನೆ ಎಂದು ಹೇಳಿದ್ದಾರೆ.

ಬಿಎಸ್‌ವೈ(BSY) ಈ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬಿ.ವೈ. ವಿಜಯೇಂದ್ರ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ(Shimogga) ಜಿಲ್ಲೆಯ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಎಸ್ವೈ ಘೋಷಿಸಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯ ಸೂಚನೆ ನೀಡಿದ ಯಡಿಯೂರಪ್ಪ ಅವರು ತಮ್ಮ ಮಗನಿಗೆ ಸಾರ್ವಜನಿಕ ಬೆಂಬಲವನ್ನು ಕೋರಿದರು.

ಯಡಿಯೂರಪ್ಪನವರು 1983 ರಿಂದ ಎಂಟು ಬಾರಿ ಶಿಕಾರಿಪುರ ಕ್ಷೇತ್ರದಿಂದ ಗೆದ್ದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು “ನೀವು ನನ್ನನ್ನು ಬೆಂಬಲಿಸಿದ ರೀತಿಯಲ್ಲಿಯೇ ವಿಜಯೇಂದ್ರ ಅವರನ್ನೂ ಬೆಂಬಲಿಸಬೇಕೆಂದು ನಾನು ವಿನಂತಿಸುತ್ತೇನೆ. ಅವರು ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸುವಂತೆ ನಾವು ನೋಡಿಕೊಳ್ಳಬೇಕು” ಎಂದು ಕ್ಷೇತ್ರದ ಜನತೆಗೆ ಮನವಿ ಮಾಡಿದರು.


ಹಾಗೇ, ವಾರಕ್ಕೊಮ್ಮೆ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ ಮಾಜಿ ಮುಖ್ಯಮಂತ್ರಿಗಳು, ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದರು. ಪ್ರತಿಸ್ಪರ್ಧಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪಕ್ಷದಲ್ಲಿ ಇಬ್ಬರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೋರಾಟ ನಡೆಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ(BJP) ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು.

79 ವರ್ಷ ವಯಸ್ಸಿನ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಅತಿ ಪ್ರಮುಖ ಲಿಂಗಾಯತ ನಾಯಕರಾಗಿದ್ದಾರೆ. 2014 ರಲ್ಲಿ ಶಿವಮೊಗ್ಗದಿಂದ ಲೋಕಸಭಾ ಸದಸ್ಯರಾಗಿದ್ದರು. ಅವರ ಪುತ್ರ ಬಿ.ವೈ.ವಿಜಯೇಂದ್ರ ಬಿಜೆಪಿಯ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ.

ಯಡಿಯೂರಪ್ಪ ಅವರ ನಿರ್ಧಾರದ ಬಗ್ಗೆ ಬಿ.ವೈ ವಿಜಯೇಂದ್ರ ಮಾತನಾಡಿದ್ದು, “ತಂದೆಯವರ ಮಾರ್ಗದರ್ಶನ ಹಾಗೂ ಪಕ್ಷದ ನಿರ್ಧಾರದಂತೆ ನಡೆದುಕೊಳ್ಳುತ್ತೇನೆ. ಬಿಜೆಪಿ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಪ್ರವಾಸ ಮಾಡುವುದು ನನ್ನ ಆದ್ಯ ಕರ್ತವ್ಯ.

ಪಕ್ಷದ ಏಳಿಗೆಗಾಗಿ ಶ್ರಮವಹಿಸುತ್ತಿದ್ದೇನೆ, ಹಿಂದಿನಿಂದಲೂ ಅದನ್ನೇ ಮಾಡಿದ್ದೇನೆ, ಮುಂದೆ ಕೂಡ ಮಾಡುತ್ತೇನೆ” ಎಂದಿದ್ದಾರೆ.
Exit mobile version