ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಸಂಚಾಲಕ ಸ್ಥಾನ ; ಲಿಂಗಾಯತ ಅಸ್ತ್ರ ಪ್ರಯೋಗಿಸಿದ ಬಿಜೆಪಿ

Bengaluru : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಲು ‘ಹಳೆ ಮೈಸೂರು’ ಪ್ರದೇಶದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವತ್ತ ಗಮನಹರಿಸಿರುವ ಬಿಜೆಪಿ, ಫೆಬ್ರವರಿ 20 ರಂದು (BSY son Vijayendra moderator) ಮಂಡ್ಯದಲ್ಲಿ(Mandya) ಪಕ್ಷದ ‘ಯುವ ಮೋರ್ಚಾ’ ಸಮಾವೇಶವನ್ನು ಆಯೋಜಿಸುತ್ತಿದೆ.

ಮುಂಬರುವ ವಿಧಾನಸಭಾ ಚುನಾವಣೆಯ ರಾಜ್ಯ ಬಿಜೆಪಿ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಈ ನಡುವೆ ಬಿಜೆಪಿ ಸಮಾವೇಶಗಳ ಸಂಚಾಲಕ ಸ್ಥಾನವನ್ನು ಯಡಿಯೂರಪ್ಪನವರ(Yediyurappa) ಪುತ್ರ ವಿಜಯೇಂದ್ರ(Vijayendra) ಅವರಿಗೆ ನೀಡಿರುವುದು ಹೊಸ ರಾಜಕೀಯ ಲೆಕ್ಕಾಚಾರಗಳಿಗೆ  ಕಾರಣವಾಗಿದೆ.

ಬಸವರಾಜ ಬೊಮ್ಮಾಯಿ(Basavaraj Bommai) ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ರಾಜ್ಯದ ಪ್ರತಿ ಮನೆ ಮನೆಗೆ ತಲುಪಿಸುವ

ಉದ್ದೇಶದಿಂದ ರಾಜ್ಯ ಬಿಜೆಪಿ(BJP) ಯುವ, ಮಹಿಳಾ, ರೈತ, ಎಸ್‌ಸ್ಸಿ(SC) ಮುಂತಾದ ಪಕ್ಷದ ಎಲ್ಲಾ ಮೋರ್ಚಾಗಳ ಸಮಾವೇಶಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. 

ಈ ಸಮಾವೇಶಗಳ ಸಂಪೂರ್ಣ ಹೊಣೆಯನ್ನು ವಿಜಯೇಂದ್ರ ಅವರಿಗೆ ವಹಿಸಲಾಗಿದೆ.

ಇದನ್ನೂ ಓದಿ: ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ…!

ಇನ್ನು ಈ ಕುರಿತು ಮಾತನಾಡಿರುವ ವಿಜಯೇಂದ್ರ ಅವರು, ಮೋರ್ಚಾಗಳನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸಮಾವೇಶಗಳನ್ನು(BSY son Vijayendra moderator) ನಡೆಸಿ,

ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿ, ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಕಾರ್ಯಕ್ರಮಗಳನ್ನು ಜನರ ಬಳಿಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ.

ನಾವು ಸುಮಾರು 140-150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೇವೆ. ಹಳೆ ಮೈಸೂರು ಪ್ರದೇಶದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಒತ್ತು ನೀಡಲಾಗಿದೆ ಎಂದಿದ್ದಾರೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಹಳೆ ಮೈಸೂರು ಜೆಡಿಎಸ್‌ನ(JDS) ಭದ್ರಕೋಟೆಯಾಗಿದ್ದು, ಅಲ್ಲಿ ಕಾಂಗ್ರೆಸ್ ಕೂಡ ಪ್ರಬಲವಾಗಿದೆ, ಆದರೆ ಬಿಜೆಪಿ ಗಣನೀಯವಾಗಿ ದುರ್ಬಲವಾಗಿದೆ.

ಹೀಗಾಗಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ರಾಜ್ಯ ಬಿಜೆಪಿಯು ವಿಜಯೇಂದ್ರಗೆ  ಪ್ರಮುಖ ಹೊಣೆಗಾರಿಕೆ ನೀಡಿದೆ. ಯಡಿಯೂರಪ್ಪನವರನ್ನು ಬಿಜೆಪಿಯಲ್ಲಿ ತುಳಿಯಲಾಗುತ್ತಿದೆ ಎಂದು ಟೀಕಿಸುತ್ತಿರುವ ವಿರೋಧ  ಪಕ್ಷಗಳಿಗೆ,

ಪ್ರತ್ಯುತ್ತರವಾಗಿ ಬಿಜೆಪಿಯು ಇದೀಗ ವಿಜಯೇಂದ್ರಗೆ ಪ್ರಮುಖ  ಹೊಣೆಗಾರಿಕೆ ನೀಡಿದೆ.

  ಪ್ರಬಲ ಲಿಂಗಾಯತ ಸಮುದಾಯದ ಮತಗಳು ಚದುರಿ ಹೋಗದಂತೆ ನಿಗಾ ವಹಿಸಿರುವ ಬಿಜೆಪಿ ನಾಯಕರು, ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವ ನಿರ್ಣಯ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರದಂತೆ ಮಾಡಲು ಅವರ ಮಗನಿಗೆ ಪ್ರಮುಖ ಹುದ್ದೆ ನೀಡಿದೆ.

Exit mobile version