ಮೈಸೂರು : ಬಿಜೆಪಿ ಸರ್ಕಾರ(BJP Government) ರಚನೆಯಾಗಲು ಪಕ್ಷಾಂತರಗೊಂಡು ಬಿಜೆಪಿಗೆ ಬಂದು ಸಚಿವರಾಗಿರುವ ೧೭ ಮಂದಿ ವಲಸಿಗ ಸಚಿವರು(Ministers) ಸಚಿವರಾಗಿ ಮುಂದುವರೆತ್ತಾರೋ ಇಲ್ವೋ ಎಂಬ ವಿಚಾರ ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ(BS Yedurappa) ಹೇಳಿದ್ದಾರೆ.
ಮೈಸೂರಿನಲ್ಲಿ(Mysuru) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ(ChiefMinister) ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಈಗಾಗಲೇ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಮತ್ತು ಗೃಹ ಸಚಿವರಾದ ಅಮಿತ್ ಶಾ(Amit Shah) ಅವರೊಂದಿಗೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ದಾರೆ. ಮೂರ್ನಾಲ್ಕು ದಿನದಲ್ಲಿ ಸಂಪೂರ್ಣ ವಿಸ್ತರಣೆ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ಆದರೆ ಸರ್ಕಾರ ರಚನೆಗೆ ಸಹಕರಿಸಿದ ಹದಿನೇಳು ಮಂದಿ ಮತ್ತೆ ಸಚಿವರಾಗಿ ಮುಂದುವರೆಯುತ್ತಾರೋ ಇಲ್ವೋ ನನಗೆ ಗೊತ್ತಿಲ್ಲ.
ಇನ್ನು ಬಿ.ವೈ. ವಿಜಯೇಂದ್ರ ಸಂಪುಟ ಸೇರ್ಪಡೆ ಕುರಿತು ನನಗೆ ಮಾಹಿತಿ ಇಲ್ಲ. ಕೇಂದ್ರದ ನಾಯಕರು ಶೀಘ್ರವೇ ಈ ಬಗ್ಗೆ ತೀರ್ಮಾನ ಪ್ರಕಟಿಸಲಿದ್ದಾರೆ ಎಂದರು. ಇನ್ನು ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಅವರು, ಬಸವರಾಜ್ ಬೊಮ್ಮಾಯಿ ಅವರನ್ನು ದುರ್ಬಲ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಯಾರು ದುರ್ಬಲರಿದ್ದರೋ, ಯಾರು ಭ್ರಷ್ಟರಿದ್ದರೋ ಅವರ ಬಾಯಲ್ಲಿ ಅದೇ ಮಾತು ಬರುತ್ತಿದೆ.
ಇನ್ನು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಏನೇನಾಯ್ತು ಎಂಬ ಕಥೆ ಜಗತ್ತಿಗೆ ಗೊತ್ತಿದೆ. ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿ ಗೌರವದಿಂದ ನಡೆದುಕೊಳ್ಳುವುದನ್ನ ಕಲಿಯಬೇಕು ಎಂದು ತಿರುಗೇಟು ನೀಡಿದರು.