Visit Channel

ಪದ್ಮ ಭೂಷಣ ಪ್ರಶಸ್ತಿ ತಿರಸ್ಕರಿಸಿದ ಬುದ್ದದೇವ್ ಭಟ್ಟಾಚಾರ್ಯ

buddhadeb bhattcharya

ಪಶ್ಚಿಮ ಬಂಗಾಳ ಜ 26 : ಕೇಂದ್ರ ಸರ್ಕಾರ ಭಾರತದ ಪ್ರತಿಷ್ಠಿತ ಪ್ರಶಸ್ತಿಯಾದ ಪದ್ಮ ಭೂಷಣ ಪ್ರಶಸ್ತಿಗೆ ಬುದ್ದದೇವ ಭಟ್ಟಾಚಾರ್ಯ ಅವರನ್ನು ನೇಮಕ ಮಾಡಿತ್ತು ಆದರೆ  ಪಶ್ಚಿಮ ಬಂಗಾಳದ ಮಾಜಿ ಸಿಎಂ ಹಾಗೂ ಸಿಪಿಎಂ ನಾಯಕ ಬುದ್ಧದೇವ್‌ ಭಟ್ಟಾಚಾರ್ಯ ತಮಗೆ ಘೋಷಣೆ ಮಾಡಲಾದ ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ.

 ಪ್ರಶಸ್ತಿ ತಿರಸ್ಕರಾದ ಬಗ್ಗೆ ಪಶ್ಚಿಮ ಬಂಗಾಳದ ಮಾಜಿ ಸಿಎಂ ಹಾಗೂ ಸಿಪಿಎಂ ನಾಯಕ ಬುದ್ಧದೇವ್‌ ಭಟ್ಟಾಚಾರ್ಯ ಮಾಹಿತಿ ನೀಡಿದ್ದು,  ಪದ್ಮ ಭೂಷಣ ಪ್ರಶಸ್ತಿಗೆ ಆಯ್ಕೆ ಮಾಡುವ ವಿಷಯ ತನಗೆ ಗೊತ್ತಿಲ್ಲ. ಹೀಗಾಗಿ ಪ್ರಶಸ್ತಿಯನ್ನು ತಿರಸ್ಕರಿಸುವುದಾಗಿ ಹೇಳಿದ್ದಾರೆ. ಇದಾಗ್ಯೂ ನನಗೆ ಪ್ರಶಸ್ತಿ ನೀಡುವುದಾದರೆ ನಾನು ಅದನ್ನು ತಿರಸ್ಕರಿಸುತ್ತೇನೆ ಎಂದಿದ್ದಾರೆ. ಸದ್ಯ ವಯೋಸಹಜ ಕಾಯಿಲೆಗಳಿಂದ ಬುದ್ಧದೇವ್‌ ಭಟ್ಟಾಚಾರ್ಯ ಬಳಲುತ್ತಿದ್ದು, ಶ್ವಾಸಕೋಸ ಹಾಗೂ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದು, ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.

ಆದರೆ ಸರ್ಕಾರದ ವರದಿಗಳ ಪ್ರಕಾರ ಪದ್ಮ ಭೂಷಣ ಪ್ರಶಸ್ತಿ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಯಾರೂ ನನಗೆ ಈ ಬಗ್ಗೆ ಏನೂ ಹೇಳಿಲ್ಲ ಎಂದು ಪ್ರಕಟಣೆಯಲ್ಲಿ ಬುದ್ಧದೇವ್ ಭಟ್ಟಾಚಾರ್ಯ ಹೇಳಿದ್ದರು. ಈ ಕುರಿತು ಸರ್ಕಾರದ ಮೂಲಗಳು ಮಾಹಿತಿ ನೀಡಿದ್ದು, ಇಂದು ಬೆಳಗ್ಗೆಯೇ ಕುಟುಂಬದವರಿಗೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿತ್ತು. ಅವರ ಪತ್ನಿ ಅಧಿಕಾರಿಗಳ ಜೊತೆ ಮಾತನಾಡಿದ್ದರು ಎಂದು ಹೇಳಿದೆ.

ಕೋವಿಡ್‌ನಿಂದ ಬದುಕಿಬಂದಿದ್ದ ಹಿರಿಯ ನಾಯಕ :

ಕಳೆದ ಒಂದು ವರ್ಷದ ಹಿಂದೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ‌ ಭಟ್ಟಾಚಾರ್ಯ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಜೊತೆಗೆ, ಅವರ ಆರೋಗ್ಯ ಸ್ಥಿತಿ ಕೂಡ ಗಂಭೀರವಾಗಿ ಬದುಕಿ ಉಳಿದಿದ್ದರು ನಂತರ ದಿನಗಳಲ್ಲಿ ಅವರಿಗೆ ಅರೋಗ್ಯದಲ್ಲಿ ಏರುಪೇರಾಗುತ್ತಿತ್ತು ಇದೀಗ ಪ್ರಶಸ್ತಿ ತಿರಸ್ಕರಿಸುವ ಮುಖೇನ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಬುದ್ದದೇವ್‌ ಅವರು ಸಾಕಷ್ಟು ವರ್ಷಗಳಿಂದ ಸಿಪಿಎಂನ ಪ್ರಭಾವಿ ನಾಯಕರಾಗಿದ್ದರು.


Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.