ಕರ್ನಾಟಕ ಬಜೆಟ್‌: ಸ್ಥಳೀಯವಾಗಿ ಹೊಸ ಶಿಕ್ಷಣ ನೀತಿ ಜಾರಿ ಘೋಷಣೆ ಜೊತೆಗೆ ಶೈಕಣಿಕ ಕೇಂದ್ರಗಳ ಮೂಲಸೌಕರ್ಯ ಅಭಿವೃದ್ಧಿ

Bengaluru : ಈ ವರ್ಷದ ಹೊಸ ಬಜೆಟ್‌ನಲ್ಲಿ (Budget 2023) ಸಿಎಂ ಸಿದ್ದರಾಮಯ್ಯ(budget new education policy) ಅವರು ಸ್ಥಳೀಯವಾಗಿ ಹೊಸ ಶಿಕ್ಷಣ ನೀತಿಗಳನ್ನು ಜಾರಿಗೊಳಿಸುವ ಜೊತೆಗೆ

ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಯನ್ನು ಘೋಷಿಸಿದರು. ಒಟ್ಟು ಬಜೆಟ್‌ನ ಶೇ. ಶೇಕಡ 11ರಷ್ಟು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾಗಿದ್ದು, ಒಟ್ಟು 3,758.7 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಟ್ಟಿದ್ದಾರೆ.

ಈ ಮೂಲಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು (budget new education policy) ರೂಪಿಸಲಾಗಿದೆ.

ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು, ಒಕ್ಕೂಟ ವ್ಯವಸ್ಥೆಗೆ ಹಾನಿಕಾರಕವಾಗಿದ್ದು, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಲ್ಲಂಘಿಸುತ್ತದೆ.

ನಮ್ಮ ಬಹು-ಧರ್ಮೀಯ, ಬಹುಭಾಷಾ ಮತ್ತು ಬಹುಸಂಸ್ಕೃತಿಯ ದೇಶಕ್ಕೆ ಏಕೀಕೃತ ಶಿಕ್ಷಣ ವ್ಯವಸ್ಥೆಯು ಸೂಕ್ತವಲ್ಲ. ಇದು ರಾಷ್ಟ್ರೀಯ ಗುರುತನ್ನು ಹೆಚ್ಚಿಸಲು ಮತ್ತು ಜಾಗತಿಕ ಮಟ್ಟಕ್ಕೆ ಉನ್ನತ ಶಿಕ್ಷಣವನ್ನು

ಉತ್ತೇಜಿಸಲು ವಿದ್ಯಾರ್ಥಿಗಳಿಗೆ ಉದ್ಯೋಗ-ಆಧಾರಿತ ಶಿಕ್ಷಣವನ್ನು ಒದಗಿಸುವ ಮೂಲಕ ಯುವಕರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡುವ ಸ್ಥಳೀಯ ಸಾಮಾಜಿಕ ವಾಸ್ತವತೆಗಳನ್ನು

ಸಂಯೋಜಿಸುತ್ತದೆ. ಇದಕ್ಕಾಗಿ ಮತ್ತು ಆರ್ಥಿಕತೆಗೆ ಹೊಸ ಶಿಕ್ಷಣ ನೀತಿಯನ್ನು (New Education Policy) ಸಿದ್ದರಾಮಯ್ಯ ಘೋಷಿಸಿದರು.

ಪಠ್ಯ ಪರಷ್ಕರಣೆ ಘೋಷಣೆ

ಶಾಲಾ ಶಿಕ್ಷಣವು ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಮತ್ತು ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ದೈಹಿಕ ಮತ್ತು ಭಾವನಾತ್ಮಕ ಬೆಳವಣಿಗೆ, ಅರಿವಿನ ಮತ್ತು ಮಾನಸಿಕ ಬೆಳವಣಿಗೆಗೆ

ಪೂರಕವಾಗಿರಬೇಕು. ಶಿಕ್ಷಣವು ಬಾಂಧವ್ಯ, ಸಹೋದರತ್ವ ಮತ್ತು ಸಾಮರಸ್ಯದ ಸಹಬಾಳ್ವೆಯ ಮನೋಭಾವವನ್ನು ತುಂಬಬೇಕು. ಹಿಂದಿನ ಸರಕಾರ ಈ ಆಶಯಕ್ಕೆ ವ್ಯತಿರಿಕ್ತ ಪಠ್ಯವನ್ನು ಪಠ್ಯ ಪರಿಷ್ಕರಣೆಯಲ್ಲಿ ಸೇರಿಸಿದ್ದು,

ಪ್ರಸಕ್ತ ಸಾಲಿನಿಂದ ತೆಗೆದುಹಾಕಲು ಕ್ರಮ ಕೈಗೊಳ್ಳಲಾಗಿದೆ.

ಶಿಕ್ಷಣ ವಲಯ ಮೂಲಸೌಕರ್ಯಕ್ಕೆ ಆದ್ಯತೆ

100 ಕೋಟಿ ವೆಚ್ಚದಲ್ಲಿ 3,833 ಶಾಲಾ ಮತ್ತು 724 ಪದವಿ ಪೂರ್ವ ಕಾಲೇಜು ಕೊಠಡಿಗಳನ್ನು ಜತೆಗೆ ಮಳೆ ನೀರಿನಿಂದ ಶಿಥಿಲಗೊಂಡಿರುವ ಹಳೆಯ ಶಾಲಾ ಕಾಲೇಜು ಕಟ್ಟಡಗಳನ್ನು ಪುನಶ್ಚೇತನಗೊಳಿಸಿ ಸೇವೆಗೆ

ತರಲಾಗುವುದು. ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕಡಿಮೆ ಶೌಚಾಲಯಗಳನ್ನು ಹೊಂದಿರುವ 5,775 ಶಾಲೆಗಳು ಮತ್ತು 150 ಕಾಲೇಜುಗಳಲ್ಲಿ ಶೌಚಾಲಯ

ಘಟಕಗಳನ್ನು ನಿರ್ಮಿಸಲು 200 ಕೋಟಿ ರೂ.ಗಳ ವೆಚ್ಚದಲ್ಲಿ ನರೇಗಾ ಯೋಜನೆಯ(Narega Yojane) ಅಡಿಯಲ್ಲಿ ನಿರ್ಮಾಣ ಮಾಡಲಾಗುವುದು.

ಇದನ್ನೂ ಓದಿ : ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣು..! ಅಕ್ಕಿ, ಬೇಳೆಕಾಳುಗಳ ಬೆಲೆಗೆ ನಿಯಂತ್ರಣ ಹಾಕಿ

ಕನಿಷ್ಠ 20,000 ರೂ. ದಿಂದ 45,000 ರೂ. ಗಳವರೆಗೆ ರಾಜ್ಯದ ಸರ್ಕಾರಿ ಪ್ರಾಥಮಿಕ(Primary School) ಮತ್ತು ಪ್ರೌಢಶಾಲೆಗಳ(High School) ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಹೆಚ್ಚಿಸಿ

ಒಟ್ಟಾರೆಯಾಗಿ 153 ಕೋಟಿ ರೂ. ಅನುದಾನವನ್ನು 47,272 ಶಾಲೆಗಳು ಹಾಗೂ 1,231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒದಗಿಸಲಾಗುವುದು. ಇನ್ನೋವೇಶನ್ ಲ್ಯಾಬ್‌ಗಳನ್ನು ಮಾಧ್ಯಮಿಕ ಮತ್ತು

ಪದವಿ ಪೂರ್ವ ಕಾಲೇಜುಗಳಲ್ಲಿ ಸ್ಥಾಪಿಸಲಾಗುವುದು. ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು 2023-24ನೇ ಸಾಲಿನಲ್ಲಿ ಎರಡು ಕೋಟಿ ಸ್ಥಾಪಿಸಲಾಗುವುದು.

ವಾರಕ್ಕೆ ಎರಡು ದಿನ ಮೊಟ್ಟೆ ವಿತರಣೆ; 9,10ನೇ ತರಗತಿಗೂ ವಿಸ್ತರಣೆ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಾರದಲ್ಲಿ ಒಂದು ಬಾರಿ ವಿತರಿಸಲಾಗುತ್ತಿದ್ದು, ಇನ್ನು ಮುಂದೆ

ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು. 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು ವಿಸ್ತರಿಸಿ 280 ಕೋಟಿ ರೂ.ಗಳ

ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು.

ಹೊಸ ಯೋಜನೆ ಮರುಸಿಂಚನ ಮತ್ತು ಸಸ್ಯಶ್ಯಾಮಲ

ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ‘ಮರುಸಿಂಚನ’ ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ನೀಡಲಾಗುವುದು. ಸ್ಥಳಾವಕಾಶವುಳ್ಳ ಶಾಲೆಗಳ ಸುತ್ತಮುತ್ತ ಒಂದು

ಕಾಲಾವಧಿಯಲ್ಲಿ 50 ಲಕ್ಷ ಸಸಿಗಳನ್ನು ನೆಡುವ ‘ಸಸ್ಯ ಶ್ಯಾಮಲ’ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗುವುದು.

ಪುಸ್ತಕ ಖರೀದಿಗೆ 10 ಕೋಟಿ ಅನುದಾನ

ಸಾರ್ವಜನಿಕ ಗ್ರಂಥಾಲಯಗಳಿಗೆ ಉತ್ತಮ ಪುಸ್ತಕಗಳನ್ನು ಖರೀದಿಸಲು ರಾಜ್ಯದ ಸಾಹಿತಿಗಳ ಹಾಗೂ ಪ್ರಕಾಶಕರ ಬೇಡಿಕೆಗಳಿಗೆ ಸ್ಪಂದಿಸಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು.

ರಶ್ಮಿತಾ ಅನೀಶ್

Exit mobile version