ಬೆಂಗಳೂರಿನಲ್ಲಿ ಸಾವಿರಾರು (building shelter for stray dogs) ಬೀದಿ ನಾಯಿಗಳ ಪತ್ತೆ
ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣಗಳಲ್ಲಿ ಸರ್ವೆ; ಆಶ್ರಯ ತಾಣಕ್ಕೆ ಜಾಗ ಗುರುತು
ಸುಪ್ರೀಂ ಆದೇಶದಂತೆ ಸರ್ವೆ, 2 ಕೋಟಿ ವೆಚ್ಚದಲ್ಲಿ ಆಶ್ರಯ ತಾಣ ನಿರ್ಮಾಣ ಯೋಜನೆ
Bengaluru: ಬೆಂಗಳೂರು ನಗರದಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಸಂಖ್ಯೆ (building shelter for stray dogs) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವುಗಳ ಲೆಕ್ಕಾಚಾರ ನಡೆಸಲು ಸಂಬಂಧಿತ ಅಧಿಕಾರಿಗಳು ಸರ್ವೆ ಕಾರ್ಯ ಕೈಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಬೀದಿ ನಾಯಿಗಳನ್ನು ಗುರುತಿಸಿ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಸರ್ವೆ ಕಾರ್ಯದಲ್ಲಿ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, (building shelter for stray dogs) ಕ್ರೀಡಾಂಗಣಗಳು ಮತ್ತು ಆಟದ ಮೈದಾನಗಳಂತಹ ಸಾರ್ವಜನಿಕ ಸ್ಥಳಗಳನ್ನು ಒಳಗೊಂಡಂತೆ ಪರಿಶೀಲನೆ ನಡೆಸಲಾಗಿದೆ.
ಸದ್ಯ ಲಭ್ಯವಾದ ಮಾಹಿತಿಯ ಪ್ರಕಾರ, ಬೆಂಗಳೂರು ನಗರದಲ್ಲಿ 2,670ಕ್ಕೂ ಹೆಚ್ಚು ಬೀದಿ ನಾಯಿಗಳು ಸಾರ್ವಜನಿಕ ಸ್ಥಳಗಳಲ್ಲಿ ಇರುವುದಾಗಿ ವರದಿ ತಿಳಿಸಿದೆ.
ನಗರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಈ ಸರ್ವೆ ಕಾರ್ಯ ನಡೆಯುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಕಂಡುಬಂದ ಬೀದಿ ನಾಯಿಗಳ ಸಂಖ್ಯೆಯನ್ನು ಭಾಗಶಃ ಪ್ರಕಟಿಸಲಾಗಿದೆ.
ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 504, ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 875, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 591 ಬೀದಿ ನಾಯಿಗಳು ಪತ್ತೆಯಾಗಿವೆ.
ಅದೇ ರೀತಿ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 331 ಹಾಗೂ ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ 369 ಬೀದಿ ನಾಯಿಗಳು ಕಂಡುಬಂದಿವೆ.
ಈ ಅಂಕಿ-ಅಂಶಗಳನ್ನು ಆಧರಿಸಿ ನಗರದಲ್ಲಿ ಬೀದಿ ನಾಯಿಗಳ ಸಮಸ್ಯೆ ಗಂಭೀರವಾಗಿರುವುದು ಸ್ಪಷ್ಟವಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಈ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಕೆಲವು ಕಡೆ ಅಂಕಿ-ಅಂಶಗಳ ನಿಖರತೆ ಕುರಿತು ಪ್ರಶ್ನೆಗಳು ಕೂಡ ಕೇಳಿಬಂದಿವೆ.
ಕೆಲವು ಸಂಸ್ಥೆಗಳು ಬೀದಿ ನಾಯಿಗಳ ಸಂಖ್ಯೆಯನ್ನು ನೀಡದಿರುವುದು ಹಾಗೂ ಕೆಲವು ಪ್ರದೇಶಗಳ ಸಂಪೂರ್ಣ ಮಾಹಿತಿ ಲಭ್ಯವಾಗದಿರುವುದರಿಂದ ಅಂತಿಮ ಅಂಕಿ-ಅಂಶಗಳಲ್ಲಿ ವ್ಯತ್ಯಾಸ ಇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಆದರೂ, ಸರ್ವೆ ಕಾರ್ಯ ಮುಂದುವರಿದಿದ್ದು, ಸಂಪೂರ್ಣ ಮಾಹಿತಿ ಸಂಗ್ರಹಿಸಿದ ನಂತರ ಅಂತಿಮ ವರದಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ಆಶ್ರಯ ತಾಣ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ಆನೇಕಲ್ ವ್ಯಾಪ್ತಿಯ ಬಿಂಗೀಪುರದಲ್ಲಿ ಸುಮಾರು 5 ಎಕರೆ
ಜಾಗವನ್ನು ಗುರುತಿಸಲಾಗಿದ್ದು, ಇಲ್ಲಿ ಸುಮಾರು 500 ಬೀದಿ ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯವಿರುವ ಆಶ್ರಯ ತಾಣ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ.
ಈ ಯೋಜನೆಗೆ ಸುಮಾರು 2 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಆಶ್ರಯ ತಾಣ ನಿರ್ವಹಣೆಗೆ ಸ್ವಯಂಸೇವಾ ಸಂಸ್ಥೆಗಳಿಗೆ
ಟೆಂಡರ್ (Tender) ಕರೆಯಲಾಗಿದ್ದರೂ, ಇನ್ನೂ ಹೆಚ್ಚಿನ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದುಬಂದಿದೆ.
ಇನ್ನೂ ಕೆಲವು ಪ್ರದೇಶಗಳಲ್ಲಿ ಹೆಚ್ಚುವರಿ ಆಶ್ರಯ ತಾಣ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ. ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ಆಶ್ರಯ ತಾಣಗಳ
ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದ್ದು, ಕೆಲವು ಕಡೆ ಕಾಮಗಾರಿ ಆರಂಭವಾಗಿದೆ. ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿಯೂ ಜಾಗ ಗುರುತಿಸಲಾಗಿದೆ.
ನಗರದಲ್ಲಿ ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.
ಮುಂದಿನ ದಿನಗಳಲ್ಲಿ ಸಂಪೂರ್ಣ ಸರ್ವೆ ಪೂರ್ಣಗೊಂಡ ನಂತರ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ : https://vijayatimes.com/mallikarjun-kharge-insults-gujarat-people/