download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಬಸ್; 32 ಕ್ಕೂ ಹೆಚ್ಚು ಮಂದಿ ಸಾವು

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಎಸ್​ಡಿಆರ್​ಎಫ್ ತಂಡ ಕ್ರೇನ್ ಸಹಾಯದಿಂದ ಬಸ್ಸನ್ನು ನೀರಿನಿಂದ ಮೇಲಕೆತ್ತಿತು. ಮುನ್ನೆಚ್ಚರಿಕೆಯಾಗಿ ಸಮೀಪದ ಬನಸಾಗರ್ ಜಲಾಶಯದಿಂದ ಕಾಲುವಿಗೆ ನೀರು ಹರಿಸುವುದನ್ನು ತಾತ್ಕಾಲಿಕಾಗಿ ನಿಲ್ಲಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

ಭೋಪಾಲ್, ಫೆ. 16: ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ಬಸ್​ವೊಂದು ಕಾಲುವೆಗೆ ಉರುಳಿ ಬಿದ್ದು 32ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಸಿದ್ದಿ ಜಿಲ್ಲೆಯ ರಾಮಪುರ್ ನಾಯಿಕಿನ್ ಪ್ರದೇಶದಲ್ಲಿ ಇಂದು ಮಂಗಳವಾರ ಬೆಳಗ್ಗೆ 7:30ಕ್ಕೆ ಈ ಅವಘಡ ಸಂಭವಿಸಿರುವುದು ತಿಳಿದುಬಂದಿದೆ. ಈ ಅಪಘಾತಕ್ಕೊಳಗಾದ ಈ ಬಸ್ಸಿನಲ್ಲಿ 54 ಮಂದಿ ಇದ್ದು ಸಿದ್ದಿಯಿಂದ ಸತ್ನಾ ನಗರಕ್ಕೆ ಹೋಗುತ್ತಿತ್ತು. ಛುಯಾ ಕಣಿವೆ ಮೂಲಕ ಹೋಗಬೇಕಿದ್ದ ಬಸ್, ಟ್ರಾಫಿಕ್ ಇದ್ದ ಹಿನ್ನೆಲೆಯಲ್ಲಿ ಚಾಲಕ ಮಾರ್ಗ ಬದಲಿಸಿ ಹೋಗಿದ್ದ. ಈ ವೇಳೆ ಬಸ್ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ. ಆದರೆ ಅದೃಷ್ಟವಶಾತ್‌ ಬಸ್ ಚಾಲಕ ಬದುಕಿದ್ದಾನೆ. ಆದರೆ, ಬಸ್ಸಿನಲ್ಲಿದ್ದ 54 ಜನರ ಪೈಕಿ ಹೆಚ್ಚಿನವರು ಬದುಕಿರುವ ಸಾಧ್ಯತೆ ಇಲ್ಲ. ಈವರೆಗೆ 32 ಮಂದಿ ಶವ ದೊರಕಿದೆ. ಡ್ರೈವರ್ ಸೇರಿದಂತೆ ಏಳು ಮಂದಿಯನ್ನು ರಕ್ಷಿಸಲಾಗಿದೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಎಸ್​ಡಿಆರ್​ಎಫ್ ತಂಡ ಕ್ರೇನ್ ಸಹಾಯದಿಂದ ಬಸ್ಸನ್ನು ನೀರಿನಿಂದ ಮೇಲಕೆತ್ತಿತು. ಮುನ್ನೆಚ್ಚರಿಕೆಯಾಗಿ ಸಮೀಪದ ಬನಸಾಗರ್ ಜಲಾಶಯದಿಂದ ಕಾಲುವಿಗೆ ನೀರು ಹರಿಸುವುದನ್ನು ತಾತ್ಕಾಲಿಕಾಗಿ ನಿಲ್ಲಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

32 ಸೀಟುಗಳ ಈ ಬಸ್ಸಿನಲ್ಲಿ 54 ಮಂದಿ ಪ್ರಯಾಣಿಸುತ್ತಿದ್ದರು. ಹೆಚ್ಚು ಜನರು ಇದ್ದರಿಂದ ಬಸ್ ನಿಯಂತ್ರಣ ತಪ್ಪಿ ಉರುಳಿಬಿದ್ದಿರುವ ಶಂಕೆ ಇದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಸಾರಿಗೆ ಸಚಿವ ಗೋವಿಂದ್ ಸಿಂಗ್ ರಾಜಪೂತ್ ಅವರನ್ನ ಕರೆದು ವಿಚಾರಣೆ ನಡೆಸಿದ್ದಾರೆ. ಇವತ್ತು ಸಿಎಂ ತಮ್ಮೆಲ್ಲಾ ಕಾರ್ಯಕ್ರಮಗಳನ್ನ ರದ್ದುಗೊಳಿಸಿ ಅಪಘಾತ ಘಟನೆಯನ್ನ ಅವಲೋಕಿಸುತ್ತಿದ್ದಾರೆ.

ತಮಿಳುನಾಡಿನಲ್ಲಿ ಮತ್ತೊಂದು ದುರ್ಘಟನೆ:

ಇವತ್ತು ತಮಿಳುನಾಡಿನಲ್ಲಿ ಇದೇ ರೀತಿಯ ಮತ್ತೊಂದು ಅಪಘಾತ ಘಟನೆ ವರದಿಯಾಗಿದೆ. ತೂತುಕ್ಕುಡಿ ಜಿಲ್ಲೆಯಲ್ಲಿ ಸಣ್ಣ ಸರಕು ಸಾಗಣೆ ವಾಹನವೊಂದು ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದು ಐವರು ಮೃತಪಟ್ಟಿದ್ಧಾರೆ. 30 ಮಂದಿ ಗಾಯಗೊಂಡಿದ್ಧಾರೆ. ಮೃತಪಟ್ಟವರೆಲ್ಲರೂ ಮಹಿಳೆಯರೇ ಆಗಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article