Bengaluru : ಗಣೇಶ ಚತುರ್ಥಿ ಸೇರಿ ಸಾಲು ಸಾಲು ಹಬ್ಬಗಳು ಹಾಗೂ ವಾರಾಂತ್ಯದ ದಿನಗಳಲ್ಲಿ ಖಾಸಗಿ ಬಸ್‌ಗಳ ಟಿಕೆಟ್ (Bus ticket price increase) ದರವನ್ನು ವಿಪರೀತವಾಗಿ ಏರಿಕೆ
ಮಾಡಿದ್ದೂ ಇದರಿಂದ ಪ್ರಯಾಣಿಕರಿಗೆ ಅನಾನುಕೂಲ ಆಗುತ್ತಿರುವುದರಿಂದ ಪ್ರಯಾಣಿಕರ ಜೇಬಿಗೂ ಕತ್ತರಿ ಬೀಳುತ್ತಿದೆ. ಈ ಹಿನ್ನೆಲೆ ಖಾಸಗಿ ಬಸ್ ಮಾಲೀಕರು ಹಾಗೂ ಆನ್‌ಲೈನ್ (Online)
ಟಿಕೆಟ್ ನೀಡುವ ವಿತರಕರಿಗೆ ಕರ್ನಾಟಕ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದ್ದು, ಟಿಕೆಟ್ ದರವನ್ನು ಹೆಚ್ಚಿಸಿ ಪ್ರಯಾಣಿಕರಿಗೆ ಅನಾನುಕೂಲ ಮಾಡಬೇಡಿ ಎಂದು ಸೂಚಿಸಿದ್ದಾರೆ.
ಗಣೇಶ ಹಬ್ಬಕ್ಕೆ ಖಾಸಗಿ ಬಸ್ ಟಿಕೆಟ್ ದರ ಭಾರೀ ದುಬಾರಿ ಮಾಡಿದ್ದು, ಸಾರಿಗೆ ಇಲಾಖೆಯಿಂದ ಖಾಸಗಿ ಬಸ್ ಮಾಲೀಕರಿಗೆ ಖಡಕ್ ವಾರ್ನಿಂಗ್ (Warning) ಬಸ್ ದರ ಭಾರೀ ಹೆಚ್ಚಳ ಮಾಡಿದರೆ ಕಠಿಣ
ಕ್ರಮದ ಎಚ್ಚರಿಕೆ ಖಾಸಗಿ ಬಸ್ ಮಾಲೀಕರು, ಆನ್‌ಲೈನ್ ಬುಕ್ಕಿಂಗ್ (Bus ticket price increase) ಆಪರೇಟರ್‌ಗಳಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು, ಇತ್ತೀಚಿಗೆ ಮಾಧ್ಯಮಗಳಲ್ಲಿ ವಾರಾಂತ್ಯ, ಹಬ್ಬಗಳಿಗೆಂದು ಖಾಸಗಿ ಪ್ರಯಾಣಿಕರ ವಾಹನಗಳ ಪ್ರಯಾಣ ದರಗಳಲ್ಲಿ
ವಿಪರೀತ ಹೆಚ್ಚಳ ಮಾಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿರುವ ಕುರಿತು ತಿಳಿದು ಬಂದಿದೆ ಮತ್ತು ಇದೇ ವಿಷಯದ ಕುರಿತು ಸಾರಿಗೆ ಇಲಾಖೆಗೆ ಸಾರ್ವಜನಿಕರಿಂದ ಹಲವು ದೂರುಗಳು ಸಹ ಬಂದಿವೆ
ಎಂದು ಹೇಳಿದ್ದಾರೆ.
ಆದ್ದರಿಂದ ಖಾಸಗಿ ಪ್ರಯಾಣಿಕರ ವಾಹನಗಳ ಮಾಲೀಕರು ಮತ್ತು ಆನ್‌ಲೈನ್ ಟಿಕೆಟ್(Ticket) ನೀಡುವ ವಿತರಕರಿಗೆ ವಾರಾಂತ್ಯ ಹಾಗೂ ಸರದಿ ಹಬ್ಬ ಹರಿದಿನಗಳಲ್ಲಿ ಪ್ರಯಾಣ ದರಗಳಲ್ಲಿ ವಿಪರೀತ ಹೆಚ್ಚಳ
ಮಾಡಿ ಪ್ರಯಾಣಿಕರಿಗೆ ಅನಾನುಕೂಲತೆ ಮಾಡಬಾರದು ಎಂದು ಹಾಗೂ ಪ್ರಯಾಣಿಕರ ವಾಹನಗಳಲ್ಲಿ ಇತರೆ ಸರಕುಗಳನ್ನು ಅನಧಿಕೃತವಾಗಿ ಸಾಗಿಸದಿರಲು ತಿಳಿಸಲಾಗಿದೆ. ಇಂತಹ ಪ್ರಕರಣಗಳು
ಕಂಡುಬಂದಲ್ಲಿ ವಾಹನ ಮಾಲೀಕರ ಹಾಗೂ ಆನ್‌ಲೈನ್ ಟಿಕೆಟ್ ನೀಡುವ ವಿತರಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
ಹಬ್ಬದ ಸಂದರ್ಭದಲ್ಲಿ ಟಿಕೆಟ್ ದರ ದಿಢೀರ್ ಏರಿಕೆ!
ಯುಗಾದಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಸೇರಿ ಇತರೆ ಹಬ್ಬಗಳ ಸಂದರ್ಭದಲ್ಲಿ ಖಾಸಗಿ ಬಸ್‌ಗಳ ಟಿಕೆಟ್ ದರ ದಿಢೀರ್ ಏರುತ್ತದೆ. ಹಬ್ಬದ ವೇಳೆ ಬೆಂಗಳೂರು ಸೇರಿ ವಿವಿಧ ಪ್ರಮುಖ ನಗರಗಳಿಂದ
ತಮ್ಮ ವಾಸಸ್ಥಳಗಳಿಗೆ ಜನರು ತೆರಳುತ್ತಾರೆ. ಇದನ್ನೇ ಬಳಸಿಕೊಳ್ಳುವ ಖಾಸಗಿ ವಾಹನಗಳ ಮಾಲೀಕರು ನಿಗದಿತ ದರಕ್ಕಿಂತ ದುಪ್ಪಟ್ಟು ದರವನ್ನು ವಿಧಿಸುತ್ತಾರೆ. ಇದರಿಂದ ಜನರು ಅನಿವಾರ್ಯವಾಗಿ ಭಾರೀ
ಬೆಲೆ ನೀಡಿ ಊರಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ.
ಈ ಹಿಂದೆ ಬಿ ಶ್ರೀರಾಮುಲು (B. Sriramulu) ಸಾರಿಗೆ ಸಚಿವರಾಗಿದ್ದಾಗ ಇಂತಹ ಘಟನೆಗಳು ನಡೆದಲ್ಲಿ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಿದ್ದರು. ಯಾವುದೇ ಕಾರಣಕ್ಕೂ ರಾಜೀ ಇಲ್ಲ ಎಂದು
ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಈ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸದ್ಯ ಗಣೇಶ ಚತುರ್ಥಿಗೆ ಒಂದು ದಿನ ರಜೆ ಹಾಕಿದರೆ ನಾಲ್ಕು ದಿನ ರಜೆ ಸಿಗಲಿದೆ. ಶುಕ್ರವಾರ
ರಾತ್ರಿಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆಯಾಗಿದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಗಂಗಾವತಿಗೆ 700 ರಿಂದ 800 ರೂ. ದರ ಇತ್ತು. ಶುಕ್ರವಾರ ಈ ಬಸ್‌ಗಳ ದರ 1600 ರಿಂದ 2000
ರೂಪಾಯಿವರೆಗೂ ಏರಿಕೆಯಾಗಿದೆ.
- ಮೇಘಾ ಮನೋಹರ ಕಂಪು