ಅಶ್ಲೀಲ ವಿಡಿಯೋ ನಿರ್ಮಾಣ‌ ಆರೋಪ: ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಮುಂಬೈ, ಜು. 20: ಅಶ್ಲೀಲ ವಿಡಿಯೋ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ನೀಲಿ ಚಿತ್ರಗಳನ್ನು ನಿರ್ಮಿಸಿದ ಆರೋಪದಡಿ ಮುಂಬೈ ಅಪರಾಧ ದಳದ ಪೊಲೀಸರು ಉದ್ಯಮಿ ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಅಶ್ಲೀಲ ಚಿತ್ರಗಳನ್ನು ನಿರ್ಮಿಸಿ, ಮೊಬೈಲ್ ಅಪ್ಲಿಕೇಶನ್ ​ನಲ್ಲಿ ಅಪ್ಲೋಡ್​ ಮಾಡಿರುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ರಾಜ್​ ಕುಂದ್ರಾ ಪ್ರಮುಖ ಆರೋಪಿ ಎಂದು ಹೇಳಲಾಗಿತ್ತು.

ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾದ ಮುಂಬೈ ಪೊಲೀಸರು, ಸೋಮವಾರ ರಾತ್ರಿ ಮುಂಬೈ ಪೊಲೀಸರು ರಾಜ್ ಕುಂದ್ರಾ ಬಂಧಿಸಿದ್ದಾರೆ. 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.

ಈ ನಡುವೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಉದ್ಯಮಿ ರಾಜ್ ಕುಂದ್ರಾ ಬಂಧನದ ಬೆನ್ನಲ್ಲೇ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮುಂಬೈ ಪೊಲೀಸರು, ನವಿ ಮುಂಬೈನ ನೆರುಲ್ ಎಂಬಲ್ಲಿ ರಯಾನ್ ಜಾನ್ ಎಂಬಾತನನ್ನು ಸಹ ಬಂಧಿಸಿದ್ದಾರೆ ಎನ್ನಲಾಗಿದೆ.

Latest News

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.