• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಾಲೆ–ಕಾಲೇಜುಗಳ ಬಳಿ BuzzBallz ಮಾರಾಟ: 15% ಮದ್ಯಾಂಶ ಇರುವ ಪಾನೀಯದ ಮಾರಾಟದ ಬಗ್ಗೆ ರಾಜ್ಯ ಮಕ್ಕಳ ಆಯೋಗ ಕಳವಳ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಶಾಲೆ–ಕಾಲೇಜುಗಳ ಬಳಿ BuzzBallz ಮಾರಾಟ: 15% ಮದ್ಯಾಂಶ ಇರುವ ಪಾನೀಯದ ಮಾರಾಟದ ಬಗ್ಗೆ ರಾಜ್ಯ ಮಕ್ಕಳ ಆಯೋಗ ಕಳವಳ
0
SHARES
31
VIEWS
Share on FacebookShare on Twitter
  • ವಿದ್ಯಾರ್ಥಿಗಳಲ್ಲಿ ಜನಪ್ರಿಯವಾಗುತ್ತಿರುವ (BuzzBallz drink popular among students) BuzzBallz ಪಾನೀಯ
  • BuzzBallz ಪಾನೀಯದ ಮಾರಾಟದ ಮೇಲೆ ನಿಗಾ
  • ಶೈಕ್ಷಣಿಕ ಸಂಸ್ಥೆಗಳ ಬಳಿ ಮಾರಾಟದ ಬಗ್ಗೆ ಮಕ್ಕಳ ಆಯೋಗ ಗಂಭೀರ ಚಿಂತನೆ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು (BuzzBallz drink popular among students) ಚರ್ಚೆಗೆ ಗ್ರಾಸವಾಗುತ್ತಿರುವ ‘BuzzBallz’ ಎಂಬ ಪಾನೀಯ ಇದೀಗ ಕರ್ನಾಟಕದಲ್ಲಿಯೂ ಗಮನ ಸೆಳೆಯುತ್ತಿದೆ.

ಜ್ಯೂಸ್ ಅಥವಾ ಎನರ್ಜಿ ಡ್ರಿಂಕ್‌ನಂತೆ ಕಾಣುವ ಈ ಪಾನೀಯದಲ್ಲಿ ಸುಮಾರು 15 ಶೇಕಡಾ ಮದ್ಯಾಂಶ ಇರುವುದಾಗಿ ಹೇಳಲಾಗುತ್ತಿದ್ದು, ಇದು ವಿದ್ಯಾರ್ಥಿಗಳಲ್ಲಿ ಜನಪ್ರಿಯವಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗಿದೆ.

ವಿಶೇಷವಾಗಿ ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತಲಿನ ಅಂಗಡಿಗಳಲ್ಲಿ ಈ ಪಾನೀಯ ಸುಲಭವಾಗಿ (BuzzBallz drink popular among students) ಲಭ್ಯವಾಗುತ್ತಿದೆ ಎಂಬ ವರದಿಗಳು ಹೊರಬಂದಿದ್ದು, ರಾಜ್ಯದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ.

‘BuzzBallz’ ಪಾನೀಯವು ಸಾಮಾನ್ಯವಾಗಿ ವೋಡ್ಕಾ, ಟ್ರಾಪಿಕಲ್ ಹಣ್ಣಿನ ಜ್ಯೂಸ್, ನೈಸರ್ಗಿಕ ಮತ್ತು ಕೃತಕ ಸುವಾಸನೆಗಳು ಹಾಗೂ ಬಣ್ಣಗಳನ್ನು ಬಳಸಿ ತಯಾರಿಸಲಾಗುತ್ತದೆ.

ವಿವಿಧ ರುಚಿಗಳಲ್ಲಿ ಲಭ್ಯವಿರುವ ಈ ಪಾನೀಯವು ಹೊರಗೆ ನೋಡಲು ಸಾಮಾನ್ಯ ಜ್ಯೂಸ್ ಅಥವಾ ಎನರ್ಜಿ ಡ್ರಿಂಕ್‌ನಂತೆ (Energy Drink) ಕಾಣುವುದರಿಂದ ಯುವಕರು ಮತ್ತು ವಿದ್ಯಾರ್ಥಿಗಳನ್ನು ಸುಲಭವಾಗಿ ಆಕರ್ಷಿಸುತ್ತದೆ.

ಆದರೆ ಇದರಲ್ಲಿರುವ ಮದ್ಯಾಂಶ ಮತ್ತು ಹೆಚ್ಚಿನ ಸಕ್ಕರೆ ಪ್ರಮಾಣ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪ್ರಕಾರ, ಮದ್ಯದ ಬಗ್ಗೆ ಸರಿಯಾದ ಅರಿವು ಇಲ್ಲದ ಕೆಲವು ವಿದ್ಯಾರ್ಥಿಗಳು ಇದನ್ನು ಜ್ಯೂಸ್ ಎಂದು ಭಾವಿಸಿ ಸೇವಿಸುವ ಸಾಧ್ಯತೆಯೂ ಇದೆ.

ಇಂತಹ ಪಾನೀಯಗಳ ಬಳಕೆ ಹೆಚ್ಚಾದರೆ ಅದು ನಿಧಾನವಾಗಿ ವ್ಯಸನದತ್ತ ದಾರಿ ತೋರಿಸಬಹುದು. ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೂ ಇದು ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ವಿಶೇಷವಾಗಿ ಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತ ಈ ಪಾನೀಯ ಸುಲಭವಾಗಿ ದೊರೆಯುತ್ತಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದು ಪಾನೀಯದ ಮಾದರಿಗಳನ್ನು ಪರೀಕ್ಷಿಸಲು ಸೂಚಿಸಿದೆ. ಅದರಲ್ಲಿರುವ ಮದ್ಯಾಂಶ ಮತ್ತು ಇತರ ಅಂಶಗಳನ್ನು ಪ್ರಯೋಗಾಲಯದಲ್ಲಿ ಪರಿಶೀಲಿಸಿ ವರದಿ ನೀಡಲು ಐದು ದಿನಗಳ ಗಡುವು ನೀಡಲಾಗಿದೆ.

ಪರೀಕ್ಷೆಯ ನಂತರ ಪಾನೀಯವು ಹಾನಿಕಾರಕ ಎಂದು ಕಂಡುಬಂದರೆ ಅದರ ಮಾರಾಟದ ಮೇಲೆ ನಿರ್ಬಂಧ ಅಥವಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಆಯೋಗದ ಅಧ್ಯಕ್ಷ ಶಶಿಧರ್ ಕೊಸಾಂಬೆ ಅವರು ಶಾಲೆ ಮತ್ತು ಕಾಲೇಜುಗಳ ಸಮೀಪ ಇಂತಹ ಮದ್ಯಾಂಶ ಇರುವ ಪಾನೀಯಗಳ ಮಾರಾಟವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಇದರ ಮಧ್ಯೆ BuzzBallz ಕಂಪನಿಯು ತನ್ನ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ನಿರಾಕರಿಸಿ ಸ್ಪಷ್ಟನೆ ನೀಡಿದೆ. ಕಂಪನಿಯ ಪ್ರಕಾರ, BuzzBallz ಒಂದು ಸುವಾಸನೆಯುಕ್ತ ಕಾಕ್‌ಟೇಲ್ ಪಾನೀಯವಾಗಿದ್ದು, ಇದು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರದ (FSSAI) ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸುತ್ತದೆ.

ಈ ಪಾನೀಯವನ್ನು ಎಂದಿಗೂ ತಂಪು ಪಾನೀಯವಾಗಿ ಮಾರಾಟ ಮಾಡಲಾಗಿಲ್ಲ ಮತ್ತು ಕೇವಲ ಮದ್ಯ ಮಾರಾಟಕ್ಕೆ ಅನುಮತಿ ಪಡೆದ ಅಂಗಡಿಗಳ ಮೂಲಕವೇ ವಿತರಿಸಲಾಗುತ್ತದೆ ಎಂದು ಕಂಪನಿ ತಿಳಿಸಿದೆ. ಅಲ್ಲದೆ ಕಾನೂನುಬದ್ಧ ಮದ್ಯಪಾನದ ವಯಸ್ಸು ಹೊಂದಿರುವವರಿಗೆ ಮಾತ್ರ ಇದನ್ನು ಮಾರಾಟ ಮಾಡಲಾಗುತ್ತದೆ ಎಂಬುದನ್ನೂ ಸ್ಪಷ್ಟಪಡಿಸಿದೆ.

ಇದನ್ನು ಓದಿ : https://vijayatimes.com/no-minimum-balance-for-bank-accounts/

Tags: alcholbuzzballsdrinksselling

Related News

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್
ಪ್ರಮುಖ ಸುದ್ದಿ

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್

April 16, 2026
ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ
ದೇಶ-ವಿದೇಶ

ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ

April 16, 2026
ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ
ಪ್ರಮುಖ ಸುದ್ದಿ

ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ

April 16, 2026
ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

April 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.