- ಯತ್ನಾಳ್ (Yathnal) ವಿರುದ್ಧ ಶಿಸ್ತು ಕ್ರಮ (BY Vijayendra about yatnal)
- ಈ ಘಟನೆಯ ಹಿಂದೆ ನನ್ನ ಪಾತ್ರವಿಲ್ಲವೆಂದು ಬಿ.ವೈ ವಿಜಯೇಂದ್ರ (B.Y. Vijayendra)
- ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಪಕ್ಷದ ವರಿಷ್ಠರು (Party leaders) ತೆಗೆದುಕೊಂಡ ನಿರ್ಧಾರ
Bengaluru: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಅವರನ್ನು ಆರು ವರ್ಷ ಉಚ್ಛಾಟನೆ (Six years of exile) ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (BJP President B.Y. Vijayendra) ಪ್ರತಿಕ್ರಿಯೆ ನೀಡಿದ್ದಾರೆ. ಯತ್ನಾಳ್ ವಿರುದ್ಧದ ಶಿಸ್ತುಕ್ರಮ (Discipline) ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ವಿಜಯೇಂದ್ರ (Vijayendra) , ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು (Complaints) ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ ಎಂದಿದ್ದಾರೆ.
ನಮ್ಮ ತಂದೆಯವರಾದ ಯಡಿಯೂರಪ್ಪನವರು (Yediyurappa’s) ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ (Party like family) ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು (Elders of the association) ಮತ್ತು ಪಕ್ಷದ ಹಿರಿಯರ (Party elders) ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದು ಸ್ಪಷ್ಪಪಡಿಸಿದ್ದಾರೆ (party elders).
ಇನ್ನು ನಮ್ಮ ಪಕ್ಷ ಬಿಜೆಪಿ ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆಯಾಗಿದೆ ಎಂದಿದ್ದಾರೆ.

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ (nervous) , ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ (Dedication-sacrifice) ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು (Patience) ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು (Disciplinary action) ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು (Unfortunately) ದುಃಖಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: http://ಸೌಗತ್-ಇ-ಮೋದಿ ಅಭಿಯಾನ: ಇದು ಓಲೈಕೆ ರಾಜಕಾರಣವೆಂದು ದಿನೇಶ್ ಗುಂಡೂರಾವ್ ಗಿಡಿ
ಅಶಿಸ್ತಿನ ವಿರುದ್ಧ ಇಂದು ಪಕ್ಷದ ವರಿಷ್ಠರು ಕೈಗೊಂಡಿರುವ (BY Vijayendra about yatnal) ನಿರ್ಧಾರವನ್ನು ಸಂಭ್ರಮಿಸಬಾರದೆಂದು ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BJP state president Vijayendra) ಅವರು ಮನವಿ ಮಾಡಿಕೊಂಡಿದ್ದಾರೆ.