Bengaluru: ಕಳೆದ ಕೆಲ ದಿನಗಳಿಂದ ಬಿಜೆಪಿ (BJP) ಪಕ್ಷದಲ್ಲಿ ಒಳಜಗಳ ಹೆಚ್ಚಾಗಿದೆ. ಅದರ ಬೆನ್ನಲ್ಲೇ ಮಾರ್ಚ್ 4 ರಂದು (BY Vijayendra gave a tong to the Yatnal faction) ವೀರಶೈವ ಲಿಂಗಾಯತ ಮುಖಂಡರ ಸಭೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಬಣ ನಿರ್ಧಾರ ಕೈಗೊಂಡಿರುವ ಬೆನ್ನಲ್ಲೇ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಪರ ವೀರಶೈವ ಲಿಂಗಾಯತ ಸಮುದಾಯದ ಸರಣಿ ಸಭೆಗಳನ್ನು ನಡೆಸಲು ಹಿತೈಷಿಗಳು ನಿರ್ಧರಿಸಿದ್ದರು.
ಆದರೆ, ಇದಕ್ಕೆ ತಡೆಯೊಡ್ಡಿರುವ ವಿಜಯೇಂದ್ರ, ಆ ಮೂಲಕ ಯತ್ನಾಳ್ ಬಣಕ್ಕೆ ಟಕ್ಕರ್ ಕೊಟ್ಟಿದ್ದಾರೆ. ಸಮಾಜದ ಹೆಸರಿನಲ್ಲಿ ಸಭೆ ಸಂಘಟಿಸಬೇಡಿ, ಅದರ ಬದಲು ಪಕ್ಷ ಸಂಘಟನೆಗೆ ಒತ್ತು ನೀಡಿ ಎಂದು ಅವರು ಬೆಂಬಲಿಗರಲ್ಲಿ ವಿನಂತಿ ಮಾಡಿದ್ದಾರೆ.

ಇನ್ನು ಈ ಕುರಿತಾಗಿ ಸಾಮಾಜಿಕ ಮಾಧ್ಯಮ (Social media) ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ವಿಜಯೇಂದ್ರ, ಸಮ ಸಮಾಜ ಕಟ್ಟಲು ತಮ್ಮನ್ನು ಸಮರ್ಪಿಸಿಕೊಂಡ ಅಣ್ಣ ಬಸವಣ್ಣನವರ ತತ್ವ ಅನುಸರಿಸಿ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎಂಬ ಧ್ಯೇಯ ಪಾಲಿಸಿ ಆಡಳಿತ ನಡೆಸಿದವರು ಮಾನ್ಯ ಬಿ.ಎಸ್. ಯಡಿಯೂರಪ್ಪನವರು (B.S. Yediyurappa).
ಇದನ್ನು ಓದಿ : ಮಾರ್ಚ್ 3 ರಿಂದ ಬಜೆಟ್ ಅಧಿವೇಶನ ಅರಂಭ: ಚರ್ಚೆಗೆ ಕೇವಲ 15 ದಿನಗಳ ಕಾಲಾವಕಾಶ ನೀಡಿರುವ ಸರ್ಕಾರದ ವಿರುದ್ಧ ಮುಗಿಬೀಳಲು BJP ಸಜ್ಜು
ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ನಾನು ವೀರಶೈವ ಲಿಂಗಾಯತ (Veerashaiva Lingayat) ಸಮಾಜಕ್ಕೆ ಸೇರಿದವನು ಎಂಬ ಬಗ್ಗೆ ಕಾಳಜಿ ಪೂರ್ವಕ ಹೆಮ್ಮೆ ಇರಿಸಿಕೊಂಡಿದ್ದೇನೆ. ಈ ನಿಟ್ಟಿನಲ್ಲಿ ಸಮಾಜದ ಆಶಯಕ್ಕೆ ಪೂರಕವಾಗಿ ಸರ್ವ ಸಮಾಜಗಳ ಬಗ್ಗೆ ಸಮಭಾವ ಇಟ್ಟುಕೊಂಡು ಒಟ್ಟು ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಚಿಂತಿಸುತ್ತಿದ್ದೇನೆ .
ಆ ಮೂಲಕ ಸಮಗ್ರ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಹಾಗೂ ಮಾನ್ಯ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ವಿಕಸಿತ ಭಾರತದ ಮಹಾ ಸಂಕಲ್ಪದ ಗುರಿ ಸಾಧಿಸಲು ಪರಿಶ್ರಮಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಸಿದ್ದಾಂತ ಪ್ರತಿಪಾದಿಸುವ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಹೆಜ್ಜೆ ಇಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.
ಮಾನ್ಯ ಬಿ.ಎಸ್.ಯಡಿಯೂರಪ್ಪನವರ ಮೇಲಿನ ಅಭಿಮಾನದ ಕಾರಣಕ್ಕಾಗಿ (BY Vijayendra gave a tong to the Yatnal faction) ವೀರಶೈವ ಲಿಂಗಾಯತ ಸಮುದಾಯದ ಸರಣಿ ಸಭೆಗಳನ್ನು ನಡೆಸಲು ಹೊರಟಿರುವ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣದಲ್ಲೇ ಇದನ್ನು ನಿಲ್ಲಿಸುವಂತೆ ತಿಳಿಸಿದ್ದೇನೆ. ಸಭೆಗಳನ್ನು ಮಾಡುವುದರಿಂದ ಪಕ್ಷಕ್ಕೂ ಸಹ ಮುಜುಗರದ ಸನ್ನಿವೇಶ ಸೃಷ್ಟಿ ಆಗುತ್ತದೆ.
ಆದ್ದರಿಂದ ನಮ್ಮ ಹಿತೈಷಿಗಳು ಹಾಗೂ ಅಭಿಮಾನಿಗಳು ತಮ್ಮ ಗಮನವನ್ನು ಪಕ್ಷ ಸಂಘಟನೆಯತ್ತ ಕೇಂದ್ರೀಕರಿಸಬೇಕೆ ಹೊರತು, ಸಮಾಜದ ಹೆಸರಿನಲ್ಲಿ ಸಭೆಗಳನ್ನು ಸಂಘಟಿಸುವ ಪ್ರಯತ್ನಗಳನ್ನು ಈ ಕೂಡಲೇ ನಿಲ್ಲಿಸುವಂತೆ ಈ ಮೂಲಕ ಯತ್ನಾಳ್ ಬಣದ ಚಟುವಟಿಕೆಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ
- ಅಕ್ಷತ