Bengaluru: ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ (BY Vijayendra meeting – partyleaders) ಆರಂಭಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು, ಪಕ್ಷದ

ಪ್ರಮುಖ ನಾಯಕರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಲೋಕಸಭಾ ಚುನಾವಣಾ (Lok Sabha Elections) ಕಾರ್ಯತಂತ್ರ ಮತ್ತು ಟಿಕೆಟ್ ಹಂಚಿಕೆ ಕುರಿತು ಚರ್ಚೆ ನಡೆದಿದೆ.
ಬೆಂಗಳೂರಿನ ರೆಸಾರ್ಟ್ವೊಂದರಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ (Prahlad Joshi) ಕೂಡಾ ಭಾಗಿಯಾಗಿದ್ದು,
ಪ್ರಮುಖವಾಗಿ 9 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗಿದೆ. ಮೂಲಗಳ ಪ್ರಕಾರ, ಬೆಂಗಳೂರು ಉತ್ತರ, (Bangalore North) ಬೆಂಗಳೂರು ಗ್ರಾಮಾಂತರ, ವಿಜಯಪುರ,
ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ, ಹಾವೇರಿ ಚಾಮರಾಜನಗರ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಪರ್ಯಾಯ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ.
ಇನ್ನು ಈ ಸಭೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಮಗನಿಗೆ ಟಿಕೆಟ್ ನೀಡಬೇಕೆಂದು . ಈಶ್ವರಪ್ಪ (Ishwarappa) ಬೇಡಿಕೆ ಮುಂದಿಟ್ಟಿದ್ದಾರೆ. ಆದರೆ ಸರ್ವೇ ಆಧಾರದ ಮೇಲೆ ನಿರ್ಧಾರ
ಕೈಗೊಳ್ಳುವ ಭರವಸೆ ನೀಡಲಾಗಿದೆ. ಇನ್ನು ಸಭೆಯಲ್ಲಿ ಹಿರಿಯ ನಾಯಕ ಡಿವಿ ಸದಾನಂದ ಗೌಡ (DV Sadananda Gowda) ಅವರು ಹಾಜರಿದ್ದರೂ, ತಮ್ಮ ಸ್ಪರ್ಧೆಯ ಬಗ್ಗೆ ಯಾವುದೇ ಸ್ಪಷ್ಟತೆಯನ್ನು

ಅವರು ನೀಡಿಲ್ಲ. ಇನ್ನೊಂದೆಡೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ಮಾಡಲು, ಸಿಪಿ ಯೋಗೇಶ್ವರ್ (CP Yogeshwar) ನಿರಾಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಆದರೆ ಯೋಚಿಸಿ ಅಭಿಪ್ರಾಯ
ಳಿಸುವಂತೆ ಸಿಪಿ ಯೋಗೇಶ್ವರ್ (BY Vijayendra meeting – partyleaders) ಸೂಚಿಸಲಾಗಿದೆ.
ಮೂಲಗಳ ಪ್ರಕಾರ, ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ರಮೇಶ್ ಜಿಗಜಿಗಣಿ, ಬೆಳಗಾವಿ ಮಂಗಳಾ ಅಂಗಡಿ, ಹಾವೇರಿಯ ಶಿವಕುಮಾರ್ ಉದಾಸಿ, ಚಿಕ್ಕಬಳ್ಳಾಪುರ ಬಚ್ಚೇಗೌಡ,
ಚಾಮರಾಜನಗರದ ಶ್ರೀನಿವಾಸ್ ಪ್ರಸಾದ್, ತುಮಕೂರಿನ ಜಿಎಸ್ ಬಸವರಾಜು ಅವರಿಗೆ ಈ ಬಾರಿ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆಯಿದೆ. ಹೀಗಾಗಿಯೇ ಈ ಕ್ಷೇತ್ರಗಳ ಕುರಿತು ರಾಜ್ಯ ಬಿಜೆಪಿ ನಾಯಕರು
ವಿಶೇಷ ಆಸಕ್ತಿ ತೋರಿದ್ದಾರೆ. ತಮಕೂರು ಲೋಕಸಭಾ ಕ್ಷೇತ್ರದಿಂದ ವಿ ಸೋಮಣ್ಣ (V Somanna) ಮತ್ತು ಚಿಕ್ಕಬಳ್ಳಾಪುರದಿಂದ ಎಂಟಿಬಿ ನಾಗರಾಜ್ (MTB Nagaraj) ಅವರನ್ನು ಕಣಕ್ಕಿಳಿಸಲು
ರಾಜ್ಯ ಬಿಜೆಪಿ ನಾಯಕರು ಒಲವು ತೋರಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗಿಲ್ಲ.
ಇದನ್ನು ಓದಿ: ಅಯೋಧ್ಯೆಯಲ್ಲಿ ಭಾರೀ ಭದ್ರತೆ: 30,000 ಯೋಧರು, AI ಕಣ್ಗಾವಲು