Bengaluru: ಸಿದ್ದರಾಮಯ್ಯ ಸರ್ಕಾರವು ರಾಜ್ಯದ ಶಿಕ್ಷಣ (BY Vijayendra slams Siddaramaiah) ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವುದಾಗಿ ಘೋಷಿಸಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ
ಧಾರ್ಮಿಕ ಉಡುಗೆಗೆ (Religious dress) ಅವಕಾಶ ನೀಡುವ ಮೂಲಕ ಯುವ ಮನಸ್ಸುಗಳನ್ನು ಧಾರ್ಮಿಕವಾಗಿ ಒಡೆಯುವುದನ್ನು ಉತ್ತೇಜಿಸುತ್ತಿದೆ. ಇದು ಅಂತರ್ಗತ ಕಲಿಕೆಯ ವಾತಾವರಣವನ್ನು
ತಡೆಯುತ್ತದೆ ಎಂದು ವಿಜಯೇಂದ್ರ ಆಕ್ರೋಶ (BY Vijayendra slams Siddaramaiah) ವ್ಯಕ್ತಪಡಿಸಿದ್ದಾರೆ.
ಇದರ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು (BJP and pro-Hindu organisations) ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಇದು ‘ತುಷ್ಟೀಕರಣ’ ರಾಜಕಾರಣ ಎಂದು
ಬಿಜೆಪಿ ನಾಯಕರು ಕಿಡಿಕಾರಿದ್ದು, ಮೈಸೂರು ಜಿಲ್ಲೆಯ ನಂಜನಗೂಡು (Nanjangudu) ತಾಲೂಕಿನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ, ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಹೊರಡಿಸಿರುವ ಸರ್ಕಾರಿ
ಆದೇಶವನ್ನು ಹಿಂಪಡೆಯುವುದಾಗಿ ಘೋಷಿಸಿದ್ದರು.
ನಮ್ಮ ಸರ್ಕಾರ ಜನರಲ್ಲಿ ಭೇದಭಾವ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದು, ಹಿಂದಿನ ಬಿಜೆಪಿ (BJP) ಸರ್ಕಾರವು ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಅನ್ನು ನಿಷೇಧಿಸಿತ್ತು. ಸರ್ಕಾರದ
ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯದಲ್ಲಿ ಯುವ ಮನಸ್ಸುಗಳನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಗುತ್ತಿದೆ
ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಯುವ ಮನಸ್ಸುಗಳನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಗುತ್ತಿದೆ ಎಂದು ಆರೋಪಿಸಿದ್ದು, ‘ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ
ನಿರ್ಧಾರವು ನಮ್ಮ ಶೈಕ್ಷಣಿಕ ಸಂಸ್ಥೆಗಳ ಜಾತ್ಯತೀತ ಸ್ವರೂಪದ ಬಗ್ಗೆ ಕಳವಳ ಸೃಷ್ಟಿಸುವಂಥದ್ದು. ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಗೆಗೆ ಅವಕಾಶ ನೀಡುವ ಮೂಲಕ ಸಿದ್ದರಾಮಯ್ಯ ಸರ್ಕಾರವು ಯುವ
ಮನಸ್ಸುಗಳನ್ನು ಧಾರ್ಮಿಕವಾಗಿ ಒಡೆಯುವುದನ್ನು ಉತ್ತೇಜಿಸುತ್ತಿದೆ.
ಇದು ಅಂತರ್ಗತ ಕಲಿಕೆಯ ವಾತಾವರಣವನ್ನು ತಡೆಯುತ್ತದೆ. ಧಾರ್ಮಿಕ ಆಚರಣೆಗಳ ಪ್ರಭಾವವಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಗಮನ ಕೇಂದ್ರೀಕರಿಸುವ ವಾತಾವರಣವನ್ನು ನಿರ್ಮಿಸಬೇಕಾದ
ಅಗತ್ಯವಿದೆ’ ಎಂದು ವಿಜಯೇಂದ್ರ ಉಲ್ಲೇಖಿಸಿದ್ದಾರೆ.
ಗ್ಯಾರಂಟಿಗಳಿಂದ ಬರಿದಾದ ಖಜಾನೆ, ಜನರ ದಿಕ್ಕು ತಪ್ಪಿಸಲು ಸಿದ್ದರಾಮಯ್ಯ ತಂತ್ರ: ಅಶೋಕ್
ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ. ಗ್ಯಾರೆಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ,
ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯನವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ
ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ’ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ (R Ashok) ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನು ಓದಿ: ಲೋಕಸಭೆ ಚುನಾವಣೆ : ಕಾಂಗ್ರೆಸ್ನ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯ, ಜಿಗ್ನೇಶ್ ಮೇವಾನಿಗೆ ಸ್ಥಾನ
- ಭವ್ಯಶ್ರೀ ಆರ್ ಜೆ