Visit Channel

ಮಸ್ಕಿ ಕ್ಷೇತ್ರದ ಅಭಿವೃದ್ಧಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ..? ಸಿಎಂ ಬಿಎಸ್ ವೈ ಹೇಳಿಕೆಗೆ ಹೆಚ್.ಡಿ ಕುಮಾರಸ್ವಾಮಿ ಟೀಕೆ

HDk1572246274

ಬೆಂಗಳೂರು, ಮಾ. 22: ಮಸ್ಕಿ ಕ್ಷೇತ್ರದ ಅಭಿವೃದ್ದಿ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ನೀಡಿದ ಹೇಳಿಕೆ ಬಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಸಿಎಂ ಯಡಿಯೂರಪ್ಪ ಇತ್ತೀಚೆಗೆ ಪ್ರಚಾರ ಸಭೆಯಲ್ಲಿ ಹೇಳಿರುವುದು ಗಮನಕ್ಕೆ ಬಂತು. ಮಸ್ಕಿಯಲ್ಲಿ ಶಾಸಕರಾಗಿದ್ದವರ ಮಹಾತ್ಯಾಗದಿಂದ ಬಿಎಸ್‌ವೈ ಅವರಿಗೆ ಅಧಿಕಾರ ಸಿಕ್ಕು 2 ವರ್ಷಗಳಾಗುತ್ತಾ ಬಂದಿವೆ. ಈ ವರೆಗೆ ಯಾಕಾಗಿರಲಿಲ್ಲ ಮಸ್ಕಿಯ ಅಭಿವೃದ್ಧಿ? ಪ್ರಗತಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ? ಎಂದು ಪ್ರಶ್ನಿಸಿದ್ದಾರೆ.

ಹಾಗೆಯೇ ಚುನಾವಣೆ ನಿಗದಿಯಾಗಿದ್ದರಿಂದ ಮಸ್ಕಿ ಅಭಿವೃದ್ಧಿಗೆ ಈಗ ಮುಹೂರ್ತ ಬಂದಿದೆ, ಒಪ್ಪೋಣ. ಆದರೆ, ವರ್ಷದ ಹಿಂದೆಯೇ ಚುನಾವಣೆಗಳಾದ ‘ಬಾಂಬೆ ತಂಡ’ದ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ? ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ ಸಿಎಂ ಯಡಿಯೂರಪ್ಪನವರೇ? ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು ಎಂದು ನಿಮಗಾದರೂ ಅನಿಸದೇ? ಎಂದು ಸಿಎಂ ಬಿಎಸ್ ವೈಗೆ ಎಚ್ಡಿಕೆ ಚಾಟಿ ಬೀಸಿದ್ದಾರೆ.

ಅಲ್ಲದೇ, ಮಸ್ಕಿ ಕ್ಷೇತ್ರವಿರಲಿ, ಬೇರಾವ ಕ್ಷೇತ್ರವೇ ಆಗಿರಲಿ ಅಭಿವೃದ್ಧಿಗೆ ಸರ್ಕಾರದಲ್ಲಿ ಹಣವೆಲ್ಲಿದೆ ಮುಖ್ಯಮಂತ್ರಿಗಳೇ? ರಾಜ್ಯದ ತೆರಿಗೆ ಹಣ, ಜನರ ಬೆವರಿನ ಋಣ ನಿಮ್ಮ ಸರ್ಕಾರದಲ್ಲಿರುವ ‘ಏಕಗವಾಕ್ಷಿ’ಗೆ ಆಪೋಷನವಾಗುತ್ತಿಲ್ಲವೇ? ಚುನಾವಣಾ ಕಾಲದಲ್ಲಿ ಮುಖ್ಯಮಂತ್ರಿ ಮತ್ತು ಅವರ ಸರ್ಕಾರದ ‘ಏಕಗವಾಕ್ಷಿ’ ಆಡುವ ಮಾತುಗಳಿಗೆ ಜನ ಮನ್ನಣೆ ನೀಡಬಾರದು ಎಂದು ಟ್ವೀಟ್ ಮಾಡಿದ್ದಾರೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.