ಬೆಂಗಳೂರು ಆ 19 : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿರುವ ಅಮೃತ ಯೋಜನೆಗೆ ಅನುದಾನ ಒದಗಿಸಲು ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ. ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದರು
ಅಮೃತ ನಿರ್ಮಲ ನಗರ ಯೋಜನೆಯಡಿ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಯೋಜನೆಯ ಅನುಷ್ಠಾನ ಮಾಡಲಾಗುತ್ತದೆ. ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ಸ್ಥಳೀಯ ಸಂಸ್ಥೆಗೆ ತಲಾ 1 ಕೋಟಿ ರೂ. ಗಳಂತೆ 75 ಕೋಟಿ ರೂ. ಗಳ ಅನುದಾನ ನೀಡಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದರು
ರಾಜ್ಯದ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಮೃತ ಆರೋಗ್ಯ ಮೂಲ ಸೌಕರ್ಯ ಉನ್ನತೀಕರಣ ಯೋಜನೆಯಡಿ ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುತ್ತದೆ. ಇದಕ್ಕಾಗಿ 150 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. ಜೊತೆಗೆ ಸುಮಾರು 750 ಅಂಗನವಾಡಿಗಳ ಅಭಿವೃದ್ಧಿಗೆ ಅಮೃತ ಅಂಗನವಾಡಿ ಕೇಂದ್ರ ಯೋಜನೆಯಡಿ ತಲಾ 1 ಲಕ್ಷ ಅನುದಾನ ಕೊಡಲಾಗುತ್ತದೆ. ಅಮೃತ ಸ್ವಸಹಾಯ ಕಿರು ಉದ್ಯಮ ಯೋಜನೆಯಡಿ ತಲಾ 1 ಲಕ್ಷ ರೂ. ಮೂಲಧನವನ್ನು 7500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು, 75 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಅವರು ಹೇಳಿದರು.