ಬೆಂಗಳೂರು,ಜೂ.25: ನಾಡಿನ ಕೋವಿಡ್ ಸ್ಥಿತಿಗತಿ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ “ಕನ್ನಡ, ಕನ್ನಡಿಗ, ಕರ್ನಾಟಕ”ದ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯಪಾಲರು, ಮುಖ್ಯಮಂತ್ರಿ, ವಿಧಾನಸಭಾಧ್ಯಕ್ಷರಿಗೆ ಬರೆದ ಪತ್ರ ಬರೆದಿದ್ದಾರೆ.
ಹಲವು ವಿಚಾರಗಳ ಬಗ್ಗೆ ಚರ್ಚಿಸಲು ತಕ್ಷಣವೇ ವಿಶೇಷ ಅಧಿವೇಶನ ಕರೆಯಿರಿ ಎಂದು ಸಿಎಂ, ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಹೆಚ್.ಡಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ, ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮುಂತಾದ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಿರಿ ಎಂದು ಸಿಎಂ, ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.