ಕೆನಡಾ ಚುನಾವಣೆ : ಜಸ್ಟಿನ್ ಟ್ರುಡೋ ಪಕ್ಷಕ್ಕೆ ಭರ್ಜರಿ ಗೆಲುವು, ಮೋದಿ ಅವರಿಂದ ಅಭಿನಂದನೆ

ನವದೆಹಲಿ ಸೆ 22 : ಕೆನಡಾದ ಮಾಜಿ ಪ್ರಧಾನಿ ಪಿರೆ ಎಲಿಯಟ್ ಟ್ರುಡೋ ಅವರ ಪುತ್ರ ಜಸ್ಟಿನ್ ಟ್ರುಡೋ ಅವರ ಲಿಬರಲ್ ಪಕ್ಷ ಕೆನಾಡದ ಸಂಸದೀಯ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದೆ. ಈ ಚುನಾವಣೆಯಲ್ಲಿ ಲಿಬರಲ್ಸ್ 148 ಸ್ಥಾನಗಳನ್ನು ಗಳಿಸಿದೆ. ಕನ್ಸರ್ವಟಿವ್ 103, ಕ್ವೆಬೆಕ್ ಆಧಾರಿತ ಬ್ಲಾಕ್ ಕ್ವೆಬೆಕಿಯನ್ನರು 28 ಹಾಗೂ ಎಡಪಕ್ಷಗಳು 22 ಸ್ಥಾನ ಗಳಿಸಿವೆ.

ಟ್ರುಡೋ ಒಬ್ಬ ಬಾಕ್ಸರ್, ಜೊತೆಗೆ ಉತ್ತಮ ನಟ ಕೂಡ ಆಗಿದ್ದು ಅವರನ್ನು 2008 ರ ಚುನಾವಣೆಯಲ್ಲಿ ಪ್ಯಾಪಿನಿಯೋ ಜಿಲ್ಲೆಯಿಂದ ಆಯ್ಕೆಮಾಡಲಾಗಿತ್ತು. 2009 ರಲ್ಲಿ ಅವರನ್ನು ಲಿಬರಲ್ ಪಕ್ಷದ ವಕ್ತಾರರನ್ನಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವಕರ ಪ್ರತಿನಿಧಿಯಾಗಿ ಟ್ರುಡೋ ಮಾಡಿದ ಕೆಲಸವನ್ನು ಮೆಚ್ಚಿ ಪಕ್ಷ ಅವರನ್ನು ಗುರುತಿಸಿತ್ತು. ನಂತರ ಅವರನ್ನು ಲಿಬರಲ್ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ಚುನಾವಣೆಯಲ್ಲಿ ಜಯಗಳಿಸಿದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದನೆಗಳನ್ನು ತಿಳಿಸಿದ್ದಾರೆ  ಈ ಬಗ್ಗೆ ಟ್ವೀಟ್ ಮಾಡಿದ ಅವರು ಪ್ರಧಾನಮಂತ್ರಿ ಜಸ್ಟಿನ್ ಟ್ರೂಡೊ ಅವರಿಗೆ ಚುನಾವಣಾ ಗೆಲುವಿಗಾಗಿ ಅಭಿನಂದನೆಗಳು. ಭಾರತ-ಕೆನಡಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ ಮತ್ತು ಬಹುಪಕ್ಷೀಯ ವಿಷಯಗಳಲ್ಲಿ ನಮ್ಮ ಸಹಕಾರವನ್ನು ಹೆಚ್ಚಿಸಲು ನಿಮ್ಮೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Latest News

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.

ರಾಜಕೀಯ

1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ : ಹೆಚ್‍ಡಿಕೆ

ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು.

ದೇಶ-ವಿದೇಶ

8ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ; `ಜನಾದೇಶಕ್ಕೆ ದ್ರೋಹʼ : ಬಿಜೆಪಿ

164 ಶಾಸಕರ ಪಟ್ಟಿಯನ್ನು ಸಲ್ಲಿಸಿ, ಬಿಹಾರದಲ್ಲಿ ಹೊಸ ಸರ್ಕಾರ ರಚಿಸಲು ಏಳು ಪಕ್ಷಗಳ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ನಿತೀಶ್ ಕುಮಾರ್ ಇಂದು ಎಂಟನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.