New Delhi: ಜಾತಿ ವಿಷಯವಾಗಿ ಜೈಲುಗಳಲ್ಲಿ (Jail) ಖೈದಿಗಳ ಜಾತಿ ನೋಡಿ ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ @SupreemCourt ಕೇಂದ್ರ ಮತ್ತು 11 ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ #DYChandrachud ನೇತೃತ್ವದ ಪೀಠವು ಕೇಂದ್ರದ ಪರವಾಗಿ ನ್ಯಾಯಾಲಯಕ್ಕೆ ಸಹಾಯ ಮಾಡಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೋರಿದ್ದು”ಇದು ಅತ್ಯಂತ ಗಂಭೀರ ವಿಷಯ” ಎಂದಿದ್ದಾರೆ. ಜೈಲುಗಳಲ್ಲಿ ಜಾತಿಗಳ ಆಧಾರದ ಮೇಲೆ ಮ್ಯಾನುಯಲ್ ಕೆಲಸಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಜಾತಿ (Caste) ಆಧಾರದ ಮೇಲೆ ಕೈದಿಗಳನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿವೆ.
ಇದೊಂದು ಗಂಭೀರ ಸಮಸ್ಯೆಯಾಗಿ ಮಾರ್ಪಟ್ಟಿದೆ. ಈ ಕೂಡಲೇ ಇದರ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕು,” ಎಂದು ಕೋರಿ ಮಹಾರಾಷ್ಟ್ರದ (Maharashtra) ಕಲ್ಯಾಣ್ ನಿವಾಸಿ ಸುಕನ್ಯಾ ಶಾಂತ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಮಧ್ಯಪ್ರದೇಶ, ದೆಹಲಿ ಮತ್ತು ತಮಿಳುನಾಡು (Madhya Pradesh, Delhi And Tamilnadu) ಜೈಲುಗಳ ಕೆಲವು ನಿದರ್ಶನಗಳನ್ನು ಅರ್ಜಿಯು ಎತ್ತಿ ತೋರಿಸಿದ ಅವರು, ಈ ರಾಜ್ಯಗಳ ಜೈಲುಗಳಲ್ಲಿ ಪ್ರಬಲ ಜಾತಿಯ ಖೈದಿಗಳಿಗೆ ಅಡುಗೆ ಕೆಲಸ ಕೊಟ್ಟರೆ, ಗುಡಿಸುವುದು, ಶೌಚಾಲಯ ಸ್ವಚ್ಛಗೊಳಿಸುವಂತಹ ಕೆಲಸಗಳನ್ನು ನಿರ್ದಿಷ್ಟ ದುರ್ಬಲ ಜಾತಿಯ ಖೈದಿಗಳಿಗೆ ನೀಡಲಾಗ್ತಿದೆ ಎಂದು ಹೇಳಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಕೇಂದ್ರ ಸರಕಾರ ಹಾಗೂ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಜಾರ್ಖಂಡ್, ಒಡಿಶಾ (Andhra Pradesh, Telangana, Jharkhand, Odisha), ತಮಿಳುನಾಡು, ಪಂಜಾಬ್, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ನೋಟಿಸ್ (Notice) ಜಾರಿಗೊಳಿಸಿದೆ.
ಜಾತಿ ಆಧಾರಿತ ಖೈದಿ (Prisoner) ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದ್ದು, ಜೈಲುಗಳಲ್ಲಿ ಜಾತಿ ಆಧಾರಿತ ಖೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ.
2003ರ ಮಾದರಿ ಜೈಲು ಕೈಪಿಡಿಯು ಭದ್ರತೆ, ಶಿಸ್ತು ಮತ್ತು ಸಾಂಸ್ಥಿಕ ಕಾರ್ಯಕ್ರಮದ ಆಧಾರದ ಮೇಲೆ ವರ್ಗೀಕರಣವನ್ನು ಮಾಡಬೇಕು ಎಂದು ಸ್ಪಷ್ಟವಾಗಿ ಹೇಳುತ್ತದೆ. ಆದರೆ, ಸಾಮಾಜಿಕ-ಆರ್ಥಿಕ ಸ್ಥಿತಿ, ಜಾತಿ ಅಥವಾ ವರ್ಗದ ಆಧಾರದ ಮೇಲೆ ಖೈದಿಗಳನ್ನು ವರ್ಗೀಕರಣ ಮಾಡಬೇಕು ಎಂದಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಭವ್ಯಶ್ರೀ ಆರ್ ಜೆ