ಜಾತಿ ಗಣತಿಯಲ್ಲಿ ಯಾವುದೇ ಗೊಂದಲಗಳಿಲ್ಲ – ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು ಸೆ 8 : ರಾಜ್ಯದಲ್ಲಿ ಜಾತಿ  ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ‌ಕ್ಕೆ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ವರದಿ ಕುರಿತು ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಮತ್ತು ಈ ಹಿಂದೆ ಇದ್ದ ಯಾವುದೇ ಗೊಂದಲಕ್ಕೆ ನಾವು ಜವಾಬ್ದಾರರಲ್ಲ. ಪರಿಶಿಷ್ಟ ಜಾತಿಯ ಸುಮಾರು 1.27 ಕೋಟಿ ಜನರಿಗೆ ಎಲ್ಲಾ ಮೂಲಭೂತ ಸೌಕರ್ಯಗಳು, ಮನೆ, ಕುಡಿಯುವ ನೀರು, ವಿದ್ಯುತ್ ಮತ್ತು ಆಸ್ತಿ ದಾಖಲೆಗಳನ್ನು ಒದಗಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ. 

ಜಾತಿ ಗಣತಿಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿದ ಬಳಿಕ ರಾಜ್ಯ ಕ್ಯಾಬಿನೆಟ್ ಅದರ ಪರಿಶೀಲನೆಯನ್ನು ನಡೆಸಲಿದೆ ಎಂದು ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು.ಮತ್ತು ಸದಸ್ಯರು ಆ ವರದಿ ಪರಿಶೀಲಿಸಿ ಸಹಿ ಹಾಕಿದ ಬಳಿಕ ಆ ವರದಿ ಸರ್ಕಾರ‌ಕ್ಕೆ ಸಲ್ಲಿಕೆಯಾಗಲಿದೆ. ಆ ಬಳಿಕ ಕ್ಯಾಬಿನೆಟ್ ಅದನ್ನು ಪರಿಶೀಲಿಸುವುದಾಗಿ ಅವರು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ‌ಯಾಗಿದ್ದ ಸಂದರ್ಭದಲ್ಲಿ ಜಾತಿ ಗಣತಿಯ ಹಿನ್ನೆಲೆಯಲ್ಲಿ 162 ಕೋಟಿ ರೂ. ಖರ್ಚು ಮಾಡಿದ್ದರು. ಅದನ್ನೇಕೆ ಬಿಡುಗಡೆ ಮಾಡಲಿಲ್ಲ ಎಂದು ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಜಾತಿ ಗಣತಿಗೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ‌. ಈ ಹಿಂದೆ ಇದ್ದ ಗೊಂದಲಗಳಿಗೆ ಈಗಿನ ಸರ್ಕಾರ ಜವಾಬ್ದಾರಿ ಅಲ್ಲ ಎಂಬುದನ್ನು ಸಹ ಪೂಜಾರಿ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.

ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ಆಯೋಗದ ಸದಸ್ಯರು, ಕಾರ್ಯದರ್ಶಿಗಳು ವರದಿಗೆ ಸಹಿ ಹಾಕಿಲ್ಲ. ವರದಿಯನ್ನು ಪರಿಶೀಲಿಸಲು ಅವರಿಗೂ ಕಾಲಾವಕಾಶ ಬೇಕಿದೆ ಎಂದು ತಿಳಿಸಿದ್ದಾರೆ

Exit mobile version